AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್‌ ವಿರುದ್ಧ ಅರ್ಧಶತಕ ಬಾರಿಸಿ ಸೆಹ್ವಾಗ್ ದಾಖಲೆ ಮುರಿದ ರಾಹುಲ್

KL Rahul's Leeds Heroics: ಲೀಡ್ಸ್‌ನಲ್ಲಿ ನಡೆದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕದಂಚಿನಲ್ಲಿ ಎಡವಿದ್ದ ರಾಹುಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಅರ್ಧಶತಕ ಬಾರಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಅಲ್ಲದೆ ಇಂಗ್ಲೆಂಡ್‌ನಲ್ಲಿ 9ನೇ ಬಾರಿ 50+ ರನ್ ಗಳಿಸಿ, ಅವರು ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿದರು.

IND vs ENG: ಇಂಗ್ಲೆಂಡ್‌ ವಿರುದ್ಧ ಅರ್ಧಶತಕ ಬಾರಿಸಿ ಸೆಹ್ವಾಗ್ ದಾಖಲೆ ಮುರಿದ ರಾಹುಲ್
Kl Rahul
ಪೃಥ್ವಿಶಂಕರ
|

Updated on:Jun 23, 2025 | 5:32 PM

Share

ಲೀಡ್ಸ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕದಂಚಿನಲ್ಲಿ ಎಡವಿದ್ದ ಕನ್ನಡಿಗ ಕೆಎಲ್ ರಾಹುಲ್ (KL Rahul), ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡದ ಇನ್ನಿಂಗ್ಸ್ ನಿಭಾಯಿಸಿದಲ್ಲದೆ, ಲೀಡ್ಸ್‌ನ ಕಠಿಣ ಪಿಚ್‌ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಅದ್ಭುತ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ರಾಹುಲ್ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನೂ ನಿರ್ಮಿಸಿದರು. ವಾಸ್ತವವಾಗಿ ರಾಹುಲ್ ಇಂಗ್ಲೆಂಡ್‌ನಲ್ಲಿ ಆರಂಭಿಕರಾಗಿ 9 ನೇ ಬಾರಿಗೆ ಐವತ್ತಕ್ಕೂ ಹೆಚ್ಚು ರನ್ ಕಲೆಹಾಕಿದ್ದು, ಈ ಮೂಲಕ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ (Virender Sehwag) ಅವರನ್ನು ಹಿಂದಿಕ್ಕಿದ್ದಾರೆ. ರಾಹುಲ್ ಕೇವಲ 42 ಇನ್ನಿಂಗ್ಸ್‌ಗಳಲ್ಲಿ ಇಂಗ್ಲೆಂಡ್‌ನಲ್ಲಿ 9 ನೇ ಬಾರಿಗೆ ಐವತ್ತಕ್ಕೂ ಹೆಚ್ಚು ರನ್ ಗಳಿಸಿದ್ದರೆ, ಸೆಹ್ವಾಗ್ 49 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು 50+ ಸ್ಕೋರ್‌

ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು ಬಾರಿ ಐವತ್ತಕ್ಕೂ ಹೆಚ್ಚು ರನ್ ಗಳಿಸಿದ ಭಾರತೀಯ ಆರಂಭಿಕ ಆಟಗಾರರ ಪಟ್ಟಿಯಲ್ಲಿ ಮಾಜಿ ನಾಯಕ ಸುನಿಲ್ ಗವಾಸ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು 57 ಇನ್ನಿಂಗ್ಸ್‌ಗಳಲ್ಲಿ 19 ಬಾರಿ ಈ ಸಾಧನೆ ಮಾಡಿದ್ದರು. ಅವರ ನಂತರ, ಮುರಳಿ ವಿಜಯ್ ಮತ್ತು ಕೆಎಲ್ ರಾಹುಲ್ ತಲಾ 42 ಇನ್ನಿಂಗ್ಸ್‌ಗಳಲ್ಲಿ 9 ಬಾರಿ ಐವತ್ತಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕೆಎಲ್ ರಾಹುಲ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 75 ಬಾರಿ ಐವತ್ತಕ್ಕೂ ಹೆಚ್ಚು ರನ್ ಕಲೆಹಾಕಿದ್ದು, ಟೆಸ್ಟ್‌ನಲ್ಲಿ 26 ಬಾರಿ ಐವತ್ತಕ್ಕೂ ಹೆಚ್ಚು ರನ್, ಏಕದಿನದಲ್ಲಿ 25 ಮತ್ತು ಟಿ20ಯಲ್ಲಿ 24 ಬಾರಿ ಈ ಸಾಧನೆ ಮಾಡಿದ್ದಾರೆ.

IND vs ENG: ಮಳೆಯಿಂದ 3ನೇ ದಿನದಾಟ ಅಂತ್ಯ; ಭಾರತಕ್ಕೆ ರಾಹುಲ್ ಆಸರೆ

ತಂಡದಲ್ಲಿರುವ ಅನುಭವಿ ಬ್ಯಾಟರ್ ರಾಹುಲ್

ವಿರಾಟ್ ಮತ್ತು ರೋಹಿತ್ ಶರ್ಮಾ ನಿವೃತ್ತಿಯ ನಂತರ, ಕೆಎಲ್ ರಾಹುಲ್ ಮೇಲೆ ಈಗ ದೊಡ್ಡ ಜವಾಬ್ದಾರಿ ಇದೆ. ಒಳ್ಳೆಯ ವಿಷಯವೆಂದರೆ ಕೆಎಲ್ ರಾಹುಲ್ ಕೂಡ ಉತ್ತಮ ಫಾರ್ಮ್‌ನಲ್ಲಿ ಕಾಣುತ್ತಿದ್ದಾರೆ. ಇಂಗ್ಲೆಂಡ್‌ನಲ್ಲಿ ರಾಹುಲ್ ಅವರ ತಂತ್ರ ಯಾವಾಗಲೂ ಯಶಸ್ವಿಯಾಗಿದೆ. ಲೀಡ್ಸ್ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಅವರು ಕ್ರೀಸ್‌ನಲ್ಲಿ ಹೆಚ್ಚು ಸಮಯ ಕಾಲ ಕಳೆದಿದ್ದು, ತಂಡದ ಇನ್ನಿಂಗ್ಸ್ ನಿಭಾಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾವನ್ನು 300 ರ ಹತ್ತಿರಕ್ಕೆ ಕೊಂಡೊಯ್ಯಬೇಕಾಗಿದೆ. ಏಕೆಂದರೆ ಇದಕ್ಕಿಂತ ಕಡಿಮೆ ಸ್ಕೋರ್ ಇಂಗ್ಲೆಂಡ್ ವಿರುದ್ಧ ಗೆಲ್ಲಲು ಸಾಕಾಗುವುದಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Mon, 23 June 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ