ಕೆಎಲ್ ರಾಹುಲ್‌ಗೆ ಒಲಿದ ಬೆಸ್ಟ್ ಫೀಲ್ಡರ್ ಪದಕ: ಇಲ್ಲಿದೆ ವಿಡಿಯೋ
ಈ ಬಾರಿ ಬೆಸ್ಟ್ ಫೀಲ್ಡರ್ ಯಾರು ಎಂಬುದನ್ನು ಟೀಮ್ ಇಂಡಿಯಾ ವಿಡಿಯೋ ಮೂಲಕ ಬಹಿರಂಗಪಡಿಸಿದೆ. ಈ ವಿಡಿಯೋದ ಆರಂಭದಲ್ಲಿ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಉತ್ತಮ ಪ್ರದರ್ಶನ ನೀಡಿದ ಆಟಗಾರರ ಬಗ್ಗೆ ಪ್ರಸ್ತಾಪಿಸಿದ್ದರು. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್ ಮತ್ತು ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದ್ದಾರೆ ಎಂದು ಹಾಡಿ ಹೊಗಳಿದರು.
ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ್ ವಿರುದ್ಧ 8ನೇ ಬಾರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಗೆಲುವಿನ ಖುಷಿಯಲ್ಲಿದೆ. ಈ ಪಂದ್ಯದ ಬಳಿಕ ನಡೆದ ಡ್ರೆಸ್ಸಿಂಗ್ ರೂಮ್ ಸಂಭ್ರಮದಲ್ಲಿ ಅತ್ಯುತ್ತಮ ಫೀಲ್ಡರ್ಗೆ ವಿಶೇಷ ಗೌರವ ನೀಡಲಾಗಿದೆ. ಮೊದಲೆರಡು ಪಂದ್ಯಗಳಲ್ಲಿ ಅತ್ಯುತ್ತಮ ಫೀಲ್ಡಿಂಗ್ ಮೂಲಕ ವಿರಾಟ್ ಕೊಹ್ಲಿ ಹಾಗೂ ಶಾರ್ದೂಲ್ ಠಾಕೂರ್ ಪದಕಕ್ಕೆ ಕೊರೊಳೊಡ್ಡಿದ್ದರು. ಹೀಗಾಗಿಯೇ ಪಾಕ್ ವಿರುದ್ಧದ ಪಂದ್ಯದಲ್ಲಿ ಈ ಗೌರವ ಯಾರಿಗೆ ದಕ್ಕಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು.
ಇದೀಗ ಈ ಬಾರಿ ಬೆಸ್ಟ್ ಫೀಲ್ಡರ್ ಯಾರು ಎಂಬುದನ್ನು ಟೀಮ್ ಇಂಡಿಯಾ ವಿಡಿಯೋ ಮೂಲಕ ಬಹಿರಂಗಪಡಿಸಿದೆ. ಈ ವಿಡಿಯೋದ ಆರಂಭದಲ್ಲಿ ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಉತ್ತಮ ಪ್ರದರ್ಶನ ನೀಡಿದ ಆಟಗಾರರ ಬಗ್ಗೆ ಪ್ರಸ್ತಾಪಿಸಿದ್ದರು. ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್ ಮತ್ತು ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದ್ದಾರೆ ಎಂದು ಹಾಡಿ ಹೊಗಳಿದರು.
ಅಲ್ಲದೆ ರವೀಂದ್ರ ಜಡೇಜಾ ವಿಶ್ವದ ಅತ್ಯುತ್ತಮ ಫೀಲ್ಡರ್ ಎಂದು ಬಣ್ಣಿಸಿದರು. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅವರ ವೇಗ ಮತ್ತು ನಿಖರತೆಯನ್ನು ಶ್ಲಾಘಿಸಿದರು. ವಿಕೆಟ್ ಕೀಪಿಂಗ್ ಬಗ್ಗೆಯೂ ದಿಲೀಪ್ ಮಾತನಾಡಿದರು. ಭಾರತದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಅವರನ್ನು ಹೊಗಳಿದ ಅವರು, ಪಾಕ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಎದುರಿಸಿದ ಕಷ್ಟಗಳ ಬಗ್ಗೆ ವಿಶೇಷವಾಗಿ ಪ್ರಸ್ತಾಪಿಸಿದರು.
ಕೆಎಲ್ ರಾಹುಲ್ ಬೆಸ್ಟ್ ಫೀಲ್ಡರ್:
ಪಾಕ್ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮವಾಗಿ ವಿಕೆಟ್ ಕೀಪಿಂಗ್ ಮಾಡಿದ ಕೆಎಲ್ ರಾಹುಲ್ ಅವರ ವಿಡಿಯೋವನ್ನು ಪ್ರದರ್ಶಿಸುವ ಮೂಲಕ ಈ ಬಾರಿಯ ಬೆಸ್ಟ್ ಫೀಲ್ಡರ್ ಪ್ರಶಸ್ತಿಗೆ ಅವರು ಅರ್ಹರು ಎಂದು ಘೋಷಿಸಲಾಯಿತು. ಆ ಬಳಿಕ ಶಾರ್ದೂಲ್ ಠಾಕೂರ್ ಅವರು ಕೆಎಲ್ ರಾಹುಲ್‌ಗೆ ಬೆಸ್ಟ್ ಫೀಲ್ಡರ್ ಪದಕವನ್ನು ನೀಡಿ ಗೌರವಿಸಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಪಾಕಿಸ್ತಾನ್ (ಪ್ಲೇಯಿಂಗ್ XI): ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್.