Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಕೆಣಕಿದ ಯಾನ್ಸೆನ್: ನಗುವಲ್ಲೇ ಬಾಯಿ ಮುಚ್ಚಿಸಿದ ರಾಹುಲ್

India vs South Africa 1st Test: ಮೊದಲ ದಿನದಾಟದಲ್ಲಿ 105 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 10 ಫೋರ್ ಹಾಗೂ 2 ಭರ್ಜರಿ ಸಿಕ್ಸ್​ನೊಂದಿಗೆ ಅಜೇಯ 70 ರನ್​ ಬಾರಿಸಿದ್ದಾರೆ. ಕೆಎಲ್​ಆರ್​ ಅವರ ಈ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 8 ವಿಕೆಟ್​ ಕಳೆದುಕೊಂಡು 208 ರನ್​ ಕಲೆಹಾಕಿದೆ.

VIDEO: ಕೆಣಕಿದ ಯಾನ್ಸೆನ್: ನಗುವಲ್ಲೇ ಬಾಯಿ ಮುಚ್ಚಿಸಿದ ರಾಹುಲ್
KL Rahul - Marco Jansen
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 27, 2023 | 7:48 AM

ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಮೊದಲ ಟೆಸ್ಟ್​ ಪಂದ್ಯದ ಮೊದಲ ದಿನವೇ ರಣರೋಚಕ ಹೋರಾಟ ಕಂಡು ಬಂದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೆಂಬಾ ಬವುಮಾ ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ರೋಹಿತ್ ಶರ್ಮಾ (5) ಹಾಗೂ ಯಶಸ್ವಿ ಜೈಸ್ವಾಲ್ (17) ಬೇಗನೆ ಔಟಾದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ (2) ಕೂಡ ಬಂದ ವೇಗದಲ್ಲೇ ಹಿಂತಿರುಗಿದ್ದರು. ಈ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಶ್ರೇಯಸ್ ಅಯ್ಯರ್ (31) ಹಾಗೂ ವಿರಾಟ್ ಕೊಹ್ಲಿ (38) ಟೀಮ್ ಇಂಡಿಯಾವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಇದಾಗ್ಯೂ ಕಗಿಸೊ ರಬಾಡ ಹಾಗೂ ನಾಂಡ್ರೆ ಬರ್ಗರ್​ ಅವರ ಕರಾರುವಾಕ್ ದಾಳಿಯಿಂದಾಗಿ ಟೀಮ್ ಇಂಡಿಯಾ 107 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಹಂತದಲ್ಲಿ ಕ್ರೀಸ್​ಗೆ ಆಗಮಿಸಿದ ಕೆಎಲ್ ರಾಹುಲ್ ಕ್ಲಾಸ್ ಬ್ಯಾಟಿಂಗ್ ಪ್ರದರ್ಶಿಸಿದರು.

ಸೌತ್ ಆಫ್ರಿಕಾ ವೇಗಿಗಳಿಗೆ ಭರ್ಜರಿ ಬ್ಯಾಟಿಂಗ್ ಮೂಲಕವೇ ಪ್ರತ್ಯುತ್ತರ ನೀಡಿದ ರಾಹುಲ್ ರನ್​ಗಳಿಸುತ್ತಾ ಸಾಗಿದರು. ಅತ್ತ ಆರಂಭಿಕ ಮೇಲುಗೈ ಸಾಧಿಸಿದ್ದ ಬೌಲರ್​ಗಳು ರಾಹುಲ್ ಅವರ ಅತ್ಯುತ್ತಮ ಬ್ಯಾಟಿಂಗ್​ನಿಂದ ಹೈರಾಣರಾಗಿದ್ದರು.

ಅದರಲ್ಲೂ ಎಡಗೈ ವೇಗಿ ಮಾರ್ಕೊ ಯಾನ್ಸೆನ್ ಎಸೆತಗಳಲ್ಲಿ ರಾಹುಲ್ ಸಿಕ್ಸ್​-ಫೋರ್​ಗಳನ್ನು ಬಾರಿಸುವ ಮೂಲಕ ಅಬ್ಬರಿಸಿದರು. ಮೊದಲೇ ವಿಕೆಟ್ ಸಿಗದೇ ಕಂಗೆಟ್ಟಿದ್ದ ಯಾನ್ಸೆನ್ ಇದರಿಂದ ಕುಪಿತಗೊಂಡಿದ್ದಾರೆ. ಅಷ್ಟೇ ಅಲ್ಲದೆ ಕೆಎಲ್ ರಾಹುಲ್ ಅವರನ್ನು ಕೆಣಕಲು ಪ್ರಾರಂಭಿಸಿದ್ದಾರೆ.

ಆದರೆ ಮಾರ್ಕೊ ಯಾನ್ಸೆನ್ ಹಲವು ಬಾರಿ ನಾಲಿಗೆ ಹರಿಬಿಟ್ಟರೂ ಕೆಎಲ್ ರಾಹುಲ್ ಶಾಂತವಾಗಿಯೇ ಇದ್ದರು. ಅದರಲ್ಲೊಮ್ಮೆ ನೇರವಾಗಿ ನೋಡಿ ಸ್ಲೆಡ್ಜ್​ ಮಾಡಿದರೂ ರಾಹುಲ್ ನಗುವಿನೊಂದಿಗೆ ಪ್ರತಿಕ್ರಿಯಿಸಿದ್ದು ವಿಶೇಷವಾಗಿತ್ತು. ಇದೀಗ ಕೆಎಲ್​ಆರ್​ ಅವರ ಈ ಸ್ಮೈಲಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೆಎಲ್ ಕ್ಲಾಸಿಕ್ ಬ್ಯಾಟಿಂಗ್​:

ಮೊದಲ ದಿನದಾಟದಲ್ಲಿ 105 ಎಸೆತಗಳನ್ನು ಎದುರಿಸಿದ ಕೆಎಲ್ ರಾಹುಲ್ 10 ಫೋರ್ ಹಾಗೂ 2 ಭರ್ಜರಿ ಸಿಕ್ಸ್​ನೊಂದಿಗೆ ಅಜೇಯ 70 ರನ್​ ಬಾರಿಸಿದ್ದಾರೆ. ಕೆಎಲ್​ಆರ್​ ಅವರ ಈ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 8 ವಿಕೆಟ್​ ಕಳೆದುಕೊಂಡು 208 ರನ್​ ಕಲೆಹಾಕಿದೆ. ಸದ್ಯ 2ನೇ ದಿನದಾಟಕ್ಕೆ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: IPL 2024: ಹಾರ್ದಿಕ್ ಪಾಂಡ್ಯಗಾಗಿ 100 ಕೋಟಿ ರೂ. ನೀಡಿದ ಮುಂಬೈ ಇಂಡಿಯನ್ಸ್..!

ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಡೀನ್ ಎಲ್ಗರ್, ಐಡೆನ್ ಮಾರ್ಕ್ರಾಮ್, ಟೋನಿ ಡಿ ಝೋರ್ಝಿ, ಟೆಂಬಾ ಬವುಮಾ (ನಾಯಕ), ಕೀಗನ್ ಪೀಟರ್ಸನ್, ಡೇವಿಡ್ ಬೆಡಿಂಗ್ಹ್ಯಾಮ್, ಕೈಲ್ ವೆರ್ರೆನ್ನೆ (ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯೆಟ್ಝಿ, ಕಗಿಸೊ ರಬಾಡ, ನಾಂಡ್ರೆ ಬರ್ಗರ್.

ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ