AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ಫುಲ್ ಫಿಟ್: ಶೀಘ್ರದಲ್ಲೇ ಶ್ರೀಲಂಕಾಗೆ..!

Asia Cup 2023: ಕೆಎಲ್ ರಾಹುಲ್ ಭಾನುವಾರ ಅಥವಾ ಸೋಮವಾರ ಶ್ರೀಲಂಕಾಗೆ ತಲುಪಿದರೂ ಅವರು ನೇಪಾಳ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಏಕೆಂದರೆ ಭಾರತ-ನೇಪಾಳ ನಡುವಣ ಪಂದ್ಯವು ಸೆಪ್ಟೆಂಬರ್ 4 ರಂದು ನಡೆಯಲಿದ್ದು, ಈ ಪಂದ್ಯಕ್ಕೆ ಅವರು ಅಲಭ್ಯರಾಗುವುದು ಖಚಿತವಾಗಿದೆ.

KL Rahul: ಕೆಎಲ್ ರಾಹುಲ್ ಫುಲ್ ಫಿಟ್: ಶೀಘ್ರದಲ್ಲೇ ಶ್ರೀಲಂಕಾಗೆ..!
KL Rahul
TV9 Web
| Edited By: |

Updated on: Sep 03, 2023 | 6:04 PM

Share

ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕೆಎಲ್ ರಾಹುಲ್ (KL Rahul) ಫಿಟ್​ನೆಸ್ ಟೆಸ್ಟ್​ನಲ್ಲಿ ಪಾಸಾಗಿದ್ದಾರೆ. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಫಿಟ್​ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಈ ಮೂಲಕ ಕ್ಲಿಯರೆನ್ಸ್ ಪಡೆದುಕೊಂಡಿದ್ದಾರೆ. ಈ ಕ್ಲಿಯರೆನ್ಸ್​​ನೊಂದಿಗೆ ಕೆಎಲ್ ರಾಹುಲ್ ಇದೀಗ ಶ್ರೀಲಂಕಾಗೆ ತೆರಳಲು ಅಣಿಯಾಗಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ಏಷ್ಯಾಕಪ್​ಗೆ ಆಯ್ಕೆ ಮಾಡಲಾಗಿದ್ದ ಟೀಮ್ ಇಂಡಿಯಾದಲ್ಲಿ ಕೆಎಲ್ ರಾಹುಲ್ ಕೂಡ ಸ್ಥಾನ ಪಡೆದಿದ್ದರು. ಆದರೆ ಅವರು ಸಂಪೂರ್ಣ ಫಿಟ್​ನೆಸ್ ಹೊಂದಿಲ್ಲದ ಕಾರಣ ಭಾರತ ತಂಡದೊಂದಿಗೆ ಶ್ರೀಲಂಕಾಗೆ ಪ್ರಯಾಣಿಸಿರಲಿಲ್ಲ.

ಇದೇ ಕಾರಣದಿಂದಾಗಿ ಪಾಕಿಸ್ತಾನ್ ಹಾಗೂ ನೇಪಾಳ ವಿರುದ್ಧದ ಪಂದ್ಯಕ್ಕೆ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ ಎಂದು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದರು. ಇದೀಗ ನ್ಯಾಷನಲ್ ಆಕಾಡೆಮಿಯಲ್ಲಿ ನಡೆದ ಫಿಟ್​ನೆಸ್ ಟೆಸ್ಟ್​ನಲ್ಲಿ ರಾಹುಲ್ ಸಂಪೂರ್ಣ ಫಿಟ್​ನೆಸ್ ಹೊಂದಿರುವುದು ಸಾಬೀತಾಗಿದೆ.

ಹೀಗಾಗಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳಲು ಅವರಿಗೆ ಕ್ಲಿಯರೆನ್ಸ್ ನೀಡಲಾಗಿದೆ. ಅದರಂತೆ ಭಾನುವಾರ ಅಥವಾ ಸೋಮವಾರ ಕೆಎಲ್ ರಾಹುಲ್ ಶ್ರೀಲಂಕಾಗೆ ಪ್ರಯಾಣಿಸುವ ಸಾಧ್ಯತೆಯಿದೆ.

ಸೂಪರ್-4 ಹಂತದಲ್ಲಿ ಕಣಕ್ಕೆ:

ಕೆಎಲ್ ರಾಹುಲ್ ಭಾನುವಾರ ಅಥವಾ ಸೋಮವಾರ ಶ್ರೀಲಂಕಾಗೆ ತಲುಪಿದರೂ ಅವರು ನೇಪಾಳ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಏಕೆಂದರೆ ಭಾರತ-ನೇಪಾಳ ನಡುವಣ ಪಂದ್ಯವು ಸೆಪ್ಟೆಂಬರ್ 4 ರಂದು ನಡೆಯಲಿದ್ದು, ಈ ಪಂದ್ಯಕ್ಕೆ ಅವರು ಅಲಭ್ಯರಾಗುವುದು ಖಚಿತವಾಗಿದೆ.

ಇನ್ನು ನೇಪಾಳ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ಅವರು ಸೂಪರ್-4 ಹಂತದಲ್ಲಿ ಕಣಕ್ಕಿಳಿಯಲಿದ್ದಾರೆ. ಅಂದರೆ ಟೀಮ್ ಇಂಡಿಯಾ ಸೂಪರ್ ಫೋರ್ ಹಂತಕ್ಕೇರಿದರೆ ಸೆಪ್ಟೆಂಬರ್ 10 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ