KL Rahul: ಕೆಎಲ್ ರಾಹುಲ್ ಪಂಜಾಬ್ ಪರ ತುಂಬಾ ನಿಧಾನವಾಗಿ ಆಡಿದ್ದರು: ಮಾಜಿ ಕ್ರಿಕೆಟಿಗನ ಗಂಭೀರ ಆರೋಪ

KL Rahul: ಕೆಎಲ್ ರಾಹುಲ್ ಇದುವರೆಗೆ 94 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಒಟ್ಟು 3273 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕಗಳು ಕೂಡ ಸೇರಿವೆ.

KL Rahul: ಕೆಎಲ್ ರಾಹುಲ್ ಪಂಜಾಬ್ ಪರ ತುಂಬಾ ನಿಧಾನವಾಗಿ ಆಡಿದ್ದರು: ಮಾಜಿ ಕ್ರಿಕೆಟಿಗನ ಗಂಭೀರ ಆರೋಪ
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 20, 2022 | 4:13 PM

ಮಾರ್ಚ್ 26 ರಿಂದ ಪ್ರಾರಂಭವಾಗುವ ಐಪಿಎಲ್ 2022 ರಲ್ಲಿ ಕೆಎಲ್ ರಾಹುಲ್ ಹೊಸ ತಂಡ ಲಕ್ನೋ ಸೂಪರ್ ಜೈಂಟ್ಸ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಾಹುಲ್ ಈಗಾಗಲೇ ಭಾರತ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಇದಕ್ಕೆ ಒಂದು ಕಾರಣ ಐಪಿಎಲ್ 2020 ರಲ್ಲಿ ಪ್ರದರ್ಶನ ಎಂದರೆ ತಪ್ಪಾಗಲಾರದು. ಏಕೆಂದರೆ ಐಪಿಎಲ್ ಸೀಸನ್ 13 ನಲ್ಲಿ ರಾಹುಲ್ ಅವರು ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದರು. ಆದರೆ ನಾಯಕನಾಗಿ ಅವರು ಹೆಚ್ಚು ಯಶಸ್ವಿಯಾಗಿರಲಿಲ್ಲ. ಆದರೆ ಈ ಬಾರಿ ಅವರು ಲಕ್ನೋ ತಂಡದ ನಾಯಕನಾಗಿ ಯಶಸ್ಸನ್ನು ಎದುರು ನೋಡುತ್ತಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ನಾಯಕತ್ವ ವಹಿಸಿಕೊಳ್ಳುವ ಮೊದಲು ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದರು.

ಆದರೆ ಪಂಜಾಬ್ ಕಿಂಗ್ಸ್ ಪರ ತುಂಬಾ ತುಲನಾತ್ಮಕವಾಗಿ ನಿಧಾನವಾಗಿ ಆಡಿದ್ದರು ಎಂದು ಟೀಮ್ ಇಂಡಿಯಾದ ಮಾಜಿ ಆಟಗಾರ ಆಕಾಶ್ ಚೋಪ್ರಾ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಹಳೆಯ ತಂಡದಲ್ಲಿ ರಾಹುಲ್ ನಿಧಾನಗತಿಯಲ್ಲಿ ಬ್ಯಾಟ್ ಬೀಸುತ್ತಿದ್ದರು. ಈಗ ಹೊಸ ಫ್ರಾಂಚೈಸಿ ಪರ ಆಡುವಾಗ ತುಸು ವೇಗವಾಗಿ ಆಡಬೇಕಾಗುತ್ತದೆ ಎಂದು ಚೋಪ್ರಾ ಹೇಳಿದ್ದಾರೆ.

ರಾಹುಲ್ ಅವರು ಹಾರ್ದಿಕ್ ಪಾಂಡ್ಯ ಅವರಂತೆ ಕ್ಲೀನ್ ಸ್ಲೇಟ್ ಹೊಂದಿದ್ದಾರೆ . ಆದರೆ ಪಂಜಾಬ್ ಕಿಂಗ್ಸ್ ತಂಡವೇ ಹಾಗೆ ಇದ್ದುದರಿಂದ ರಾಹುಲ ನಿಧಾನವಾಗಿ ಆಡುತ್ತಿದ್ದರು. ಆದರೆ ಈಗ ಮುಕ್ತವಾಗಿ ಆಟವಾಡಬೇಕಾಗಿದೆ. ಕ್ರಿಕೆಟ್​ನಲ್ಲಿ ಮಾಡು ಇಲ್ಲವೇ ಮಡಿ ಮುಖ್ಯ. ಈಗ ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ಮತ್ತು ಕೋಚ್ ಆಂಡಿ ಫ್ಲವರ್ ಇದ್ದಾರೆ. ಇಬ್ಬರು ಉತ್ತಮ ಕ್ರಿಕೆಟಿಗರು. ಹೀಗಾಗಿ ಲಕ್ನೋ ಪರ ನೀವು ವೇಗದ ಬ್ಯಾಟಿಂಗ್ ಮೂಲಕ ಅಬ್ಬರಿಸಲೇಬೇಕಿದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ.

ಕೆಎಲ್ ರಾಹುಲ್ ಇದುವರೆಗೆ 94 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಒಟ್ಟು 3273 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕಗಳು ಕೂಡ ಸೇರಿವೆ. ಐಪಿಎಲ್ 2020 ರಲ್ಲಿ ರಾಹುಲ್ 14 ಪಂದ್ಯಗಳಲ್ಲಿ 670 ರನ್ ಗಳಿಸಿದ್ದರು. ಇನ್ನು ಕಳೆದ ಸೀಸನ್​ನಲ್ಲಿ 13 ಪಂದ್ಯಗಳಲ್ಲಿ 626 ರನ್ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಲಕ್ನೋ ಸೂಪರ್ ಜೈಂಟ್ಸ್ ಪರ ಕೆಎಲ್ ರಾಹುಲ್ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್‌ ತನ್ನ ಮೊದಲ ಪಂದ್ಯವನ್ನು ಮಾರ್ಚ್ 28 ರಂದು ಗುಜರಾತ್ ಟೈಟನ್ಸ್ ವಿರುದ್ಧ ಆಡಲಿದೆ. ಇದರೊಂದಿಗೆ ಐಪಿಎಲ್​ನಲ್ಲಿ ಹೊಸ ಎರಡು ತಂಡಗಳು ಅಭಿಯಾನ ಆರಂಭಿಸಲಿದೆ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

(‘KL Rahul was playing slow for Punjab Kings’: Aakash Chopra)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ