KL Rahul: ಬಾಕ್ಸಿಂಗ್ ಡೇನಲ್ಲಿ ಕೆಎಲ್ ರಾಹುಲ್ ಬಾಸ್..!

KL Rahul: ಟೀಮ್ ಇಂಡಿಯಾ ಪರ ಇದುವರೆಗೆ ಕೆಎಲ್ ರಾಹುಲ್ ಒಟ್ಟು 48 ಟೆಸ್ಟ್​ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 7 ಶತಕ ಹಾಗೂ 14 ಅರ್ಧಶತಕಗಳೊಂದಿಗೆ ಒಟ್ಟು 2712 ರನ್​ ಕಲೆಹಾಕಿದ್ದಾರೆ. ಈ ವೇಳೆ 199 ರನ್​ ಬಾರಿಸಿದ್ದು ಅವರ ವೈಯುಕ್ತಿಕ ಗರಿಷ್ಠ ಸ್ಕೋರ್.

KL Rahul: ಬಾಕ್ಸಿಂಗ್ ಡೇನಲ್ಲಿ ಕೆಎಲ್ ರಾಹುಲ್ ಬಾಸ್..!
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 27, 2023 | 10:19 AM

ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ (KL Rahul) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 107 ರನ್​ಗಳಿಗೆ 5 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಜವಾಬ್ದಾರಿಯುತ ಇನಿಂಗ್ಸ್ ಆಡಿದರು. ಸೌತ್ ಆಫ್ರಿಕಾ ವೇಗಿಗಳನ್ನು ದಿಟ್ಟವಾಗಿ ಎದುರಿಸಿದ ಕನ್ನಡಿಗ ಆಕರ್ಷಕ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ ಮೊದಲ ದಿನದಾಟದಲ್ಲಿ ಆಸರೆಯಾಗಿ ನಿಂತು ಟೀಮ್ ಇಂಡಿಯಾ ಆಲೌಟ್ ಆಗುವುದನ್ನು ತಪ್ಪಿಸಿದರು.

ಅದರಂತೆ ಮೊದಲ ದಿನದಾಟದ ಮುಕ್ತಾಯದ ವೇಳೆಗೆ 105 ಎಸೆತಗಳನ್ನು ಎದುರಿಸಿದ ರಾಹುಲ್ 10 ಫೋರ್​ ಹಾಗೂ 2 ಸಿಕ್ಸ್​ನೊಂದಿಗೆ ಅಜೇಯ 70 ರನ್ ಬಾರಿಸಿ ಕ್ರೀಸ್​ನಲ್ಲಿದ್ದಾರೆ. ವಿಶೇಷ ಎಂದರೆ ಬಾಕ್ಸಿಂಗ್​ ಡೇ ಟೆಸ್ಟ್​ನಲ್ಲಿ ರಾಹುಲ್ ಕಡೆಯಿಂದ ಇಂತಹ ಅಮೋಘ ಪ್ರದರ್ಶನ ಮೂಡಿಬರುತ್ತಿರುವುದು ಇದು ಮೊದಲೇನಲ್ಲ.

ಬಾಕ್ಸಿಂಗ್​ ಡೇನಲ್ಲಿ KLR​ ಬಾಸ್​:

ಕೆಎಲ್ ರಾಹುಲ್ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದೇ ಬಾಕ್ಸಿಂಗ್ ಡೇ ಟೆಸ್ಟ್​ ಮೂಲಕ ಎಂಬುದು ವಿಶೇಷ. ಡಿಸೆಂಬರ್ 26, 2014 ರಲ್ಲಿ ಮೆಲ್ಬೋರ್ನ್​​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್​ ಮೂಲಕ ರಾಹುಲ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದರು.

ಇದಾದ ಬಳಿಕ ಕೆಎಲ್ ರಾಹುಲ್ 2021 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್​ನಲ್ಲಿ ಕಾಣಿಸಿಕೊಂಡಿದ್ದರು. ಸೆಂಚುರಿಯನ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ 123 ರನ್​ಗಳ ಅಮೋಘ ಇನಿಂಗ್ಸ್​ ಆಡಿದ್ದರು. ಈ ಮೂಲಕ ಆ ಪಂದ್ಯದಲ್ಲಿ ಟೀಮ್ ಇಂಡಿಯಾ 113 ರನ್​ಗಳ ಭರ್ಜರಿ ಜಯ ಸಾಧಿಸುವಲ್ಲಿ ಕಾರಣಕೃರ್ತರಾಗಿದ್ದರು.

ಇದನ್ನೂ ಓದಿ: Virat Kohli: ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದೀಗ ಸೆಂಚುರಿಯನ್​ ಮೈದಾನದಲ್ಲೇ ಮತ್ತೊಮ್ಮೆ ಕೆಎಲ್ ರಾಹುಲ್ ಅಬ್ಬರಿಸಿದ್ದಾರೆ. ಅದು ಕೂಡ ಟೀಮ್ ಇಂಡಿಯಾ ಸಂಕಷ್ಟದಲ್ಲಿರುವಾಗ ಎಂಬುದು ವಿಶೇಷ. ಅಂದರೆ ಭಾರತ ತಂಡದ ಆಪತ್ಬಾಂಧವನಾಗಿ ಇದೀಗ ಕೆಎಲ್ ರಾಹುಲ್ ಇನಿಂಗ್ಸ್​ ಕಟ್ಟುತ್ತಿದ್ದಾರೆ. ಅಲ್ಲದೆ ಅಜೇಯ 70 ರನ್​ ಬಾರಿಸಿ ಶತಕದತ್ತ ದಾಪುಗಾಲಿಟ್ಟಿದ್ದಾರೆ. ಇನ್ನು ಈ ಇನಿಂಗ್ಸ್​ಗೆ 30 ರನ್​ಗಳನ್ನು ಸೇರ್ಪಡೆಗೊಳಿಸಿ ಟೆಸ್ಟ್​ ಕ್ರಿಕೆಟ್​ನಲ್ಲಿ 8ನೇ ಶತಕ ಸಿಡಿಸುವ ವಿಶ್ವಾಸದಲ್ಲಿದ್ದಾರೆ ಕೆಎಲ್ ರಾಹುಲ್.

ಕೆಎಲ್ ರಾಹುಲ್ ಟೆಸ್ಟ್​ ಕೆರಿಯರ್:

ಟೀಮ್ ಇಂಡಿಯಾ ಪರ ಇದುವರೆಗೆ ಕೆಎಲ್ ರಾಹುಲ್ ಒಟ್ಟು 48 ಟೆಸ್ಟ್​ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 7 ಶತಕ ಹಾಗೂ 14 ಅರ್ಧಶತಕಗಳೊಂದಿಗೆ ಒಟ್ಟು 2712 ರನ್​ ಕಲೆಹಾಕಿದ್ದಾರೆ. ಈ ವೇಳೆ 199 ರನ್​ ಬಾರಿಸಿದ್ದು ಅವರ ವೈಯುಕ್ತಿಕ ಗರಿಷ್ಠ ಸ್ಕೋರ್. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಾಹುಲ್ ಕಡೆಯಿಂದ ದ್ವಿಶತಕ ಮೂಡಿಬರಲಿದೆಯಾ ಕಾದು ನೋಡಬೇಕಿದೆ.

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’