AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs WI: ಸತತ 90 ಟೆಸ್ಟ್ ಪಂದ್ಯಗಳನ್ನಾಡಿದ್ದ ಆಟಗಾರನಿಗೆ ತಂಡದಿಂದ ಗೇಟ್​ಪಾಸ್

Kraigg Brathwaite Dropped: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ವೆಸ್ಟ್ ಇಂಡೀಸ್ ತಂಡವು ಕ್ರೈಗ್ ಬ್ರಾಥ್ವೈಟ್ ಅವರನ್ನು ಕೈಬಿಟ್ಟಿದೆ. ಸತತ 90 ಟೆಸ್ಟ್ ಪಂದ್ಯಗಳನ್ನು ಆಡಿದ ದಾಖಲೆಯನ್ನು ಹೊಂದಿರುವ ಬ್ರಾಥ್ವೈಟ್ ಅವರನ್ನು, ಮೊದಲ ಎರಡು ಪಂದ್ಯಗಳಲ್ಲಿ ನಿರಾಶಾದಾಯಕ ಪ್ರದರ್ಶನದ ಕಾರಣದಿಂದಾಗಿ ಕೈಬಿಡಲಾಗಿದೆ. ಬ್ರಾಥ್ವೈಟ್ ಅವರು 100 ಟೆಸ್ಟ್ ಪಂದ್ಯಗಳನ್ನು ಆಡಿದ್ದು 5950 ರನ್ ಗಳಿಸಿದ್ದಾರೆ.

AUS vs WI: ಸತತ 90 ಟೆಸ್ಟ್ ಪಂದ್ಯಗಳನ್ನಾಡಿದ್ದ ಆಟಗಾರನಿಗೆ ತಂಡದಿಂದ ಗೇಟ್​ಪಾಸ್
Kraigg Brathwaite
ಪೃಥ್ವಿಶಂಕರ
|

Updated on:Jul 13, 2025 | 6:05 PM

Share

ಒಂದೆಡೆ ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವೆ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದರೆ, ಮತ್ತೊಂದೆಡೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ (Australia vs West Indies) ನಡುವೆಯೂ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಿದೆ. ಈಗಾಗಲೇ ಆಸ್ಟ್ರೇಲಿಯಾ ತಂಡ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದ್ದರೆ, ಇತ್ತ ವಿಂಡೀಸ್ ವೈಟ್ ವಾಶ್ ಮುಖಭಂಗದಿಂದ ಪಾರಾಗಲು ಎದುರು ನೋಡುತ್ತಿದೆ. ಹೀಗಾಗಿ ವಿಂಡೀಸ್ ತಂಡ ತನ್ನ ಆಡುವ ಹನ್ನೊಂದರ ಬಳಗದಲ್ಲಿ ಪ್ರಮುಖ ಬದಲಾವಣೆ ಮಾಡಿದ್ದು, ತಂಡದ ಅನುಭವಿ ಆರಂಭಿಕ ಕ್ರೇಗ್ ಬ್ರಾಥ್‌ವೈಟ್ (Kraigg Brathwaite) ಅವರನ್ನು ಈ ಪಂದ್ಯದಿಂದ ಹೊರಗಿಟ್ಟಿದೆ. ಈ ಮೂಲಕ ವೆಸ್ಟ್ ಇಂಡೀಸ್ ಪರ ಸತತ 90 ಟೆಸ್ಟ್ ಪಂದ್ಯಗಳನ್ನು ಆಡಿ ದಾಖಲೆ ಬರೆದಿದ್ದ ಬ್ರಾಥ್‌ವೈಟ್ ಅವರ ಓಟಕ್ಕೆ ಬ್ರೇಕ್ ಬಿದ್ದಿದೆ.

ದಾಖಲೆ ಬರೆದಿದ್ದ ಬ್ರಾಥ್‌ವೈಟ್

ಕ್ರೇಗ್ ಬ್ರಾಥ್‌ವೈಟ್ ವಿಂಡೀಸ್ ತಂಡದ ಪರ ಸತತ 90 ಟೆಸ್ಟ್ ಪಂದ್ಯಗಳನ್ನು ಆಡಿದ ಮೊದಲ ವೆಸ್ಟ್ ಇಂಡೀಸ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು, ವೆಸ್ಟ್ ಇಂಡೀಸ್‌ನಿಂದ ಯಾರೂ ಸತತ 90 ಟೆಸ್ಟ್ ಪಂದ್ಯಗಳನ್ನು ಆಡಿರಲಿಲ್ಲ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ಪರ ಸತತ 85 ಪಂದ್ಯಗಳನ್ನು ಆಡಿದ ಶ್ರೇಷ್ಠ ಆಲ್‌ರೌಂಡರ್ ಸರ್ ಗ್ಯಾರಿ ಸೋಬರ್ಸ್ ಇದ್ದಾರೆ. ಹಾಗೆಯೇ ಮಾಜಿ ಆರಂಭಿಕ ಆಟಗಾರ ಡೆಸ್ಮಂಡ್ ಹೇನ್ಸ್ ಸತತ 72 ಪಂದ್ಯಗಳನ್ನು ಆಡಿದರೆ, ಬ್ರಿಯಾನ್ ಲಾರಾ ಸತತ 64 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಪ್ರತಿನಿಧಿಸಿದ್ದರು.

ವೆಸ್ಟ್ ಇಂಡೀಸ್ ಪರ 100 ಟೆಸ್ಟ್ ಪಂದ್ಯ

ಇತ್ತೀಚೆಗೆ, ಕ್ರೇಗ್ ಬ್ರಾಥ್‌ವೈಟ್ ವೆಸ್ಟ್ ಇಂಡೀಸ್ ಪರ 100 ಟೆಸ್ಟ್ ಪಂದ್ಯಗಳನ್ನು ಆಡಿದ ದಾಖಲೆಯನ್ನು ಮಾಡಿದ್ದರು. ಈ ಮೂಲಕ ವೆಸ್ಟ್ ಇಂಡೀಸ್ ಪರ 100 ಟೆಸ್ಟ್ ಪಂದ್ಯಗಳನ್ನು ಆಡಿದ ಹತ್ತನೇ ಆಟಗಾರ ಎನಿಸಿಕೊಂಡಿದ್ದರು. ವಿಂಡೀಸ್ ಪರ ಅವರು 100 ಟೆಸ್ಟ್ ಪಂದ್ಯಗಳಲ್ಲಿ 32.51 ಸರಾಸರಿಯಲ್ಲಿ 5950 ರನ್ ಗಳಿಸಿದ್ದು, ಇದರಲ್ಲಿ ಅವರ ಅತ್ಯುತ್ತಮ ಸ್ಕೋರ್ 212 ರನ್‌ ಆಗಿದೆ.

ಆಸೀಸ್ ವಿರುದ್ಧ ಕಳಪೆ ಪ್ರದರ್ಶನ

ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶಿಸಿದ ಕಾರಣ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಆಡುವ ಹನ್ನೊಂದರ ಬಳಗದಿಂದ ಕೈಬಿಡಲಾಗಿದೆ. ಬ್ರಾಥ್‌ವೈಟ್ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ ನಾಲ್ಕು ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ನಾಲ್ಕು ರನ್ ಕಲೆಹಾಕಿದ್ದರು. ಎರಡನೇ ಟೆಸ್ಟ್ ಪಂದ್ಯದ ಬಗ್ಗೆ ಹೇಳುವುದಾದರೆ, ಬ್ರಾಥ್‌ವೈಟ್​ಗೆ ಮೊದಲ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯಲಾಗಲಿಲ್ಲ. ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಏಳು ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Sun, 13 July 25

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ