KL Rahul: ಏಕದಿನ ಪಂದ್ಯದಿಂದ ಕೆಎಲ್ ರಾಹುಲ್ ಹೊರಗುಳಿಯಲು ಇದುವೇ ಮುಖ್ಯ ಕಾರಣ
ಏಕದಿನ ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಮಯಾಂಕ್ ಅಗರ್ವಾಲ್, ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ
ಫೆಬ್ರವರಿ 6 ರಂದು ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯದಿಂದ ಕೆಎಲ್ ರಾಹುಲ್ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸಹೋದರಿಯ ಮದುವೆ. ಸಹೋದರಿಯ ವಿವಾಹದ ನಿಮಿತ್ತ ರಾಹುಲ್ ಮೊದಲ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯ ಮೊದಲ ಪಂದ್ಯಕ್ಕೆ ಕೆಎಲ್ ರಾಹುಲ್ ಅಲಭ್ಯರಾಗಿದ್ದಾರೆ. ಇನ್ನು ಸರಣಿಗೆ ಟೀಮ್ ಇಂಡಿಯಾವನ್ನು ಘೋಷಿಸಿದಾಗ, ಕೆಎಲ್ ರಾಹುಲ್ ಎರಡನೇ ಏಕದಿನಕ್ಕೆ ಲಭ್ಯರಿರಲಿದ್ದಾರೆ ಎಂದು ಬಿಸಿಸಿಐ ಕೂಡ ತಿಳಿಸಿತ್ತು. ಇದಾಗ್ಯೂ ಕಾರಣವನ್ನು ಬಹಿರಂಗಪಡಿಸಿರಲಿಲ್ಲ. ಇದೀಗ ಸಹೋದರಿಯ ವಿವಾಹದ ಕಾರಣ ರಾಹುಲ್ ಸರಣಿಯ ಮೊದಲ ಪಂದ್ಯವನ್ನು ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಕೆಎಲ್ ರಾಹುಲ್ ಇತ್ತೀಚೆಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಏಕದಿನ ಸರಣಿಯಲ್ಲಿ ಭಾರತ ತಂಡದ ನಾಯಕರಾಗಿದ್ದರು. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಅವರು ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಆದರೆ, ನಾಯಕನಾಗಿ ಅವರ ಆರಂಭ ಉತ್ತಮವಾಗಿರಲಿಲ್ಲ. ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ 3-0 ಅಂತರದಲ್ಲಿ ಸೋತಿದೆ. ಇದಕ್ಕೂ ಮುನ್ನ ಟೆಸ್ಟ್ ಸರಣಿಯ ವೇಳೆ ನಡೆದ ಪಂದ್ಯದಲ್ಲಿ ನಾಯಕತ್ವವನ್ನೂ ವಹಿಸಿಕೊಂಡಿದ್ದರು. ಇದರಲ್ಲೂ ಭಾರತ ಸೋಲನ್ನು ಎದುರಿಸಬೇಕಾಯಿತು.
ರಾಹುಲ್ ಬದಲಿಗೆ ಮಧ್ಯಮ ಕ್ರಮಾಂಕದಲ್ಲಿ ಯಾರು? ಮೊದಲ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಆಡದಿದ್ದರೆ ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ ಮತ್ತು ವೆಂಕಟೇಶ್ ಅಯ್ಯರ್ ಅಥವಾ ದೀಪಕ್ ಹೂಡಾ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಬಹುದು. ಏಕೆಂದರೆ ಸರಣಿಯಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಶಿಖರ್ ಧವನ್ ಆರಂಭಿಕರಾಗಿ ಆಡುವ ಸಾಧ್ಯತೆಯಿತ್ತು. ಆದರೆ ಧವನ್ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಶ್ರೇಯಸ್ ಮತ್ತು ಧವನ್ ಹೊರತಾಗಿ, ಯುವ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಮತ್ತು ನವದೀಪ್ ಸೈನಿ ಸಹ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರಿಂದಾಗಿ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಯಾರು ಇನಿಂಗ್ಸ್ ಆರಂಭಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಮಯಾಂಕ್ಗೆ ಅವಕಾಶ: ಟೀಮ್ ಇಂಡಿಯಾ ಆಟಗಾರರಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಏಕದಿನ ಸರಣಿಗೆ ಭಾರತ ತಂಡದಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಹೀಗಾಗಿ ಮಯಾಂಕ್ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕನ ಜವಾಬ್ದಾರಿಯನ್ನು ನಿಭಾಯಿಸುವ ಸಾಧ್ಯತೆಯಿದೆ.
ಭಾರತ-ವೆಸ್ಟ್ ಇಂಡೀಸ್ ಏಕದಿನ ಸರಣಿ ವೇಳಾಪಟ್ಟಿ:
ಫೆಬ್ರವರಿ 6 – 1 ನೇ ODI, ಅಹಮದಾಬಾದ್
ಫೆಬ್ರವರಿ 9 – 2 ನೇ ODI, ಅಹಮದಾಬಾದ್
ಫೆಬ್ರವರಿ 11 – 3 ನೇ ODI, ಅಹಮದಾಬಾದ್
ಏಕದಿನ ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಮಯಾಂಕ್ ಅಗರ್ವಾಲ್, ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಹಾರ್ , ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಮತ್ತು ಅವೇಶ್ ಖಾನ್.
ಏಕದಿನ ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ಕೆಮರ್ ರೋಚ್, ಎನ್‌ಕ್ರುಮಾ ಬೊನ್ನರ್, ಬ್ರಾಂಡನ್ ಕಿಂಗ್, ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ಶಮ್ರಾ ಬ್ರೂಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ನಿಕೋಲಸ್ ಪೂರನ್, ರೊಮರಿಯಾ ಶೆಫರ್ಡ್ , ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.
ಭಾರತ-ವೆಸ್ಟ್ ಇಂಡೀಸ್ T20 ಸರಣಿಯ ವೇಳಾಪಟ್ಟಿ:
ಫೆಬ್ರವರಿ 16 – 1 ನೇ T20, ಕೋಲ್ಕತ್ತಾ
ಫೆಬ್ರವರಿ 18 – 2 ನೇ T20, ಕೋಲ್ಕತ್ತಾ
ಫೆಬ್ರವರಿ 20 – 3 ನೇ T20, ಕೋಲ್ಕತ್ತಾ
ಭಾರತ ವಿರುದ್ಧದ ಟಿ20 ಸರಣಿಗೆ ವೆಸ್ಟ್ ಇಂಡೀಸ್ ತಂಡ: ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಬ್ರೇಮನ್ ಕಿಂಗ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಕೈಲ್ ಮೈಯರ್ಸ್, ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.
ಟಿ20 ಸರಣಿಗೆ ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಮತ್ತು ಹರ್ಷಲ್ ಪಟೇಲ್
ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ
ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ
ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್
(KL Rahul to miss India vs west indies 1st ODI due to sister wedding)
Published On - 3:14 pm, Thu, 3 February 22