AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಇಂಗ್ಲೆಂಡ್ ವಿರುದ್ದದ ಸರಣಿಗೆ ಕೆಎಲ್ ರಾಹುಲ್ ಅಲಭ್ಯ

Team India Squad: ಭಾರತ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ),  ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ.

KL Rahul: ಇಂಗ್ಲೆಂಡ್ ವಿರುದ್ದದ ಸರಣಿಗೆ ಕೆಎಲ್ ರಾಹುಲ್ ಅಲಭ್ಯ
KL Rahul
TV9 Web
| Edited By: |

Updated on:Jun 16, 2022 | 2:11 PM

Share

ಜುಲೈ 1 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಪಂದ್ಯದಿಂದ ಕೆಎಲ್ ರಾಹುಲ್ (KL Rahul) ಹೊರಗುಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಾಹುಲ್ ಅವರನ್ನು ಇಂಗ್ಲೆಂಡ್ ಪ್ರವಾಸದಿಂದ ಕೈಬಿಡಲು ಚಿಂತಿಸಲಾಗಿದೆ. ಅಷ್ಟೇ ಅಲ್ಲದೆ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಫಿಟ್​ನೆಸ್​ಗೆ ಒಳಪಡಿಸುತ್ತೇವೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಜೂನ್ 20 ರಂದು ಟೀಮ್ ಇಂಡಿಯಾ (Team India) ಟೆಸ್ಟ್ ತಂಡದ ಆಟಗಾರರು ಇಂಗ್ಲೆಂಡ್​ಗೆ ತೆರಳಲಿದೆ. ಆದರೆ ಇದಕ್ಕೂ ಮುನ್ನ, ಅಂದರೆ ಶನಿವಾರ ಕೆಎಲ್ ರಾಹುಲ್ ಅವರು ಫಿಟ್​ನೆಸ್​ ಟೆಸ್ಟ್​ಗೆ ಒಳಗಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಗಾಯದ ಸಮಸ್ಯೆಯಲ್ಲಿ ಬದಲಾವಣೆ ಇಲ್ಲದ ಕಾರಣ ತಂಡದಿಂದ ಕೈಹಿಡಲು ನಿರ್ಧರಿಸಲಾಗಿದೆ.

ಸೌತ್ ಆಫ್ರಿಕಾ ವಿರುದ್ದ ಟಿ20 ಸರಣಿಗೆ ನಾಯಕರಾಗಿ ಆಯ್ಕೆಯಾಗಿದ್ದ ಕೆಎಲ್ ರಾಹುಲ್ ತೊಡೆಸಂದು ಗಾಯದ ಕಾರಣ ತಂಡದಿಂದ ಅಂತಿಮ ಕ್ಷಣದಲ್ಲಿ ಹೊರಗುಳಿದಿದ್ದರು. ಇದರ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ದದ ಸರಣಿಗೂ ರಾಹುಲ್ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಕಾರಣ ರಾಹುಲ್ ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಇದಾಗ್ಯೂ ಟಿ20 ಸರಣಿ ಹಾಗೂ ಏಕದಿನ ಸರಣಿಗೆ ಲಭ್ಯರಿರಲಿದ್ದಾರಾ ಎಂಬುದು ಶನಿವಾರ ನಡೆಯಲಿರುವ ಫಿಟ್​ನೆಸ್​ ಟೆಸ್ಟ್​ ಬಳಿಕ ಗೊತ್ತಾಗಲಿದೆ.

ಕೆಎಲ್ ರಾಹುಲ್ ಅದ್ಭುತ ಫಾರ್ಮ್‌ನಲ್ಲಿದ್ದು, ಹೀಗಾಗಿಯೇ ಇಂಗ್ಲೆಂಡ್ ವಿರುದ್ದದ ಸರಣಿಯಲ್ಲಿ ನಿರ್ಣಾಯಕ ಪಾತ್ರವಹಿಸುವ ನಿರೀಕ್ಷೆಯಿತ್ತು. ಅಲ್ಲದೆ ರೋಹಿತ್ ಶರ್ಮಾ ಅವರೊಂದಿಗೆ ಟೆಸ್ಟ್‌ನಲ್ಲಿ ಇನಿಂಗ್ಸ್ ಆರಂಭಿಸಬೇಕಿತ್ತು. ಆದರೆ, ಇದೀಗ ಗಾಯಗೊಂಡಿರುವ ಕಾರಣ ಟೀಮ್ ಇಂಡಿಯಾ ಪರ್ಯಾಯ ಆರಂಭಿಕನ ಮೊರೆ ಹೋಗುವ ಸಾಧ್ಯತೆ ಹೆಚ್ಚು. ಅಂದಹಾಗೆ, 17 ಸದಸ್ಯರ ತಂಡದಲ್ಲಿ ಶುಭಮನ್ ಗಿಲ್ ಮೂರನೇ ಆರಂಭಿಕನಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಹಿಟ್​ಮ್ಯಾನ್ ಜೊತೆ ಗಿಲ್ ಆರಂಭಿಕರಾಗಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಕಳೆದ ವರ್ಷ ನಡೆದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಈ ಪಂದ್ಯವನ್ನು ಜುಲೈ 1 ರಿಂದ 5 ರವರೆಗೆ ಆಡಲಾಗುತ್ತದೆ. ಇದಲ್ಲದೆ ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಪಂದ್ಯ ಮತ್ತು 3 ಏಕದಿನ ಪಂದ್ಯಗಳನ್ನು ಸಹ ಆಡಲಿದೆ.

ಭಾರತ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ),  ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿದ್ಧ ಕೃಷ್ಣ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:06 pm, Thu, 16 June 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ