IND vs SA: ಆಫ್ರಿಕಾ ನೆಲದಲ್ಲಿ ಚೊಚ್ಚಲ ಶತಕ ಸಿಡಿಸಿದ ರಾಹುಲ್! ಟೆಸ್ಟ್ ಕ್ರಿಕೆಟ್​ನಲ್ಲಿ 7ನೇ ಶತಕ ಸಿಡಿಸಿದ ಕನ್ನಡಿಗ

IND vs SA: ಸೆಂಚುರಿಯನ್ ಟೆಸ್ಟ್‌ನ ಮೊದಲ ದಿನದಲ್ಲಿ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಅದ್ಭುತ ಶತಕ ಸಿಡಿಸಿದ್ದಾರೆ.

IND vs SA: ಆಫ್ರಿಕಾ ನೆಲದಲ್ಲಿ ಚೊಚ್ಚಲ ಶತಕ ಸಿಡಿಸಿದ ರಾಹುಲ್! ಟೆಸ್ಟ್ ಕ್ರಿಕೆಟ್​ನಲ್ಲಿ 7ನೇ ಶತಕ ಸಿಡಿಸಿದ ಕನ್ನಡಿಗ
ಕೆಎಲ್ ರಾಹುಲ್
Follow us
TV9 Web
| Updated By: ಪೃಥ್ವಿಶಂಕರ

Updated on:Dec 26, 2021 | 8:13 PM

ಸೆಂಚುರಿಯನ್ ಟೆಸ್ಟ್‌ನ ಮೊದಲ ದಿನದಲ್ಲಿ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದರು. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಅದ್ಭುತ ಶತಕ ಸಿಡಿಸಿದ್ದಾರೆ. ಕೆಎಲ್ ರಾಹುಲ್ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಅವರೊಂದಿಗೆ ಶತಕದ ಜೊತೆಯಾಟವನ್ನು ಮಾಡಿದರು. ಅದರ ನಂತರ ಅವರು ತಮ್ಮ ವೈಯಕ್ತಿಕ ಸ್ಕೋರ್ ಅನ್ನು ಶತಕದತ್ತ ಕೊಂಡೊಯ್ದರು. ದಕ್ಷಿಣ ಆಫ್ರಿಕಾದ ನೆಲದಲ್ಲಿ ಕೆಎಲ್ ರಾಹುಲ್ ಮೊದಲ ಬಾರಿಗೆ ಶತಕ ಸಿಡಿಸಿದ್ದಾರೆ. ಸೆಂಚುರಿಯನ್‌ನ ಕಠಿಣ ಪಿಚ್‌ನಲ್ಲಿ, ಕೆಎಲ್ ರಾಹುಲ್ ಖಾತೆ ತೆರೆಯಲು 21 ಎಸೆತಗಳನ್ನು ಆಡಿದರು ಆದರೆ ಈ ಪ್ರತಿಭಾವಂತ ಬ್ಯಾಟ್ಸ್‌ಮನ್ ತಾಳ್ಮೆಯ ಬಲದಿಂದ ತಮ್ಮ 7 ನೇ ಟೆಸ್ಟ್ ಶತಕವನ್ನು ತಲುಪುವಲ್ಲಿ ಯಶಸ್ವಿಯಾದರು.

ರಾಹುಲ್, ಮಯಾಂಕ್ ಅಗರ್ವಾಲ್ ಜೊತೆಗೂಡಿ ಟೀಂ ಇಂಡಿಯಾ ಸ್ಕೋರ್ ಅನ್ನು 17.3 ಓವರ್‌ಗಳಲ್ಲಿ 50ಕ್ಕೆ ಕೊಂಡೊಯ್ದರು. ಊಟದ ವೇಳೆಗೆ ಇಬ್ಬರೂ ಬ್ಯಾಟ್ಸ್​ಮನ್​ಗಳು ತಂಡದ ಸ್ಕೋರ್ ಅನ್ನು 83ಕ್ಕೆ ಕೊಂಡೊಯ್ದರು. ಎರಡನೇ ಸೆಷನ್​ನಲ್ಲಿ ಮಯಾಂಕ್ ಜೊತೆಗೂಡಿ ರಾಹುಲ್ ಭಾರತದ ಸ್ಕೋರ್ ಅನ್ನು 100ರ ಗಡಿ ದಾಟಿಸಿದರು. ಈ ವೇಳೆ ಮಯಾಂಕ್ ಅಗರ್ವಾಲ್ ತಮ್ಮ ಅರ್ಧಶತಕವನ್ನು ಪೂರ್ಣಗೊಳಿಸಿದರು ಆದರೆ ಅವರು ವೈಯಕ್ತಿಕ ಸ್ಕೋರ್ 60 ರಲ್ಲಿ ಔಟಾಗಿ ಪೆವಿಲಿಯನ್‌ಗೆ ಮರಳಿದರು. ನಂತರದ ಎಸೆತದಲ್ಲಿ ಪೂಜಾರ ಕೂಡ ಶೂನ್ಯಕ್ಕೆ ಔಟಾದರು. ಈ ವೇಳೆ ರಾಹುಲ್ 127 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ ಅರ್ಧಶತಕ ಪೂರೈಸಿದರು.

ರಾಹುಲ್ ಶತಕಗಳ ವಿವರ ನಾಯಕ ಕೊಹ್ಲಿ ಅವರೊಂದಿಗೆ ಕೆಎಲ್ ರಾಹುಲ್ ಭಾರತದ ಸ್ಕೋರ್ ಅನ್ನು 150ರ ಗಡಿ ದಾಟಿಸಿದರು ಮತ್ತು ಇಬ್ಬರೂ ಬ್ಯಾಟ್ಸ್‌ಮನ್‌ಗಳು 118 ಎಸೆತಗಳಲ್ಲಿ ಅರ್ಧಶತಕದ ಜೊತೆಯಾಟವನ್ನು ಪೂರ್ಣಗೊಳಿಸಿದರು. ಆದರೆ, 200 ರನ್​ಗಳ ಮುನ್ನವೇ ಟೀಂ ಇಂಡಿಯಾ ನಾಯಕ ಕೊಹ್ಲಿ ವಿಕೆಟ್ ಕಳೆದುಕೊಂಡಿತು. ಆದರೆ ರಾಹುಲ್ ಕ್ರೀಸ್​ನಲ್ಲಿ ಉಳಿದು 218 ಎಸೆತಗಳಲ್ಲಿ 7ನೇ ಟೆಸ್ಟ್ ಶತಕ ಪೂರೈಸಿದರು.ಕೆಎಲ್ ರಾಹುಲ್ ಇಂಗ್ಲೆಂಡ್‌ನಲ್ಲಿ, ನ್ಯೂಜಿಲೆಂಡ್‌ನಲ್ಲಿ 2, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾದಲ್ಲಿ 1 ಶತಕವನ್ನೂ ಗಳಿಸಿದ್ದಾರೆ. ಕಳೆದ 2 ವರ್ಷಗಳಲ್ಲಿ ಕೆಎಲ್ ರಾಹುಲ್ ಭಾರತದ ಪರ 4 ಶತಕ ಸಿಡಿಸಿದ್ದಾರೆ. ರೋಹಿತ್ ಶರ್ಮಾ 3 ಶತಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಕೆಎಲ್ ರಾಹುಲ್ ತಮ್ಮ ಆಟವನ್ನು ಬೇರೆ ಹಂತಕ್ಕೆ ಕೊಂಡೊಯ್ದಿದ್ದಾರೆ ಮತ್ತು ಟೀಮ್ ಇಂಡಿಯಾಕ್ಕೆ ಇದರಿಂದ ಸಾಕಷ್ಟು ಲಾಭವಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ.

Published On - 8:05 pm, Sun, 26 December 21

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ