KL Rahul: ಕೆಎಲ್ ರಾಹುಲ್ ಸ್ಥಾನಕ್ಕೆ ಬಲಗೈ ದಾಂಡಿಗ ಆಯ್ಕೆ
India vs New Zealand: ನ್ಯೂಜಿಲೆಂಡ್ ವಿರುದ್ದ ಸರಣಿಯ ಮೊದಲ ಟೆಸ್ಟ್ ಪಂದ್ಯ ನವೆಂಬರ್ 25 ರಿಂದ 29 ರವರೆಗೆ ಕಾನ್ಪುರದಲ್ಲಿ ನಡೆಯಲಿದೆ. ಡಿಸೆಂಬರ್ 3ರಿಂದ ಮುಂಬೈನಲ್ಲಿ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದೆ.
ನ್ಯೂಜಿಲೆಂಡ್ ವಿರುದ್ದ ಟಿ20 ಸರಣಿ ಗೆದ್ದಿರುವ ಟೀಮ್ ಇಂಡಿಯಾ (Team India) ಇದೀಗ ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದೆ. ನವೆಂಬರ್ 25 ರಿಂದ ಶುರುವಾಗಲಿರುವ ಟೆಸ್ಟ್ ಸರಣಿಗಾಗಿ ಈಗಾಗಲೇ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಗೆ ರೋಹಿತ್ ಶರ್ಮಾ (Rohit Sharma) ಅಲಭ್ಯರಾಗಿದ್ದು, ಹಾಗೆಯೇ ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ (Virat Kohli) ಕೂಡ ಹೊರಗುಳಿದಿದ್ದಾರೆ. ಇದೀಗ ಗಾಯದ ಕಾರಣ ಕೆಎಲ್ ರಾಹುಲ್ (KL Rahul) ಕೂಡ ಹೊರನಡೆದಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಸರಣಿಗೆ ಕೆಎಲ್ ರಾಹುಲ್ ಅಲಭ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಮಧ್ಯಮ ಕ್ರಮಾಂಕದ ಬಲಗೈ ಬ್ಯಾಟರ್ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ಆಯ್ಕೆ ಮಾಡಲಾಗಿದೆ.
ಈ ಹಿಂದೆ ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಮತ್ತೊಮ್ಮೆ ತಂಡಕ್ಕೆ ಸೂರ್ಯಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ. ಈ ಬಾರಿ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ. ಇನ್ನು ಕಾನ್ಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ನಲ್ಲಿ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಇನ್ನು ತಂಡದ ಉಪನಾಯಕನಾಗಿ ಚೇತೇಶ್ವರ್ ಪೂಜಾರ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿರುವ ವಿರಾಟ್ ಕೊಹ್ಲಿ, ಮುಂಬೈನಲ್ಲಿ ನಡೆಯಲಿರುವ 2ನೇ ಪಂದ್ಯದ ವೇಳೆ ತಂಡವನ್ನು ಕೂಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ದ ಸರಣಿಯ ಮೊದಲ ಟೆಸ್ಟ್ ಪಂದ್ಯ ನವೆಂಬರ್ 25 ರಿಂದ 29 ರವರೆಗೆ ಕಾನ್ಪುರದಲ್ಲಿ ನಡೆಯಲಿದೆ. ಡಿಸೆಂಬರ್ 3ರಿಂದ ಮುಂಬೈನಲ್ಲಿ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದೆ.
ಭಾರತ ಟೆಸ್ಟ್ ತಂಡ: ಅಜಿಂಕ್ಯ ರಹಾನೆ (ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್
ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್
(KL Rahul ruled out of NZ Test series, Suryakumar Yadav added to squad)
Published On - 5:59 pm, Tue, 23 November 21