AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸೆಹ್ವಾಗ್ ದಾಖಲೆ ಮುರಿದು ಶತಕದಂಚಿನಲ್ಲಿ ಎಡವಿದ ಕೆಎಲ್ ರಾಹುಲ್

KL Rahul: ಇಂಗ್ಲೆಂಡ್ ಪ್ರವಾಸದಲ್ಲಿ ಕೆ.ಎಲ್. ರಾಹುಲ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಮ್ಯಾಂಚೆಸ್ಟರ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ವೀರೇಂದ್ರ ಸೆಹ್ವಾಗ್ ಅವರ ದಾಖಲೆ ಮುರಿದರು. 500 ರನ್‌ಗಳನ್ನು ಪೂರ್ಣಗೊಳಿಸಿದರು. ಆದರೆ ಶತಕದಂಚಿನಲ್ಲಿ ಎಡವಿದ ರಾಹುಲ್ 90 ರನ್ ಗಳಿಸಿ ಔಟಾದರು. ಆದಾಗ್ಯೂ SENA ದೇಶಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆರಂಭಿಕ ಆಟಗಾರ ಎನಿಸಿಕೊಂಡರು.

IND vs ENG: ಸೆಹ್ವಾಗ್ ದಾಖಲೆ ಮುರಿದು ಶತಕದಂಚಿನಲ್ಲಿ ಎಡವಿದ ಕೆಎಲ್ ರಾಹುಲ್
Kl Rahul
ಪೃಥ್ವಿಶಂಕರ
|

Updated on:Jul 27, 2025 | 4:59 PM

Share

ಇಂಗ್ಲೆಂಡ್‌ ಪ್ರವಾಸದಲ್ಲಿ ಕನ್ನಡಿಗ ಕೆಎಲ್ ರಾಹುಲ್ (KL Rahul) ಪ್ರದರ್ಶನ ಅದ್ಭುತವಾಗಿದೆ. ಪ್ರತಿಯೊಂದು ಪಂದ್ಯದಲ್ಲೂ ರಾಹುಲ್ ಬ್ಯಾಟ್​ನಿಂದ ರನ್​ಗಳ ಮಳೆ ಹರಿಯುತ್ತಿದೆ. ಈ ಮೂಲಕ ರಾಹುಲ್ ಒಂದಿಲ್ಲೊಂದು ದಾಖಲೆಗಳನ್ನು ಸಹ ಮುರಿಯುತ್ತಿದ್ದಾರೆ. ಇದೀಗ ಮ್ಯಾಂಚೆಸ್ಟರ್ ಟೆಸ್ಟ್ (Manchester Test) ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲೂ ಅರ್ಧಶತಕದ ಇನ್ನಿಂಗ್ಸ್ ಆಡಿರುವ ರಾಹುಲ್ ಆರಂಭಿಕ ಆಟಗಾರನಾಗಿ ವೀರೇಂದ್ರ ಸೆಹ್ವಾಗ್ (Virender Sehwag) ಅವರನ್ನು ಸಹ ಹಿಂದಿಕ್ಕಿದ್ದಾರೆ. ಆದಾಗ್ಯೂ ಈ ಸರಣಿಯಲ್ಲಿ ಸ್ಥಿರವಾಗಿ ರನ್ ಗಳಿಸುತ್ತಿರುವ ರಾಹುಲ್ ನಾಲ್ಕನೇ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಶತಕದ ಸಮೀಪಕ್ಕೆ ಬಂದು ಎಡವಿದ್ದಾರೆ. ಪಂದ್ಯದ ನಾಲ್ಕನೇ ದಿನದಾಟದಂತ್ಯಕ್ಕೆ 87 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದ ರಾಹುಲ್, ಐದನೇ ದಿನದಾಟದಲ್ಲಿ ಕೇವಲ 3 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ರಾಹುಲ್ ಕೇವಲ 10 ರನ್​ಗಳಿಂದ ಶತಕ ವಂಚಿತರಾಗಿದ್ದಾರೆ.

2ನೇ ಬಾರಿಗೆ ನರ್ವಸ್ 90 ಗೆ ರಾಹುಲ್ ಬಲಿ

ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದ ಕೊನೆಯ ದಿನದಂದು ಟೀಂ ಇಂಡಿಯಾದ ಎರಡನೇ ಇನ್ನಿಂಗ್ಸ್ ಅನ್ನು ಮುನ್ನಡೆಸಲು ಬಂದ ರಾಹುಲ್, ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲು ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅವರ ಎಸೆತದಲ್ಲಿ ರಾಹುಲ್ ಎಲ್‌ಬಿಡಬ್ಲ್ಯೂ ಆಗಿ ಔಟಾದರು. ಇದರೊಂದಿಗೆ, ರಾಹುಲ್ ಈ ಟೆಸ್ಟ್ ಸರಣಿಯಲ್ಲಿ ತಮ್ಮ ಮೂರನೇ ಶತಕವನ್ನು ಪೂರ್ಣಗೊಳಿಸುವ ಅವಕಾಶವನ್ನು ಕಳೆದುಕೊಂಡರು. ಈ ರೀತಿಯಾಗಿ 8 ವರ್ಷಗಳ ನಂತರ ರಾಹುಲ್ ಟೆಸ್ಟ್ ಕ್ರಿಕೆಟ್‌ನಲ್ಲಿ 90 ರನ್ ಗಳಿಸಿ ಔಟಾದ ಬೇಡದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡರು. 90 ರನ್ ತಲುಪಿದ ನಂತರ ಶತಕವನ್ನು ಪೂರ್ಣಗೊಳಿಸಲು ಸಾಧ್ಯವಾಗದಿರುವುದು ಅವರ ವೃತ್ತಿಜೀವನದಲ್ಲಿ ಇದು ಎರಡನೇ ಬಾರಿ. 2017 ರ ಆರಂಭದಲ್ಲಿಯೂ ರಾಹುಲ್ ಆಸ್ಟ್ರೇಲಿಯಾ ವಿರುದ್ಧ 90 ರನ್ ಗಳಿಸಿ ಔಟಾಗಿದ್ದರು.

ಸೆಹ್ವಾಗ್‌ ಹಿಂದಿಕ್ಕಿದ ರಾಹುಲ್

ರಾಹುಲ್ ತಮ್ಮ ಶತಕವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೂ SENA (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ) ದೇಶಗಳಲ್ಲಿ ಆರಂಭಿಕ ಆಟಗಾರನಾಗಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಆಟಗಾರರ ಪಟ್ಟಿಯಲ್ಲಿ ವೀರೇಂದ್ರ ಸೆಹ್ವಾಗ್ ಅವರನ್ನು ಹಿಂದಿಕ್ಕಿದರು. ರಾಹುಲ್ ಈಗ 48 ಇನ್ನಿಂಗ್ಸ್‌ಗಳಲ್ಲಿ 6 ಶತಕಗಳು ಮತ್ತು 6 ಅರ್ಧಶತಕಗಳು ಸೇರಿದಂತೆ 1782 ರನ್‌ಗಳನ್ನು ಗಳಿಸಿದ್ದಾರೆ. ಮಾಜಿ ಆರಂಭಿಕ ಆಟಗಾರ ಸೆಹ್ವಾಗ್ 1574 ರನ್‌ಗಳನ್ನು ಗಳಿಸಿದ್ದಾರೆ. ಈಗ ಶ್ರೇಷ್ಠ ಬ್ಯಾಟ್ಸ್‌ಮನ್ ಸುನಿಲ್ ಗವಾಸ್ಕರ್ ಮಾತ್ರ ರಾಹುಲ್‌ಗಿಂತ ಮುಂದಿದ್ದು, ಅವರು ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಈ ದೇಶಗಳಲ್ಲಿ 57 ಇನ್ನಿಂಗ್ಸ್‌ಗಳಲ್ಲಿ ಒಟ್ಟು 2464 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ, ಗವಾಸ್ಕರ್ 8 ಶತಕಗಳು ಮತ್ತು 11 ಅರ್ಧಶತಕಗಳನ್ನು ಸಿಡಿಸಿದ್ದಾರೆ.

IND vs ENG: ಸಾವಿರ ರನ್​ಗಳ ಸರದಾರ ಕೆಎಲ್ ರಾಹುಲ್; ಗವಾಸ್ಕರ್ ದಾಖಲೆ ಶೇಕಿಂಗ್

ಈ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಶತಕ ಗಳಿಸಿಲ್ಲದಿರಬಹುದು, ಆದರೆ ಅವರು ನಾಯಕ ಶುಭ್​ಮನ್ ಗಿಲ್ ಅವರೊಂದಿಗೆ 188 ರನ್‌ಗಳ ಉತ್ತಮ ಪಾಲುದಾರಿಕೆಯನ್ನು ಹಂಚಿಕೊಂಡರು. ಈ ಇನ್ನಿಂಗ್ಸ್‌ ಮೂಲಕ ರಾಹುಲ್ ಪ್ರಸ್ತುತ ಸರಣಿಯಲ್ಲಿ 500 ರನ್‌ಗಳ ಗಡಿಯನ್ನು ಸಹ ಪೂರ್ಣಗೊಳಿಸಿದರು. ಕೇವಲ 8 ಇನ್ನಿಂಗ್ಸ್‌ಗಳಲ್ಲಿ 510 ರನ್ ಗಳಿಸಿರುವ ರಾಹುಲ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಈ ಸಾಧನೆ ಮಾಡಿದ್ದಾರೆ. ವಿಶೇಷವೆಂದರೆ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ತಮ್ಮ ಇಡೀ ವೃತ್ತಿಜೀವನದಲ್ಲಿ ಒಮ್ಮೆಯೂ ಟೆಸ್ಟ್ ಸರಣಿಯಲ್ಲಿ 500 ರನ್ ಗಳಿಸಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Sun, 27 July 25

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್