KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ

India vs Pakistan: ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸಿಡಿಲು ಬಂದು ಅಪ್ಪಿಳಿಸಿತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಬಲಿಯಾದರು.

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ
ರಾಹುಲ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 25, 2021 | 8:54 AM

ವಿಶ್ವಕಪ್​ ಪಂದ್ಯ ಎಂದರೆ ಅಲ್ಲಿ ಹೈ ವೋಲ್ಟೇಜ್​ ಇದ್ದೇ ಇರುತ್ತದೆ. ಅದರಲ್ಲೂ ಭಾರತ vs ಪಾಕಿಸ್ತಾನ ಮ್ಯಾಚ್​ ಇದೆ ಎಂದಂರಂತೂ ಮರುಮಾತೇ ಇಲ್ಲ. ಟಿ20 ವಿಶ್ವಕಪ್​ನ ಭಾರತ ಮತ್ತು ಪಾಕಿಸ್ತಾನದ ನಡುವಣ ಮ್ಯಾಚ್​ ಸಾಕಷ್ಟು ಹೈಪ್​ ಪಡೆದುಕೊಂಡಿತ್ತು. ಆದರೆ, ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಅನುಭವಿಸಿತ್ತು. ಇದಕ್ಕೆ ಅಂಪೈರ್ ಮಾಡಿದ ತಪ್ಪೇ ಕಾರಣ ಎಂಬುದು ಗೊತ್ತಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸಿಡಿಲು ಬಂದು ಅಪ್ಪಿಳಿಸಿತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಬಲಿಯಾದರು. ಈ ವೇಳೆ ವಿರಾಟ್​ ಕೊಹ್ಲಿ ಹಾಗೂ ಕನ್ನಡಿಗ  ಕೆ. ಎಲ್ ರಾಹುಲ್ ಪಂದ್ಯಕಟ್ಟಲು ನಿಂತರು. ರಾಹುಲ್​ ಇತ್ತೀಚೆಗೆ ಒಳ್ಳೆಯ ಫಾರ್ಮ್​ನಲ್ಲಿದ್ದಾರೆ. ಐಪಿಎಲ್​ ಈ ಬಾರಿಯ ಸೀಸನ್​ನಲ್ಲಿ ಒಳ್ಳೆಯ ರನ್​ ಪೇರಿಸಿದ್ದರು. ಪ್ರ್ಯಾಕ್ಟೀಸ್​ ಮ್ಯಾಚ್​ನಲ್ಲೂ ರಾಹುಲ್​ ಅದ್ಭುತ ಆಟ ಪ್ರದರ್ಶಿಸಿದ್ದರು. ಆದರೆ, ಪಾಕ್​ ವಿರುದ್ಧದ ಮ್ಯಾಚ್​ನಲ್ಲಿ ಎಡವಿದ್ದರು.

3 ರನ್​ ಗಳಿಸಿದ್ದ ರಾಹುಲ್​  ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು. ಈ ಮೂಲಕ ಪೆವಿಲಿಯನ್​ ಸೇರಿದರು. ಆದರೆ, ಇದು ನೋ ಬಾಲ್​ ಆಗಿತ್ತು. ಇದನ್ನು ಅಂಪೈರ್​ ಗಮನಿಸಿಯೇ ಇಲ್ಲ. ಸದ್ಯ, ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಅಲ್ಲದೆ, ಅಂಪೈರ್​ ನಿರ್ಧಾರದಿಂದ ಭಾರತಕ್ಕೆ ದೊಡ್ಡ ಮೋಸ ಉಂಟಾಗಿದೆ ಎಂದು ದೂರುತ್ತಿದ್ದಾರೆ.

ಇದನ್ನೂ ಓದಿ: Virat Kohli: ಟೀಂ ಇಂಡಿಯಾ ಸೋತ ಬೆನ್ನಲ್ಲೇ ಕೊಹ್ಲಿಯನ್ನು ಹೀನಾಯವಾಗಿ ಹೀಯಾಳಿಸಿದ ಪಾಕಿಸ್ತಾನ

Virat Kohli: ಪಾಕಿಸ್ತಾನ ಪತ್ರಕರ್ತನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ಖಡಕ್ ಪ್ರಶ್ನೆಗೆ ನಾಯಕ ಉತ್ತರ ಹೇಗಿತ್ತು ಗೊತ್ತಾ?

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ