IND vs AUS ODI: ಇಂದು ಸಂಜೆ ಕೆಎಲ್ ರಾಹುಲ್ ಸುದ್ದಿಗೋಷ್ಠಿ: ಮಹತ್ವದ ಹೇಳಿಕೆ ಸಾಧ್ಯತೆ

KL Rahul Press conference: ಆಸ್ಟ್ರೇಲಿಯಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ಭಾರತ ತಂಡದ ಕ್ಯಾಪ್ಟನ್ ಕೆಎಲ್ ರಾಹುಲ್ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕೆಎಲ್ ರಾಹುಲ್​ಗೆ ಕೆಲ ಪ್ರಶ್ನೆಗಳು ಎದುರಾಗಲಿದೆ. ಓಪನರ್ ಆಗಿ ಯಾರು ಆಡಲಿದ್ದಾರೆ ಎಂಬ ಗೊಂದಲ ಎಲ್ಲರಲ್ಲಿದೆ. ಗಿಲ್, ಕಿಶನ್ ಜೊತೆ ರುತುರಾಜ್ ಗಾಯಕ್ವಾಡ್ ಇರುವುದರಿಂದ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ.

IND vs AUS ODI: ಇಂದು ಸಂಜೆ ಕೆಎಲ್ ರಾಹುಲ್ ಸುದ್ದಿಗೋಷ್ಠಿ: ಮಹತ್ವದ ಹೇಳಿಕೆ ಸಾಧ್ಯತೆ
KL Rahul press conference
Follow us
Vinay Bhat
|

Updated on: Sep 21, 2023 | 9:35 AM

ಏಷ್ಯಾಕಪ್ 2023 ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ ಬಳಿಕ ಭಾರತ ಕ್ರಿಕೆಟ್ ತಂಡ ಇದೀಗ ಮತ್ತೊಂದು ಮಹತ್ವದ ಸರಣಿಗೆ ಸಜ್ಜಾಗುತ್ತಿದೆ. ನಾಳೆಯಿಂದ (ಸೆಪ್ಟೆಂಬರ್ 22) ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್ ಅವರನ್ನು ನಾಯಕನಾಗಿ ಆಯ್ಕೆ ಮಾಡಲಾಗಿದೆ. ಇದೀಗ ಸರಣಿ ಆರಂಭಕ್ಕೂ ಮುನ್ನ ಕ್ಯಾಪ್ಟನ್ ರಾಹುಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕೆಎಲ್ ರಾಹುಲ್​ಗೆ ಕೆಲ ಪ್ರಶ್ನೆಗಳು ಎದುರಾಗಲಿದೆ. ಓಪನರ್ ಆಗಿ ಯಾರು ಆಡಲಿದ್ದಾರೆ ಎಂಬ ಗೊಂದಲ ಎಲ್ಲರಲ್ಲಿದೆ. ಗಿಲ್, ಕಿಶನ್ ಜೊತೆ ರುತುರಾಜ್ ಗಾಯಕ್ವಾಡ್ ಇರುವುದರಿಂದ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಅಂತೆಯೆ ಶ್ರೇಯಸ್ ಅಯ್ಯರ್ ಫಿಟ್ ಆಗಿದ್ದಾರಾ, ಅವರು ಕಣಕ್ಕಿಳಿಯುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಲಿದ್ದಾರೆ. ರವಿಚಂದ್ರನ್ ಅಶ್ವಿನ್ ಆಯ್ಕೆ ಆಗಿದ್ದು, ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಇದೆಯೇ? ಹೀಗೆ ಅನೇಕ ಪ್ರಶ್ನೆಗಳು ರಾಹುಲ್ ಮುಂದಿದೆ.

ಇಂಗ್ಲೆಂಡ್​ನಲ್ಲಿ ಶತಕ ಸಿಡಿಸಿ ಅಬ್ಬರಿಸಿದ ಕರುಣ್ ನಾಯರ್

ಇದನ್ನೂ ಓದಿ
Image
ಏಷ್ಯನ್ ಗೇಮ್ಸ್​ನ ಮೊದಲ ಪಂದ್ಯದಲ್ಲೇ ಭಾರತ ಸ್ಫೋಟಕ ಬ್ಯಾಟಿಂಗ್
Image
ವಿಶ್ವಕಪ್​ಗೆ ತಯಾರಿ: ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಸರಣಿ ಆರಂಭ
Image
ಟಾಸ್ ಗೆದ್ದ ಮಲೇಷ್ಯಾ: ಭಾರತ ಮಹಿಳಾ ತಂಡ ಬ್ಯಾಟಿಂಗ್
Image
ಡಮರು..ತ್ರಿಶೂಲ...ಉತ್ತರ ಪ್ರದೇಶದಲ್ಲಿ ಹೊಸ ಕ್ರಿಕೆಟ್ ಸ್ಟೇಡಿಯಂ

ಭಾರತ ತಂಡ ಏಷ್ಯಾಕಪ್ 2023 ಪ್ರಶಸ್ತು ಗೆದ್ದು ಆತ್ಮವಿಶ್ವಾಸದಲ್ಲಿದ್ದರೆ, ಇತ್ತ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 2-0 ಮುನ್ನಡೆ ಸಾಧಿಸಿ ಬಳಿಕ 2-3 ಅಂತರದ ಸೋಲಿನ ಕಹಿ ಅನುಭವಿಸಿ ಕಣಕ್ಕಿಳಿಯುತ್ತಿದೆ. ಇಂಡೋ-ಆಸೀಸ್ ನಡುವೆ ಮೊದಲ ಪಂದ್ಯ ಸೆ. 22 ರಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಶುರುವಾಗಲಿದ್ದು, 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಮೊಹಾಲಿ ಪಿಚ್:

ದೇಶದ ಇತರ ನಗರಗಳ ಮೈದಾನಗಳಿಗೆ ಹೋಲಿಸಿದರೆ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್‌ ಪಿಚ್ ಹೆಚ್ಚು ಹಸಿರಿನಿಂದ ಕೂಡಿದೆ. ಹೀಗಾಗಿ ವೇಗದ ಬೌಲರ್‌ಗಳು ಈ ಪಿಚ್‌ನಿಂದ ಹೆಚ್ಚಿನ ನೆರವನ್ನು ನಿರೀಕ್ಷಿಸಬಹುದು. ಅಲ್ಲದೆ ಬೌನ್ಸ್ ಕೂಡ ವೇಗಿಗಳಿಗೆ ನೆರವಾಗುವ ಸಾಧ್ಯತೆಯಿದೆ. ಮೊಹಾಲಿ ಸ್ಟೇಡಿಯಂನಲ್ಲಿ ನಡೆದ ಕೊನೆಯ ಐದು ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದ್ದು ಒಂದು ಪಂದ್ಯ ಮಾತ್ರ. ಉಳಿದ ನಾಲ್ಕು ಪಂದ್ಯಗಳಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ. ಈ ಪಿಚ್​ನಲ್ಲಿ ರನ್ ಮಳೆ ಸುರಿಯುವ ನಿರೀಕ್ಷೆ ಇದೆ. ಟಾಸ್ ಗೆದ್ದ ನಾಯಕನು ಮೊದಲು ಬೌಲ್ ಅನ್ನು ಆಯ್ಕೆ ಮಾಡುವುದು ಉತ್ತಮ ಆಯ್ಕೆ.

ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಆಷ್ಟನ್ ಅಗರ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೋನಿಸ್, ಮಿಚ್ ಮಾರ್ಷ್, ಸೀನ್ ಅಬಾಟ್, ಕ್ಯಾಮರೂನ್ ಗ್ರೀನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ