India vs South Africa: 146 ರನ್ಸ್​ vs 8 ವಿಕೆಟ್: ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ?

| Updated By: ಝಾಹಿರ್ ಯೂಸುಫ್

Updated on: Dec 30, 2021 | 9:14 PM

Team India: ಟೀಮ್ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಕೆಎಲ್ ರಾಹುಲ್ ಹಾಗೂ ಮೊಹಮ್ಮದ್ ಶಮಿ. ಕೆಎಲ್ ರಾಹುಲ್ ಮೊದಲ ಇನಿಂಗ್ಸ್​ನಲ್ಲಿ 123 ರನ್​ಗಳಿಸಿದರೆ, ಶಮಿ 5 ವಿಕೆಟ್ ಕಬಳಿಸಿದ್ದರು.

India vs South Africa: 146 ರನ್ಸ್​ vs 8 ವಿಕೆಟ್: ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ?
Team India
Follow us on

ಭಾರತ- ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಐತಿಹಾಸಿಕ ಜಯವನ್ನು ತನ್ನದಾಗಿಸಿಕೊಂಡಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ಸೆಂಚುರಿಯನ್ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಗೆದ್ದಿರಲಿಲ್ಲ. ಇದೀಗ ಟೀಮ್ ಇಂಡಿಯಾ 113 ರನ್​ಗಳ ಜಯ ಸಾಧಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಅಷ್ಟೇ ಅಲ್ಲದೆ ಈ ಮೈದಾನದಲ್ಲಿ ಗೆದ್ದ ಏಷ್ಯಾದ ಮೊದಲ ತಂಡ ಎಂಬ ದಾಖಲೆಯನ್ನೂ ಕೂಡ ಭಾರತ ಬರೆದಿದೆ.

ಇನ್ನು ಟೀಮ್ ಇಂಡಿಯಾದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಕೆಎಲ್ ರಾಹುಲ್ ಹಾಗೂ ಮೊಹಮ್ಮದ್ ಶಮಿ. ಕೆಎಲ್ ರಾಹುಲ್ ಮೊದಲ ಇನಿಂಗ್ಸ್​ನಲ್ಲಿ 123 ರನ್​ಗಳಿಸಿದರೆ, ಶಮಿ 5 ವಿಕೆಟ್ ಕಬಳಿಸಿದ್ದರು. ಇನ್ನು 2ನೇ ಇನಿಂಗ್ಸ್​ನಲ್ಲಿ ರಾಹುಲ್ 23 ರನ್​ ಕಲೆಹಾಕಿದ್ದರು. ಇತ್ತ ಮೊಹಮ್ಮದ್ ಶಮಿ 3 ಪ್ರಮುಖ ವಿಕೆಟ್ ಉರುಳಿಸಿದ್ದರು.

ಈ ಮೂಲಕ ಎರಡು ಇನಿಂಗ್ಸ್​ಗಳಿಂದ ಕೆಎಲ್ ರಾಹುಲ್ 146 ರನ್​ಗಳಿಸಿದರೆ, ಮೊಹಮ್ಮದ್ ಶಮಿ 8 ವಿಕೆಟ್ ಉರುಳಿಸಿ ಮಿಂಚಿದ್ದರು. ಇಬ್ಬರೂ ಭರ್ಜರಿ ಪ್ರದರ್ಶನ ನೀಡಿದ ಕಾರಣ ಮ್ಯಾನ್ ಆಫ್ ದಿ ಮ್ಯಾಚ್ ಯಾರಿಗೆ ನೀಡಬೇಕೆಂಬ ಗೊಂದಲ ಕೂಡ ಏರ್ಪಟ್ಟಿತ್ತು. ಇದಾಗ್ಯೂ ಅಂತಿಮವಾಗಿ ಈ ಪಂದ್ಯದಲ್ಲಿ ಏಕೈಕ ಶತಕ ಸಿಡಿಸಿದ ಆಟಗಾರನಾಗಿ ಗುರುತಿಸಿಕೊಂಡಿದ್ದ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಯಿತು.

ಏಕೆಂದರೆ ಟೀಮ್ ಇಂಡಿಯಾ ಪರ ಮೊದಲ ಇನಿಂಗ್ಸ್​ನಲ್ಲಿ ಮೊಹಮ್ಮದ್ ಶಮಿ 5 ವಿಕೆಟ್ ಪಡೆದಿದ್ದರೆ, ದಕ್ಷಿಣ ಆಫ್ರಿಕಾ ಪರ ಲುಂಗಿ ಎನ್​ಗಿಡಿ 6 ವಿಕೆಟ್ ಕಬಳಿಸಿದ್ದರು. ಆದರೆ ಶತಕ ಬಾರಿಸಿದ್ದು ಕೆಎಲ್ ರಾಹುಲ್ ಮಾತ್ರ. ಮೊದಲ ಇನಿಂಗ್ಸ್​ನಲ್ಲಿ ರಾಹುಲ್ 123 ರನ್​ಗಳ ಅಮೋಘ ಇನಿಂಗ್ಸ್ ಆಡಿದ ಪರಿಣಾಮ ಟೀಮ್ ಇಂಡಿಯಾ ಮುನ್ನಡೆ ಸಾಧಿಸಿತ್ತು. ಈ ಇನಿಂಗ್ಸ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿತ್ತು. ಹೀಗಾಗಿ ಅಂತಿಮವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಯಿತು.

ಇದನ್ನೂ ಓದಿ:  India vs South Africa 1st Test: ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಭರ್ಜರಿ ಜಯ

ಇದನ್ನೂ ಓದಿ:  ಭಾರತವನ್ನು ಗೇಲಿ ಮಾಡಿದ ಇಂಗ್ಲೆಂಡ್ ಕ್ರಿಕೆಟಿಗನ ಕಾಲೆಳೆದ ಆಸ್ಟ್ರೇಲಿಯಾ ಪತ್ರಕರ್ತೆ..!

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(KL Rahul won the man of the match for his terrific hundred)