AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕೆಎಲ್ ರಾಹುಲ್ ಗುಡ್​ ಬೈ? ವೈರಲ್ ಆಗುತ್ತಿರುವ ಇನ್ಸ್​ಟಾ ಪೋಸ್ಟ್ ನಕಲಿಯೋ, ಅಸಲಿಯೋ?

KL Rahul: ಕೆಎಲ್ ರಾಹುಲ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವದಂತಿಯೊಂದು ಹರಿದಾಡಲಾರಂಭಿಸಿದೆ. ಕೆಎಲ್ ರಾಹುಲ್​ ಅವರದ್ದೇ ಎಂದು ಬಿಂಬಿಸಿರುವ ಇನ್ಸಟಾಗ್ರಾಮ್ ಪೋಸ್ಟ್​ವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಪೋಸ್ಟ್​ನಲ್ಲಿ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಬಗ್ಗೆ ಮಾಹಿತಿ ಇದೆ.

KL Rahul: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕೆಎಲ್ ರಾಹುಲ್ ಗುಡ್​ ಬೈ? ವೈರಲ್ ಆಗುತ್ತಿರುವ ಇನ್ಸ್​ಟಾ ಪೋಸ್ಟ್ ನಕಲಿಯೋ, ಅಸಲಿಯೋ?
ಕೆಎಲ್ ರಾಹುಲ್
ಪೃಥ್ವಿಶಂಕರ
|

Updated on: Aug 22, 2024 | 10:18 PM

Share

ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್, ಕನ್ನಡಿಗ ಕೆಎಲ್ ರಾಹುಲ್ ಬಹಳ ದಿನಗಳ ನಂತರ ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. 2024 ರ ಐಪಿಎಲ್ ವೇಳೆ ಇಂಜುರಿಗೆ ತುತ್ತಾಗಿದ್ದ ರಾಹುಲ್, ಚೇತರಿಸಿಕೊಂಡ ನಂತರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದರು. ಆದರೆ ಲಂಕಾ ವಿರುದ್ಧದ ಸರಣಿಯಲ್ಲಿ ರಾಹುಲ್ ಪ್ರದರ್ಶನ ಅಷ್ಟಕಷ್ಟೆಯಾಗಿತ್ತು. ಹೀಗಾಗಿ ಮೂರನೇ ಏಕದಿನ ಪಂದ್ಯದಿಂದ ರಾಹುಲ್​ರನ್ನು ತಂಡದಿಂದ ಕೈಬಿಡಲಾಗಿತ್ತು. ಲಂಕಾ ವಿರುದ್ಧದ ಸರಣಿಯಲ್ಲಿ ಕಳಪೆ ಪ್ರದರ್ಶನ ತೋರಿದ ರಾಹುಲ್​ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಕಷ್ಟಕರ ಎಂದು ಹೇಳಲಾಗುತ್ತಿದೆ. ಇದೆಲ್ಲದರ ನಡುವೆ, ಕೆಎಲ್ ರಾಹುಲ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವದಂತಿಯೊಂದು ಹರಿದಾಡಲಾರಂಭಿಸಿದೆ. ಕೆಎಲ್ ರಾಹುಲ್​ ಅವರದ್ದೇ ಎಂದು ಬಿಂಬಿಸಿರುವ ಇನ್ಸಟಾಗ್ರಾಮ್ ಪೋಸ್ಟ್​ವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಪೋಸ್ಟ್​ನಲ್ಲಿ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಬಗ್ಗೆ ಮಾಹಿತಿ ಇದೆ.

ವೈರಲ್ ಪೋಸ್ಟ್​ನಲ್ಲಿ ಇರುವುದೇನು?

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಇನ್‌ಸ್ಟಾಗ್ರಾಮ್ ಪೋಸ್ಟ್​ನಲ್ಲಿ, ‘ಸಾಕಷ್ಟು ಯೋಚಿಸಿದ ಬಳಿಕ ನಾನು ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಈ ನಿರ್ಧಾರವು ಸುಲಭವಲ್ಲ, ಏಕೆಂದರೆ ಅನೇಕ ವರ್ಷಗಳಿಂದ ಕ್ರಿಕೆಟ್ ನನ್ನ ಜೀವನದ ಪ್ರಮುಖ ಭಾಗವಾಗಿದೆ. ನನ್ನ ವೃತ್ತಿಜೀವನದುದ್ದಕ್ಕೂ ನನ್ನನ್ನು ಬೆಂಬಲಿಸಿದ ನನ್ನ ಕುಟುಂಬ, ಸ್ನೇಹಿತರು, ತಂಡದ ಸಹ ಆಟಗಾರರು ಮತ್ತು ಅಭಿಮಾನಿಗಳಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಮೈದಾನದ ಒಳಗೆ ಮತ್ತು ಹೊರಗೆ ನಾನು ಪಡೆದ ಅನುಭವಗಳು ಮತ್ತು ನೆನಪುಗಳು ನಿಜವಾಗಿಯೂ ಬೆಲೆಕಟ್ಟಲಾಗದವು. ನನ್ನ ದೇಶವನ್ನು ಪ್ರತಿನಿಧಿಸಲು ಮತ್ತು ಅನೇಕ ಪ್ರತಿಭಾವಂತ ಕ್ರಿಕೆಟಿಗರೊಂದಿಗೆ ಆಡಿದ್ದು ನನಗೆ ಹೆಮ್ಮೆ ತಂದಿದೆ. ಈ ಅದ್ಭುತ ಪ್ರಯಾಣದ ಭಾಗವಾಗಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದಿದೆ.

ರಾಹುಲ್ ಅವರ ಅಸಲಿ ಪೋಸ್ಟ್​ನಲ್ಲಿ ಇರುವುದೇನು?

ವಾಸ್ತವವಾಗಿ ಕೆಎಲ್ ರಾಹುಲ್​ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವುದು ನಿಜ. ಆದರೆ ಆ ಪೋಸ್ಟ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯಕ್ಕೆ ಸಂಬಂಧಿಸಿದಲ್ಲ. ಬದಲಿಗೆ ರಾಹುಲ್ ಅವರ ಪೋಸ್ಟ್​ನಲ್ಲಿರುವುದೇನೆಂದರೆ… ‘ನಾನು ನಿಮ್ಮ ಬಳಿ ಏನ್ನನ್ನೋ ಹೇಳಬೇಕಿದೆ.. ಕಾಯುತ್ತಿರಿ‘ (I have an announcement to make, stay tuned) ಎಂದು ಬರೆದುಕೊಂಡಿದ್ದಾರೆ. ಆದರೆ ರಾಹುಲ್ ಅವರ ಈ ಪೋಸ್ಟ್ ಅನ್ನು ತಿರುಚಿರುವ ಕಿಡಿಗೇಡಿಗಳು ರಾಹುಲ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ ಎಂಬ ವದಂತಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿಸಲಾರಂಭಿಸಿದ್ದಾರೆ.

Image

ರಾಹುಲ್ ಕ್ರಿಕೆಟ್ ವೃತ್ತಿಜೀವನ

2014 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟ ಕೆಎಲ್ ರಾಹುಲ್ ಇದುವರೆಗೆ ಟೀಂ ಇಂಡಿಯಾ ಪರ 50 ಟೆಸ್ಟ್, 77 ಏಕದಿನ ಹಾಗೂ 72 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಟೆಸ್ಟ್‌ನಲ್ಲಿ 2863 ರನ್ ಕಲೆಹಾಕಿರುವ ರಾಹುಲ್, ಏಕದಿನದಲ್ಲಿ 2851 ರನ್ ಮತ್ತು ಟಿ20ಯಲ್ಲಿ 2265 ರನ್ ಗಳಿಸಿದ್ದಾರೆ. ಇದಲ್ಲದೆ, ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರೂ ಆಗಿರುವ ರಾಹುಲ್, ಮುಂದಿನ ಆವೃತ್ತಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್