ಕೆಎಲ್ ರಾಹುಲ್ ಅಥವಾ ಹಾರ್ದಿಕ್ ಪಾಂಡ್ಯಗೆ ಟೀಮ್ ಇಂಡಿಯಾ ನಾಯಕತ್ವ

Team Indai: ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದ ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದರು. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಪಾಂಡ್ಯ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಇನ್ನು ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯದಿದ್ದ ಕೆಎಲ್ ರಾಹುಲ್ ಇದೀಗ ಕಂಬ್ಯಾಕ್ ಮಾಡಲು ಸಜ್ಜಾಗಿ ನಿಂತಿದ್ದಾರೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎಂದೇ ಹೇಳಬಹುದು.

ಕೆಎಲ್ ರಾಹುಲ್ ಅಥವಾ ಹಾರ್ದಿಕ್ ಪಾಂಡ್ಯಗೆ ಟೀಮ್ ಇಂಡಿಯಾ ನಾಯಕತ್ವ
Hardik Pandya - KL Rahul
Follow us
|

Updated on: Jul 09, 2024 | 7:20 AM

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ (KL Rahul) ಅಥವಾ ಹಾರ್ದಿಕ್ ಪಾಂಡ್ಯ (Hardik Pandya) ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ಈ ಸರಣಿಯಿಂದ ಭಾರತ ತಂಡದ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಜಸ್​ಪ್ರೀತ್ ಬುಮ್ರಾ ವಿಶ್ರಾಂತಿಯ ಕಾರಣ ಹೊರಗುಳಿಯಲಿದ್ದಾರೆ. ಹೀಗಾಗಿ ಏಕದಿನ ತಂಡವನ್ನು ರೋಹಿತ್ ಶರ್ಮಾ ಬದಲಿಗೆ ಕೆಎಲ್ ರಾಹುಲ್ ಅಥವಾ ಹಾರ್ದಿಕ್ ಪಾಂಡ್ಯ ಮುನ್ನಡೆಸುವ ಸಾಧ್ಯತೆಯಿದೆ.

ಝಿಂಬಾಬ್ವೆ ಸರಣಿ ಬಳಿಕ ಭಾರತ ತಂಡವು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಮತ್ತು 3 ಏಕದಿನ ಪಂದ್ಯಗಳನ್ನಾಡಲಿದೆ. ಇಲ್ಲಿ ಏಕದಿನ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುವ ಸಾಧ್ಯತೆಯಿದ್ದರೆ, ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಭಾರತ ಟಿ20 ತಂಡದ ನಾಯಕರಾಗಿ ಪಾಂಡ್ಯ ಕಾಣಿಸಿಕೊಂಡಿದ್ದರು.

ಆದರೆ ಈ ಬಾರಿಯ ಟಿ20 ವಿಶ್ವಕಪ್​ಗೂ ಮುನ್ನ ರೋಹಿತ್ ಶರ್ಮಾ ಅವರಿಗೆ ನಾಯಕತ್ವ ನೀಡಲಾಗಿತ್ತು. ಇದೀಗ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಹಿಟ್​ಮ್ಯಾನ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ.

ಅತ್ತ ಟಿ20 ವಿಶ್ವಕಪ್​ನಲ್ಲಿ ಹಾರ್ದಿಕ್ ಪಾಂಡ್ಯ ಉಪನಾಯಕನಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಭಾರತ ಟಿ20 ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಹಾಗೆಯೇ ಏಕದಿನ ತಂಡದ ಹಂಗಾಮಿ ನಾಯಕರಾಗಿ ಕೆಎಲ್ ರಾಹುಲ್ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.

ಭಾರತ – ಶ್ರೀಲಂಕಾ ಸರಣಿ ಯಾವಾಗ?

ಭಾರತ ಮತ್ತು ಶ್ರೀಲಂಕಾ ನಡುವಣ 6 ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಇನ್ನೂ ಸಹ ನಿಗದಿ ಮಾಡಲಾಗಿಲ್ಲ. ಇದಾಗ್ಯೂ ಟೂರ್ನಿಯನ್ನು ಜುಲೈ 27 ರಿಂದ ಆಗಸ್ಟ್ 7 ರ ನಡುವೆ ನಡೆಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ ಎಂದು ವರದಿಯಾಗಿದೆ. ಹೀಗಾಗಿ ಇದೇ ಅವಧಿಯಲ್ಲಿ ಆರು ಪಂದ್ಯಗಳು ನಡೆಯುವ ಸಾಧ್ಯತೆಯಿದೆ.

ಕ್ಯಾಪ್ಟನ್ ರೋಹಿತ್ ಶರ್ಮಾ:

ಮುಂಬರುವ ಚಾಂಪಿಯನ್ಸ್ ಟ್ರೋಫಿವರೆಗೆ ಭಾರತ ಏಕದಿನ ತಂಡದ ನಾಯಕರಾಗಿ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ದೃಢಪಡಿಸಿದ್ದಾರೆ. ಹೀಗಾಗಿ 2025 ರವರೆಗೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್ಸ್ ಫೈನಲ್​ವರೆಗೆ ರೋಹಿತ್ ಶರ್ಮಾ ಟೆಸ್ಟ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕವಷ್ಟೇ ಭಾರತ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎನ್ನಬಹುದು.