KKR vs RR, IPL 2023: ಐಪಿಎಲ್​ನಲ್ಲಿಂದು ಕೋಲ್ಕತ್ತಾ-ರಾಜಸ್ಥಾನ್ ಮುಖಾಮುಖಿ: ಉಭಯ ತಂಡಗಳಿಗೆ ಗೆಲುವು ಅನಿವಾರ್ಯ

|

Updated on: May 11, 2023 | 7:36 AM

IPL 2023: ಐಪಿಎಲ್ 2023 ರಲ್ಲಿಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿತೀಶ್ ರಾಣ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಂಜು ಸ್ಯಾಮ್ಸನ್ ಅವರ ರಾಜಸ್ಥಾನ್ ರಾಯಲ್ಸ್ ಅನ್ನು ಎದುರಿಸಲಿದೆ.

KKR vs RR, IPL 2023: ಐಪಿಎಲ್​ನಲ್ಲಿಂದು ಕೋಲ್ಕತ್ತಾ-ರಾಜಸ್ಥಾನ್ ಮುಖಾಮುಖಿ: ಉಭಯ ತಂಡಗಳಿಗೆ ಗೆಲುವು ಅನಿವಾರ್ಯ
KKr vs RR IPL 2023
Follow us on

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2023) ಮಹತ್ವದ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು-ಗೆಲುವಿನ ಲೆಕ್ಕಚಾರ ಮತ್ತೊಂದು ತಂಡದ ಮೇಲೆ ಪರಿಣಾಮ ಬೀರುತ್ತಿದೆ. + ರನ್​ರೇಟ್​ಗಾಗಿ ತಂಡಗಳು ಹರಸಾಹಸ ಪಡುತ್ತಿದೆ. ಇದರ ನಡುವೆ ಐಪಿಎಲ್ 2023 ರಲ್ಲಿಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿತೀಶ್ ರಾಣ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸಂಜು ಸ್ಯಾಮ್ಸನ್ (Sanju Samson) ಅವರ ರಾಜಸ್ಥಾನ್ ರಾಯಲ್ಸ್ (KKR vs RR) ಅನ್ನು ಎದುರಿಸಲಿದೆ. ಉಭಯ ತಂಡಗಳು ಆಡಿರುವ 11 ಪಂದ್ಯಗಳಲ್ಲಿ ಐದು ಗೆಲುವು, ಆರು ಸೋಲು ಕಂಡು ರನ್​ರೇಟ್ ಆಧಾರದ ಮೇಲೆ ಆರ್​ಆರ್​ ಐದನೇ ಸ್ಥಾನದಲ್ಲಿದ್ದರೆ ಕೆಕೆಆರ್ ಆರನೇ ಸ್ಥಾನದಲ್ಲಿದೆ. ಹೀಗಾಗಿ ಉಭಯ ತಂಡಗಳಿಗೆ ಜಯ ಅನಿವಾರ್ಯವಾಗಿದೆ.

ಕೋಲ್ಕತ್ತಾ:

ಕೆಕೆಆರ್ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 5 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಕೊನೆಯ 20ನೇ ಓವರ್​ನ 6ನೇ ಎಸೆತದಲ್ಲಿ ರಿಂಕು ಸಿಂಗ್ ಫೋರ್ ಸಿಡಿಸಿ ಗೆಲುವು ತಂದುಕೊಟ್ಟಿದ್ದರು. ಇದೀಗ ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಕೆಕೆಆರ್ ತಂಡ ಟೂರ್ನಿಯ ಆರಂಭಕ್ಕಿಂತ ಈಗ ಸಾಕಷ್ಟು ಬೆಳವಣಿಗೆ ಕಂಡಿದೆ. ಜೇಸನ್ ರಾಯ್ ಹಾಗೂ ರಹಮಾನುಲ್ಲಾ ಗುರ್ಬಾಜ್ ಜೋಡಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ನಾಯಕ ನಿತೀಶ್ ರಾಣ ಹಾಗೂ ರಿಂಕು ಸಿಂಗ್ ಪ್ರತಿ ಪಂದ್ಯದಲ್ಲಿ ರನ್ ಕಲೆಹಾಕುತ್ತಿದ್ದಾರೆ.

ಎನ್. ಜಗದೀಸನ್ ಹಾಗೂ ವೆಂಕಟೇಶ್ ಅಯ್ಯರ್ ಕಡೆಯಿಂದ ಒಂದೊಳ್ಳೆ ಆಟ ಬರಬೇಕು. ಆಂಡ್ರೆ ರಸೆಲ್ ಫಾರ್ಮ್​ಗೆ ಬಂದಿರುವುದು ತಂಡದ ಬಲ ಹೆಚ್ಚಿಸಿದೆ. ಶಾರ್ದೂಲ್ ಥಾಕೂರ್ ಕೂಡ ಅಬ್ಬರಿಸಿದರೆ ತಂಡದ ಮೊತ್ತ ಮತ್ತೊಮ್ಮೆ 200+ ಆಗುವುದು ಖಚಿತ. ಸುನಿಲ್ ನರೈನ್, ವರುಣ್ ಚಕ್ರವರ್ತಿ ಮಾರಕವಾಗಿದ್ದರೆ ಹರ್ಷಿತ್ ರಾಣ, ಸುಯೇಶ್ ಶರ್ಮಾ ಭರವಸೆ ಮೂಡಿಸಿದ್ದಾರೆ.

ಇದನ್ನೂ ಓದಿ
ODI World Cup 2023: ಏಕದಿನ ವಿಶ್ವಕಪ್​ಗೆ 8 ತಂಡಗಳು ಫೈನಲ್
IPL 2023: RCB ಬೌಲರ್​ಗಳ ಬೆಂಡೆತ್ತಿ ಭರ್ಜರಿ ದಾಖಲೆ ಬರೆದ ಮುಂಬೈ ಇಂಡಿಯನ್ಸ್
IPL 2023: ಸ್ವೀಟ್ ಮ್ಯಾಂಗೋಸ್…ಮತ್ತೆ ಕೊಹ್ಲಿಯನ್ನು ಕಿಚಾಯಿಸಿದ್ರಾ ನವೀನ್ ಉಲ್ ಹಕ್
IPL 2023: ಹೀಗಾದ್ರೆ RCB ಪ್ಲೇಆಫ್ ಪ್ರವೇಶಿಸುವುದು ಖಚಿತ

IPL 2023: RCB ಗೆ ಸೋಲುಣಿಸಿ ಹೊಸ ಇತಿಹಾಸ ಬರೆದ ಮುಂಬೈ ಇಂಡಿಯನ್ಸ್

ರಾಜಸ್ಥಾನ್:

ಹ್ಯಾಟ್ರಿಕ್ ಸೋಲುಂಡಿರುವ ರಾಜಸ್ಥಾನ್ ಗೆಲುವಿಗಾಗಿ ಹಾತೊರೆಯುತ್ತಿದೆ. ತಂಡ 200+ ಮೊತ್ತ ಕಲೆಹಾಕುತ್ತಿದ್ದರೂ ಗೆಲ್ಲುತ್ತಿಲ್ಲ. ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ 214 ರನ್ ಬಾರಿಸಿಯೂ ಸೋತಿತ್ತು. ಆರ್​ಆರ್​ ತಂಡಕ್ಕೆ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಭರ್ಜರಿ ಆರಂಭ ಒದಗಿಸುತ್ತಿರುವುದು ಪ್ಲಸ್ ಪಾಯಿಂಟ್. ಅದರಲ್ಲೂ ಜೈಸ್ವಾಲ್ ಭರ್ಜರಿ ಫಾರ್ಮ್​ನಲ್ಲಿದ್ದು ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು.

ಸರಿಯಾದ ಕ್ರಮಾಂಕದಲ್ಲಿ ಬ್ಯಾಟಿಂಗ್ ಸಿಗದೆ ದೇವದತ್ ಪಡಿಕ್ಕಲ್ ಪರದಾಡುತ್ತಿದ್ದಾರೆ. ಸಂಜು ಸ್ಯಾಮ್ಸನ್, ಶಿಮ್ರೋನ್ ಹೆಟ್ಮೇರ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಅಸ್ತ್ರ. ಧ್ರುವ್ ಜುರೆಲ್ ಮತ್ತು ಜೇಸನ್ ಹೋಲ್ಡರ್ ಕಡೆಯಿಂದ ಉತ್ತಮ ಆಟ ಬರಬೇಕಿದೆ. ಆರ್​ಆರ್​ ಸ್ಪಿನ್ನರ್​ಗಳಾದ ಚಹಲ್, ಅಶ್ವಿನ್ ಮತ್ತು ಝಂಪಾ ಎದುರಾಳಿಗೆ ಕಂಟಕವಾಗಿದ್ದಾರೆ. ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಜೇಸನ್ ಹೋಲ್ಡನ್, ಕುಲ್ದೀಪ್ ಸೇನ್ ವೇಗಿಗಳಾಗಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ರಹಮಾನುಲ್ಲಾ ಗುರ್ಬಾಜ್, ಜೇಸನ್ ರಾಯ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಶಾರ್ದೂಲ್ ಥಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕುಲ್ ರಾಯ್, ಸುಯೇಶ್ ಶರ್ಮಾ, ಎನ್ ಜಗದೀಸನ್, ಕುಲ್ವಂತ್ ಖೆಜ್ರೋಲಿಯಾ, ಮನ್ದೀಪ್ ಸಿಂಗ್, ಟಿಮ್ ಸೌಥಿ, ಡೇವಿಡ್ ವೈಸ್, ಉಮೇಶ್ ಯಾದವ್, ಆರ್ಯ ದೇಸಾಯಿ.

ರಾಜಸ್ಥಾನ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ಧ್ರುವ್ ಜುರೆಲ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಲ್, ಕುಲ್ದೀಙ್ ಸೇನ್, ಮುರುಗನ್ ಪರಾಗ್, ರಿಯಾನ್ ಪರಾಗ್ , ಡೊನಾವನ್ ಫೆರೇರಾ, ಕುಲ್ದೀಪ್ ಯಾದವ್, ಜೋ ರೂಟ್, ಆಡಮ್ ಝಂಪಾ, ನವದೀಪ್ ಸೈನಿ, ಆಕಾಶ್ ವಸಿಷ್ಟ್, ಕೆಸಿ ಕರಿಯಪ್ಪ, ಓಬೇದ್ ಮೆಕಾಯ್, ಕೆಎಂ ಆಸಿಫ್, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ