IND vs ENG: ಟೀಮ್ ಇಂಡಿಯಾ ವಿಕೆಟ್ ಕೀಪರ್ ಯಾರು?

| Updated By: ಝಾಹಿರ್ ಯೂಸುಫ್

Updated on: Jan 14, 2024 | 2:53 PM

India vs England: ಜನವರಿ 25 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್​ ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.

IND vs ENG: ಟೀಮ್ ಇಂಡಿಯಾ ವಿಕೆಟ್ ಕೀಪರ್ ಯಾರು?
KS Bharat - KL Rahul
Follow us on

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ (Team India) ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯುವವರು ಯಾರು? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಭಾರತ ಟೆಸ್ಟ್ ತಂಡದಲ್ಲಿ ಮೂವರು ವಿಕೆಟ್ ಕೀಪರ್​ಗಳು ಕಾಣಿಸಿಕೊಂಡಿರುವುದು. ಅಂದರೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ತಂಡದಲ್ಲಿ ಮೂವರು ವಿಕೆಟ್ ಕೀಪರ್​ಗಳು ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಸೌತ್ ಆಫ್ರಿಕಾ ವಿರುದ್ದದ ಟೆಸ್ಟ್ ಸರಣಿಗೆ ಇಬ್ಬರು ವಿಕೆಟ್ ಕೀಪರ್​ಗಳನ್ನು ಮಾತ್ರ ಆಯ್ಕೆ ಮಾಡಲಾಗಿತ್ತು. ಅಲ್ಲದೆ 2 ಪಂದ್ಯಗಳಲ್ಲೂ ಕೆಎಲ್ ರಾಹುಲ್ (KL Rahul) ವಿಕೆಟ್ ಕೀಪರ್ ಜವಾಬ್ದಾರಿ ನಿರ್ವಹಿಸಿದ್ದರು.

ಆದರೀಗ ಇಂಗ್ಲೆಂಡ್ ವಿರುದ್ಧ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಆಗಿ ಕಣಕ್ಕಿಳಿಸುವುದಿಲ್ಲ. ಬದಲಾಗಿ ಕೆಎಸ್ ಭರತ್ ಅವರು ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಕೆಎಸ್ ಭರತ್ ಕೀಪಿಂಗ್ ಗ್ಲೌಸ್ ತೊಡಲಿದ್ದಾರೆ. ಇತ್ತ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.

ಇನ್ನು ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಅವಕಾಶ ಪಡೆದಿರುವ 22ರ ಹರೆಯದ ಯುವ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್​ ಪಾದಾರ್ಪಣೆ ಮಾಡಲು ಒಂದಷ್ಟು ಪಂದ್ಯಗಳವರೆಗೆ ಕಾಯಬೇಕಾಗಿ ಬರಬಹುದು. ಇದಾಗ್ಯೂ ಕೆಎಸ್ ಭರತ್ ಅವರನ್ನು ಮುಖ್ಯ ವಿಕೆಟ್ ಕೀಪರ್ ಆಗಿ ಪರಿಗಣಿಸುವುದರಿಂದ ಅವರು ವಿಫಲರಾದರೆ ಜುರೇಲ್​ಗೆ ಬೇಗನೆ ಅದೃಷ್ಟ ಖುಲಾಯಿಸುವ ಸಾಧ್ಯತೆಯನ್ನೂ ಕೂಡ ತಳ್ಳಿ ಹಾಕುವಂತಿಲ್ಲ.

ಕೆಎಸ್ ಭರತ್ ಪ್ರದರ್ಶನ ಹೇಗಿದೆ?

ಕೆಎಸ್ ಭರತ್ ಈಗಾಗಲೇ ಟೀಮ್ ಇಂಡಿಯಾ ಪರ 5 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಈ ವೇಳೆ 8 ಇನಿಂಗ್ಸ್ ಆಡಿರುವ ಅವರು ಕೇವಲ 129 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ 12 ಕ್ಯಾಚ್ ಹಾಗೂ 1 ಸ್ಟಂಪಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿಯೇ ಭರತ್ ಅವರನ್ನು ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿಗೂ ಪರಿಗಣಿಸಲಾಗಿದೆ.

ಭಾರತ-ಇಂಗ್ಲೆಂಡ್ ಸರಣಿ ಯಾವಾಗ ಶುರು?

ಜನವರಿ 25 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್​ ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಹೈದರಾಬಾದ್​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿರುವ ವೈಎಸ್​ಆರ್​ ಸ್ಟೇಡಿಯಂ ಆತಿಥ್ಯವಹಿಸಿದರೆ, 3ನೇ ಪಂದ್ಯವು ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ನಾಲ್ಕನೇ ಟೆಸ್ಟ್ ಪಂದವು ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕೊನೆಯ ಟೆಸ್ಟ್ ಪಂದ್ಯಕ್ಕೆ ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಜನವರಿ 25 ರಿಂದ 29- ಮೊದಲ ಟೆಸ್ಟ್ ಪಂದ್ಯ (ಹೈದರಾಬಾದ್)
  2. ಫೆಬ್ರವರಿ 2 ರಿಂದ 6- ಎರಡನೇ ಟೆಸ್ಟ್ ಪಂದ್ಯ (ವಿಶಾಖಪಟ್ಟಣಂ)
  3. ಫೆಬ್ರವರಿ 15 ರಿಂದ 19- ಮೂರನೇ ಟೆಸ್ಟ್ ಪಂದ್ಯ (ರಾಜ್​ಕೋಟ್)
  4. ಫೆಬ್ರವರಿ 23 ರಿಂದ 27- ನಾಲ್ಕನೇ ಟೆಸ್ಟ್ ಪಂದ್ಯ (ರಾಂಚಿ)
  5. ಮಾರ್ಚ್ 7 ರಿಂದ 11- ಐದನೇ ಟೆಸ್ಟ್ ಪಂದ್ಯ (ಧರ್ಮಶಾಲಾ).

ಇದನ್ನೂ ಓದಿ: IPL 2024: RCB ಆಟಗಾರನಿಗೆ ಗಂಭೀರ ಗಾಯ: ಐಪಿಎಲ್​ಗೆ ಡೌಟ್..!

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ ), ಶುಭ್‌ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆಎಲ್ ರಾಹುಲ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಧ್ರುವ್ ಜುರೇಲ್ (ವಿಕೇಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.