
ಲೀಡ್ಸ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕದಂಚಿನಲ್ಲಿ ಎಡವಿದ್ದ ಕನ್ನಡಿಗ ಕೆಎಲ್ ರಾಹುಲ್ (KL Rahul), ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡದ ಇನ್ನಿಂಗ್ಸ್ ನಿಭಾಯಿಸಿದಲ್ಲದೆ, ಲೀಡ್ಸ್‌ನ ಕಠಿಣ ಪಿಚ್‌ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಅದ್ಭುತ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ರಾಹುಲ್ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನೂ ನಿರ್ಮಿಸಿದರು. ವಾಸ್ತವವಾಗಿ ರಾಹುಲ್ ಇಂಗ್ಲೆಂಡ್‌ನಲ್ಲಿ ಆರಂಭಿಕರಾಗಿ 9 ನೇ ಬಾರಿಗೆ ಐವತ್ತಕ್ಕೂ ಹೆಚ್ಚು ರನ್ ಕಲೆಹಾಕಿದ್ದು, ಈ ಮೂಲಕ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ (Virender Sehwag) ಅವರನ್ನು ಹಿಂದಿಕ್ಕಿದ್ದಾರೆ. ರಾಹುಲ್ ಕೇವಲ 42 ಇನ್ನಿಂಗ್ಸ್‌ಗಳಲ್ಲಿ ಇಂಗ್ಲೆಂಡ್‌ನಲ್ಲಿ 9 ನೇ ಬಾರಿಗೆ ಐವತ್ತಕ್ಕೂ ಹೆಚ್ಚು ರನ್ ಗಳಿಸಿದ್ದರೆ, ಸೆಹ್ವಾಗ್ 49 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು.
ಇಂಗ್ಲೆಂಡ್‌ನಲ್ಲಿ ಅತಿ ಹೆಚ್ಚು ಬಾರಿ ಐವತ್ತಕ್ಕೂ ಹೆಚ್ಚು ರನ್ ಗಳಿಸಿದ ಭಾರತೀಯ ಆರಂಭಿಕ ಆಟಗಾರರ ಪಟ್ಟಿಯಲ್ಲಿ ಮಾಜಿ ನಾಯಕ ಸುನಿಲ್ ಗವಾಸ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು 57 ಇನ್ನಿಂಗ್ಸ್‌ಗಳಲ್ಲಿ 19 ಬಾರಿ ಈ ಸಾಧನೆ ಮಾಡಿದ್ದರು. ಅವರ ನಂತರ, ಮುರಳಿ ವಿಜಯ್ ಮತ್ತು ಕೆಎಲ್ ರಾಹುಲ್ ತಲಾ 42 ಇನ್ನಿಂಗ್ಸ್‌ಗಳಲ್ಲಿ 9 ಬಾರಿ ಐವತ್ತಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕೆಎಲ್ ರಾಹುಲ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 75 ಬಾರಿ ಐವತ್ತಕ್ಕೂ ಹೆಚ್ಚು ರನ್ ಕಲೆಹಾಕಿದ್ದು, ಟೆಸ್ಟ್‌ನಲ್ಲಿ 26 ಬಾರಿ ಐವತ್ತಕ್ಕೂ ಹೆಚ್ಚು ರನ್, ಏಕದಿನದಲ್ಲಿ 25 ಮತ್ತು ಟಿ20ಯಲ್ಲಿ 24 ಬಾರಿ ಈ ಸಾಧನೆ ಮಾಡಿದ್ದಾರೆ.
– 26 50+ scores in Tests*.
– 25 50+ scores in ODIs.
– 24 50+ scores in T20Is.KL RAHUL NOW HAS 75 50+ SCORES IN INT'L CRICKET – CLASS, KL. 🙇 pic.twitter.com/Fx9HCMnSFn
— Tanuj (@ImTanujSingh) June 23, 2025
IND vs ENG: ಮಳೆಯಿಂದ 3ನೇ ದಿನದಾಟ ಅಂತ್ಯ; ಭಾರತಕ್ಕೆ ರಾಹುಲ್ ಆಸರೆ
ವಿರಾಟ್ ಮತ್ತು ರೋಹಿತ್ ಶರ್ಮಾ ನಿವೃತ್ತಿಯ ನಂತರ, ಕೆಎಲ್ ರಾಹುಲ್ ಮೇಲೆ ಈಗ ದೊಡ್ಡ ಜವಾಬ್ದಾರಿ ಇದೆ. ಒಳ್ಳೆಯ ವಿಷಯವೆಂದರೆ ಕೆಎಲ್ ರಾಹುಲ್ ಕೂಡ ಉತ್ತಮ ಫಾರ್ಮ್‌ನಲ್ಲಿ ಕಾಣುತ್ತಿದ್ದಾರೆ. ಇಂಗ್ಲೆಂಡ್‌ನಲ್ಲಿ ರಾಹುಲ್ ಅವರ ತಂತ್ರ ಯಾವಾಗಲೂ ಯಶಸ್ವಿಯಾಗಿದೆ. ಲೀಡ್ಸ್ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಅವರು ಕ್ರೀಸ್‌ನಲ್ಲಿ ಹೆಚ್ಚು ಸಮಯ ಕಾಲ ಕಳೆದಿದ್ದು, ತಂಡದ ಇನ್ನಿಂಗ್ಸ್ ನಿಭಾಯಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾವನ್ನು 300 ರ ಹತ್ತಿರಕ್ಕೆ ಕೊಂಡೊಯ್ಯಬೇಕಾಗಿದೆ. ಏಕೆಂದರೆ ಇದಕ್ಕಿಂತ ಕಡಿಮೆ ಸ್ಕೋರ್ ಇಂಗ್ಲೆಂಡ್ ವಿರುದ್ಧ ಗೆಲ್ಲಲು ಸಾಕಾಗುವುದಿಲ್ಲ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:29 pm, Mon, 23 June 25