ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐಪಿಎಲ್ 17ನೇ ಸೀಸನ್ನ ಅಂತಿಮ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿ ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದೆ. ಐಪಿಎಲ್ ಇತಿಹಾಸದಲ್ಲಿ ಕೆಕೆಆರ್ ಮೂರನೇ ಬಾರಿಗೆ ಈ ಟ್ರೋಫಿಯನ್ನು ಗೆದ್ದಿದೆ, ಈ ಮೊದಲು ತಂಡ 2012 ಮತ್ತು 2014 ವರ್ಷಗಳಲ್ಲಿ ಐಪಿಎಲ್ ಟ್ರೋಫಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಅಂತಿಮ ಪಂದ್ಯದಲ್ಲಿ ಕೆಕೆಆರ್ ತಂಡದಿಂದ ಅದ್ಭುತ ಬೌಲಿಂಗ್ ಪ್ರದರ್ಶನ ಕಂಡು ಬಂತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 18.3 ಓವರ್‌ಗಳಲ್ಲಿ 113 ರನ್‌ಗಳಿಗೆ ಆಲೌಟ್ ಆಯಿತು. ಇದಾದ ಬಳಿಕ ಗುರಿ ಬೆನ್ನಟ್ಟಿದ ಕೆಕೆಆರ್ ಕೇವಲ 10.3 ಓವರ್‌ಗಳಲ್ಲಿ ಗುರಿ ಮುಟ್ಟಿತು.
ಕೋಲ್ಕತ್ತಾ 10 ವರ್ಷಗಳ ನಂತರ ಮತ್ತೊಮ್ಮೆ ಚಾಂಪಿಯನ್ ಆಗಿದೆ. ವೆಂಕಟೇಶ್ ಅಯ್ಯರ್ ಅವರ ಅಮೋಘ ಅರ್ಧಶತಕದ ಆಧಾರದ ಮೇಲೆ ಕೋಲ್ಕತ್ತಾ ಕೇವಲ 10.3 ಓವರ್‌ಗಳಲ್ಲಿ 114 ರನ್‌ಗಳ ಸಾಧಾರಣ ಗುರಿಯನ್ನು ಸಾಧಿಸಿ ಮೂರನೇ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಕೆಕೆಆರ್ ತಂಡ 9 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿದೆ. ಶ್ರೇಯಸ್ ಅಯ್ಯರ್ ಮತ್ತು ವೆಂಕಟೇಶ್ ಅಯ್ಯರ್ ಕ್ರೀಸ್‌ನಲ್ಲಿದ್ದಾರೆ.
ಪವರ್‌ಪ್ಲೇ ನಂತರ ಕೆಕೆಆರ್ ತಂಡ 1 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿದೆ. ರಹಮಾನುಲ್ಲಾ ಗುರ್ಬಾಜ್ ಮತ್ತು ವೆಂಕಟೇಶ್ ಅಯ್ಯರ್ ಕ್ರೀಸ್‌ನಲ್ಲಿದ್ದಾರೆ.
ನಾಲ್ಕು ಓವರ್‌ಗಳಲ್ಲಿ ಕೆಕೆಆರ್ ತಂಡ 1 ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿದೆ. ರಹಮಾನುಲ್ಲಾ ಗುರ್ಬಾಜ್ 15 ರನ್ ಮತ್ತು ವೆಂಕಟೇಶ್ ಅಯ್ಯರ್ 20 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ಕೆಕೆಆರ್ ಮೊದಲ ವಿಕೆಟ್ ಪತನವಾಗಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 6 ರನ್ ಗಳಿಸಿ ಸುನಿಲ್ ನರೈನ್ ಔಟಾಗಿದ್ದಾರೆ.
ಐಪಿಎಲ್ 2024 ರ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಕೇವಲ 113 ರನ್‌ಗಳಿಗೆ ಆಲೌಟ್ ಆಗಿದೆ. ತಂಡಕ್ಕೆ ಪೂರ್ಣ 20 ಓವರ್‌ಗಳನ್ನು ಆಡಲು ಸಾಧ್ಯವಾಗಲಿಲ್ಲ.
ಸನ್ ರೈಸರ್ಸ್ ಹೈದರಾಬಾದ್ ತಂಡ 17 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 108 ರನ್ ಗಳಿಸಿದೆ. ಪ್ಯಾಟ್ ಕಮಿನ್ಸ್ 20 ರನ್ ಹಾಗೂ ಜಯದೇವ್ ಉನದ್ಕತ್ 3 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.
ಹರ್ಷಿತ್ ರಾಣಾ ಹೈದರಾಬಾದ್‌ಗೆ ಬಿಗ್ ಶಾಕ್ ನೀಡಿದ್ದಾರೆ. ತಂಡದ ಸ್ಫೋಟಕ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಅವರನ್ನು ಬೌಲ್ಡ್ ಮಾಡಿದ್ದಾರೆ. ಕ್ಲಾಸೆನ್ 16 ರನ್ ಗಳಿಸಲಷ್ಟೇ ಶಕ್ತರಾದರು. ಜಯದೇವ್ ಉನದ್ಕತ್ 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ.
15 ಓವರ್‌ಗಳಲ್ಲಿ ಹೈದರಾಬಾದ್ ಸ್ಕೋರ್ 90/8.
ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದಿದ್ದ ಅಬ್ದುಲ್ ಸಮದ್, ಆಂಡ್ರೆ ರಸೆಲ್ಗೆ ಬಲಿಯಾದರು. ಇದರೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ಗೆ ಏಳನೇ ಹೊಡೆತ ಬಿದ್ದಿದೆ. ಇದೀಗ ನಾಯಕ ಪ್ಯಾಟ್ ಕಮಿನ್ಸ್ ಕ್ರೀಸ್‌ಗೆ ಬಂದಿದ್ದಾರೆ.
ಐಪಿಎಲ್ 2024 ರ ಫೈನಲ್‌ನಲ್ಲಿ ಕೆಕೆಆರ್ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಇದುವರೆಗೆ ಮಿಚೆಲ್ ಸ್ಟಾರ್ಕ್, ಆಂಡ್ರೆ ರಸೆಲ್, ವೈಭವ್ ಅರೋರಾ, ವರುಣ್ ಚಕ್ರವರ್ತಿ ಮತ್ತು ಹರ್ಷಿತ್ ರಾಣಾ ತಲಾ ಒಂದು ವಿಕೆಟ್ ಪಡೆದಿದ್ದಾರೆ.
ಐಡೆನ್ ಮೆಕ್ರಾಮ್ ಕೆಕೆಆರ್ ವಿರುದ್ಧ 23 ಎಸೆತಗಳಲ್ಲಿ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಅವರ ವಿಕೆಟ್ ಅನ್ನು ಆಂಡ್ರೆ ರಸೆಲ್ ಪಡೆದರು. ಹೈದರಾಬಾದ್ ತಂಡ ಐದು ವಿಕೆಟ್ ಕಳೆದುಕೊಂಡಿದೆ.
10 ಓವರ್‌ಗಳಲ್ಲಿ ಹೈದರಾಬಾದ್ ತಂಡ 4 ವಿಕೆಟ್ ನಷ್ಟಕ್ಕೆ 61 ರನ್ ಗಳಿಸಿದೆ. ಏಡೆನ್ ಮೆಕ್ರಾಮ್ ಮತ್ತು ಹೆನ್ರಿಚ್ ಕ್ಲಾಸೆನ್ ಕ್ರೀಸ್‌ನಲ್ಲಿದ್ದಾರೆ.
ನಿತೀಶ್ ಕುಮಾರ್ ರೆಡ್ಡಿ ರೂಪದಲ್ಲಿ ಹೈದರಾಬಾದ್‌ಗೆ ನಾಲ್ಕನೇ ಹೊಡೆತ ಬಿದ್ದಿದೆ. ಅವರು 13 ರನ್ ಗಳಿಸಲಷ್ಟೇ ಶಕ್ತರಾದರು. ಹೆನ್ರಿಕ್ ಕ್ಲಾಸೆನ್ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. ಎಂಟು ಓವರ್‌ಗಳ ನಂತರ ತಂಡದ ಸ್ಕೋರ್ 51/4.
ಐದನೇ ಓವರ್‌ನಲ್ಲಿ 21 ರನ್‌ಗಳಿದ್ದಾಗ ಸನ್‌ರೈಸರ್ಸ್ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ಮಿಚೆಲ್ ಸ್ಟಾರ್ಕ್ ಅವರು ರಾಹುಲ್ ತ್ರಿಪಾಠಿಯನ್ನು ಪೆವಿಲಿಯನ್ಗಟ್ಟೊದ್ದಾರೆ. 24.75 ಕೋಟಿ ಬೆಲೆಯ ಸ್ಟಾರ್ಕ್ ಪ್ಲೇಆಫ್ನಲ್ಲಿ ತಮ್ಮ ಪ್ರತಿಭೆ ತೋರಿದ್ದಾರೆ. ಕ್ವಾಲಿಫೈಯರ್-1ರಲ್ಲಿ ಮೂರು ವಿಕೆಟ್ ಪಡೆದಿದ್ದ ಅವರು ಇದೀಗ ಫೈನಲ್‌ನಲ್ಲಿ ಎರಡು ವಿಕೆಟ್ ಪಡೆದಿದ್ದಾರೆ. ಸದ್ಯ ಏಡೆನ್ ಮಾರ್ಕ್ರಾಮ್ ಮತ್ತು ನಿತೀಶ್ ರೆಡ್ಡಿ ಕ್ರೀಸ್‌ನಲ್ಲಿದ್ದಾರೆ.
2 ಓವರ್‌ಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 2 ವಿಕೆಟ್ ನಷ್ಟಕ್ಕೆ 6 ರನ್ ಗಳಿಸಿದೆ. ರಾಹುಲ್ ತ್ರಿಪಾಠಿ ಮತ್ತು ಏಡೆನ್ ಮೆಕ್ರಾಮ್ ಕ್ರೀಸ್‌ನಲ್ಲಿದ್ದಾರೆ.
ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್‌ಗೆ ಕೆಕೆಆರ್ ವಿರುದ್ಧ ಖಾತೆ ತೆರೆಯಲು ಸಾಧ್ಯವಾಗಿಲ್ಲ. ವೈಭವ್ ಅರೋರಾ ಎಸೆತದಲ್ಲಿ ಹೆಡ್ ವಿಕೆಟ್ ಒಪ್ಪಿಸಿದರು.
ಮೊದಲ ಓವರ್‌ನಲ್ಲಿಯೇ ಹೈದರಾಬಾದ್‌ಗೆ ಮೊದಲ ಹೊಡೆತ ಬಿದ್ದಿದೆ. ಮಿಚೆಲ್ ಸ್ಟಾರ್ಕ್ ಐದನೇ ಎಸೆತದಲ್ಲಿ ಅಭಿಷೇಕ್ ಶರ್ಮಾ ಅವರನ್ನು ಬೌಲ್ಡ್ ಮಾಡಿದರು. ಇದೀಗ ರಾಹುಲ್ ತ್ರಿಪಾಠಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದಾರೆ. ಒಂದು ಓವರ್ ನಂತರ ತಂಡದ ಸ್ಕೋರ್ 3/1.
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್‌ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.
ಇಂಪ್ಯಾಕ್ಟ್ ಪ್ಲೇಯರ್: ಉಮ್ರಾನ್ ಮಲಿಕ್, ಗ್ಲೆನ್ ಫಿಲಿಪ್ಸ್, ಮಯಾಂಕ್ ಮಾರ್ಕಂಡೇಯ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್.
ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಇಂಪ್ಯಾಕ್ಟ್ ಪ್ಲೇಯರ್: ಅನುಕೂಲ್ ರಾಯ್, ಮನೀಶ್ ಪಾಂಡೆ, ನಿತೀಶ್ ರಾಣಾ, ಕೆಎಸ್ ಭರತ್, ಶೆರ್ಫೇನ್ ರುದರ್‌ಫೋರ್ಡ್.
ಟಾಸ್ ಗೆದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಫೈನಲ್‌ನ ಟಾಸ್ 7 ಗಂಟೆಗೆ ನಡೆಯಲಿದೆ ಆದರೆ ಅದಕ್ಕೂ ಮೊದಲು ಸಮಾರೋಪ ಸಮಾರಂಭವೂ ನಡೆಯಲಿದೆ.
ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಇನ್ನು ಕೆಲವೇ ಕ್ಷಣಗಳಲ್ಲಿ ಕೋಲ್ಕತ್ತಾ ಮತ್ತು ಹೈದರಾಬಾದ್ ನಡುವಿನ ಫೈನಲ್ ಪಂದ್ಯ ಆರಂಭವಾಗಲಿದೆ.
Published On - 6:36 pm, Sun, 26 May 24