KL Rahul: ಕೆಎಲ್ ರಾಹುಲ್ ಕೈ ತಪ್ಪಿದ ವಿಕೆಟ್ ಕೀಪಿಂಗ್..!
India vs England: ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ.
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ (KL Rahul) ಅವರನ್ನು ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಕೆಳಗಿಳಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ. ಅದರಂತೆ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ರಾಹುಲ್ ಕೇವಲ ಬ್ಯಾಟರ್ ಆಗಿ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಕೆಎಲ್ ರಾಹುಲ್ ದೀರ್ಘಾವಧಿ ಕ್ರಿಕೆಟ್ನಲ್ಲೂ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದ್ದರು. ಇದಕ್ಕೂ ಮುನ್ನ ಏಕದಿನ ವಿಶ್ವಕಪ್ನಲ್ಲೂ ಅದ್ಭುತವಾಗಿ ವಿಕೆಟ್ ಕೀಪಿಂಗ್ ಮಾಡಿದ್ದರು.
ಇದಾಗ್ಯೂ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಿರಲಿಲ್ಲ. ಬದಲಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ವಿಕೆಟ್ ಕೀಪರ್ ಬ್ಯಾಟರ್ ಕೋಟಾದಲ್ಲಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಕೆಎಲ್ ರಾಹುಲ್ ಅವರನ್ನು ಕೇವಲ ಬ್ಯಾಟರ್ ಆಗಿ ಪರಿಗಣಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿದೆ. ಹೀಗಾಗಿ ಆಂಗ್ಲರ ವಿರುದ್ಧದ ಸರಣಿಯಲ್ಲಿ ಕೆಎಲ್ಆರ್ ಗ್ಲೌಸ್ ತೊಡುವುದಿಲ್ಲ ಎಂದೇ ಹೇಳಬಹುದು.
ವಿಕೆಟ್ ಕೀಪರ್ ಯಾರು?
ಪ್ರಸ್ತುತ ಮಾಹಿತಿ ಪ್ರಕಾರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಲಿದ್ದಾರೆ. ಇನ್ನು ಮೀಸಲು ವಿಕೆಟ್ ಕೀಪರ್ ಸ್ಥಾನದಲ್ಲಿ ಕೆಎಸ್ ಭರತ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಈ ಮೂಲಕ ಕೆಎಲ್ ರಾಹುಲ್ ಅವರನ್ನು ಕೇವಲ ಬ್ಯಾಟರ್ ಆಗಿ ತಂಡದಲ್ಲಿರಿಸಲು ಬಿಸಿಸಿಐ ಆಯ್ಕೆ ಸಮಿತಿ ಪ್ಲ್ಯಾನ್ ರೂಪಿಸಿದೆ.
ಭಾರತ-ಇಂಗ್ಲೆಂಡ್ ಸರಣಿ ಯಾವಾಗ?
ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ.
ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್ಆರ್ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಇದನ್ನೂ ಓದಿ: IPL 2024: RCB ಆಟಗಾರನಿಗೆ ಗಂಭೀರ ಗಾಯ: ಐಪಿಎಲ್ಗೆ ಡೌಟ್..!
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
- ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
- ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
- ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್ಕೋಟ್)
- ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
- ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ)