AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli vs Bairstow: ಬಾಯಿ ಮುಚ್ಕೊಂಡು ಆಡುವಂತೆ ಖಡಕ್ ವಾರ್ನಿಂಕ್ ಕೊಟ್ಟ ಕಿಂಗ್ ಕೊಹ್ಲಿ

Virat Kohli vs Bairstow: ಪಂದ್ಯದ ಮೂರನೇ ದಿನದಾಟದಲ್ಲಿ ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ ಭಾರತೀಯ ಬೌಲರ್​ಗಳನ್ನು ಕೆಣಕುವ ಪ್ರಯತ್ನ ಮಾಡಿದ್ದರು.

Virat Kohli vs Bairstow: ಬಾಯಿ ಮುಚ್ಕೊಂಡು ಆಡುವಂತೆ ಖಡಕ್ ವಾರ್ನಿಂಕ್ ಕೊಟ್ಟ ಕಿಂಗ್ ಕೊಹ್ಲಿ
Virat Kohli vs Bairstow
TV9 Web
| Edited By: |

Updated on:Jul 03, 2022 | 4:49 PM

Share

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ (India vs England) ನಡುವಣ 5ನೇ ಟೆಸ್ಟ್ ಪಂದ್ಯವು ಇದೀಗ ರೋಚಕ ಕಾದಾಟಕ್ಕೆ ಸಾಕ್ಷಿಯಾಗುತ್ತಿದೆ. ಮೊದಲ ಎರಡು ದಿನಗಳಲ್ಲಿ ಸರಾಗವಾಗಿ ಸಾಗಿದ್ದ ಪಂದ್ಯವು ಇದೀಗ ಆಟಗಾರರ ನಡುವಿನ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿದೆ. ಪಂದ್ಯದ ಮೂರನೇ ದಿನದಾಟದಲ್ಲಿ ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ (Jonny Bairstow) ಭಾರತೀಯ ಬೌಲರ್​ಗಳನ್ನು ಕೆಣಕುವ ಪ್ರಯತ್ನ ಮಾಡಿದ್ದರು. ಇದನ್ನು ಗಮನಿಸಿದ ವಿರಾಟ್ ಕೊಹ್ಲಿ (Virat Kohli) ವಾಗ್ವಾದಕ್ಕೆ ಇಳಿದರು. ಇತ್ತ ಕೊಹ್ಲಿಯ ಆಗಮನದೊಂದಿಗೆ ಬೈರ್​ಸ್ಟೋವ್ ತಣ್ಣಗಾದಂತೆ ಕಂಡು ಬಂದರು.

ಇದಾಗ್ಯೂ ಕೊಹ್ಲಿಯ ಕೋಪ ಕೊನೆಗೊಂಡಿರಲಿಲ್ಲ. ನೇರವಾಗಿ ಇಂಗ್ಲೆಂಡ್ ಆಟಗಾರನ ಬಳಿ ಬಂದು ಎಚ್ಚರಿಕೆ ನೀಡಿದರು. ಈ ಮಾತಿನ ಚಕಮಕಿ ನಡುವೆ ಬೈರ್​ಸ್ಟೋವ್ ಆಯ್ತು ಎಂಬ ಉತ್ತರ ನೀಡುತ್ತಿದ್ದಂತೆ, ಅತ್ತ ಕಡೆಯಿಂದ ಕೊಹ್ಲಿಯು ಬಾಯಿ ಮುಚ್ಕೊಂಡು ಆಡುವಂತೆ ಸನ್ನೆ ಮಾಡಿ ಸೂಚಿಸಿದರು. ಇದೀಗ ವಿರಾಟ್ ಕೊಹ್ಲಿಯ ಈ ವಾರ್ನಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಇದನ್ನೂ ಓದಿ
Image
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
Image
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Image
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ರಿಷಭ್ ಪಂತ್ (146) ಹಾಗೂ ರವೀಂದ್ರ ಜಡೇಜಾ (104) ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 416 ರನ್​ ಕಲೆಹಾಕಿದೆ. ಇದಕ್ಕುತ್ತರವಾಗಿ ಬ್ಯಾಟ್ ಬೀಸಿರುವ ಇಂಗ್ಲೆಂಡ್ 2ನೇ ದಿನದಾಟದ ಅಂತ್ಯಕ್ಕೆ 84 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತು. ಮೂರನೇ ದಿನದಾಟದಲ್ಲಿ ಬೆನ್​ ಸ್ಟೋಕ್ಸ್ ವಿಕೆಟ್ ಕಳೆದುಕೊಂಡಿರುವ ಇಂಗ್ಲೆಂಡ್ ತಂಡವು 43 ಓವರ್​ ವೇಳೆಗೆ 6 ವಿಕೆಟ್ ನಷ್ಟಕ್ಕೆ 185 ರನ್​ ಕಲೆಹಾಕಿದೆ.

ಟೀಮ್ ಇಂಡಿಯಾ ಪರ ನಾಯಕ ಜಸ್​ಪ್ರೀತ್ ಬುಮ್ರಾ 3 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಹಾಗೂ ಮೊಹಮ್ಮದ್ ಸಿರಾಜ್ ತಲಾ 1 ವಿಕೆಟ್ ಪಡೆದಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ:

ಭಾರತ ಪ್ಲೇಯಿಂಗ್ 11: ಶುಭಮನ್ ಗಿಲ್ , ಚೇತೇಶ್ವರ ಪೂಜಾರ , ಹನುಮ ವಿಹಾರಿ , ವಿರಾಟ್ ಕೊಹ್ಲಿ , ಶ್ರೇಯಸ್ ಅಯ್ಯರ್ , ರಿಷಭ್ ಪಂತ್ ( ವಿಕೆಟ್ ಕೀಪರ್ ) , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಮೊಹಮ್ಮದ್ ಶಮಿ , ಮೊಹಮ್ಮದ್ ಸಿರಾಜ್ , ಜಸ್ಪ್ರೀತ್ ಬುಮ್ರಾ (ನಾಯಕ)

ಇಂಗ್ಲೆಂಡ್ ಪ್ಲೇಯಿಂಗ್ 11: ಅಲೆಕ್ಸ್ ಲೀಸ್ , ಝಾಕ್ ಕ್ರಾಲಿ , ಒಲ್ಲಿ ಪೋಪ್ , ಜೋ ರೂಟ್ , ಜಾನಿ ಬೈರ್‌ಸ್ಟೋ , ಬೆನ್ ಸ್ಟೋಕ್ಸ್ (ನಾಯಕ) ಸ್ಯಾಮ್ ಬಿಲ್ಲಿಂಗ್ಸ್ , ಮ್ಯಾಟಿ ಪಾಟ್ಸ್ , ಸ್ಟುವರ್ಟ್ ಬ್ರಾಡ್ , ಜ್ಯಾಕ್ ಲೀಚ್ , ಜೇಮ್ಸ್ ಆಂಡರ್ಸನ್

Published On - 4:43 pm, Sun, 3 July 22

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್