AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ 410 ರನ್‌ಗಳ ಭರ್ಜರಿ ಜಯ

2025-26ನೇ ಸಾಲಿನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಬಿ.ಟಿ.ಆರ್ 14 ವರ್ಷದೊಳಗಿನವರ ಎರಡನೇ ಡಿವಿಷನ್ ಕ್ರಿಕೆಟ್ ಪಂದ್ಯದಲ್ಲಿ ಬೆಂಗಳೂರಿನ ವಿದ್ಯಾನಿಕೇತನ ಶಾಲೆ ಭರ್ಜರಿ ಗೆಲುವು ಸಾಧಿಸಿದೆ. ಬ್ಯಾಟಿಂಗ್ , ಬೌಲಿಂಗ್​​ನ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಕಾರ್ಮೆಲ್ ಶಾಲೆಯನ್ನು ಮಣಿಸಿದೆ. ಅದು ಬರೋಬ್ಬರಿ 410 ರನ್‌ಗಳಿಂದ ಗೆಲುವಿನ ನಗೆ ಬೀರಿದೆ.

KSCA ಅಂಡರ್ 14 ಕ್ರಿಕೆಟ್: ಬೆಂಗಳೂರಿನ ವಿದ್ಯಾನಿಕೇತನ ಶಾಲೆಗೆ 410 ರನ್‌ಗಳ ಭರ್ಜರಿ ಜಯ
Vidyaniketan School
TV9 Web
| Edited By: |

Updated on: Dec 25, 2025 | 9:11 PM

Share

ಬೆಂಗಳೂರು, (ಡಿಸೆಂಬರ್ 25): 2025-26ನೇ ಸಾಲಿನ ಕೆ.ಎಸ್.ಸಿ.ಎ (KSCA) ಬಿ.ಟಿ.ಆರ್ 14 ವರ್ಷದೊಳಗಿನವರ ಎರಡನೇ ಡಿವಿಷನ್ ಕ್ರಿಕೆಟ್ ಪಂದ್ಯದಲ್ಲಿ ಬೆಂಗಳೂರಿನ ವಿದ್ಯಾನಿಕೇತನ ಶಾಲೆ (Bengaluru vidyaniketan School) ಭರ್ಜರಿ ಜಯಗಳಿಸಿದೆ. ವ್ಯೊಮ್ ನಾಯ್ಡು ಅದ್ಭುತ ದ್ವಿಶತಕದ ನೆರವಿನಿಂದ ವಿದ್ಯಾನಿಕೇತನ ಶಾಲೆಯು, ಬೆಂಗಳೂರಿನ ಕಾರ್ಮೆಲ್ ಶಾಲೆ (carmel school) (B-70) ವಿರುದ್ಧ 410 ರನ್‌ಗಳ ಬೃಹತ್ ಮೊತ್ತದ ಜಯ ದಾಖಲಿಸಿದೆ.

ಬೆಂಗಳೂರು ನಗರದ ಸರ್ ಎಂ. ವಿಶ್ವೇಶ್ವರಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MVIT-2) ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವಿದ್ಯಾನಿಕೇತನ ಶಾಲೆ,  ನಿಗದಿತ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 504 ರನ್‌ ಪೇರಿಸಿತು.  ವಿದ್ಯಾನಿಕೇತನ ಪರವಾಗಿ ವ್ಯೊಮ್ ನಾಯ್ಡು 150 ಎಸೆತಗಳಲ್ಲಿ  47 ಬೌಂಡರಿಗಳ ಮೂಲಕ  ಬರೋಬ್ಬರಿ 283 ರನ್‌ ಬಾರಿಸಿ ಮಿಂಚಿದರು.

ಈ ಬೃಹತ್ ಮೊತ್ತದ ಗುರಿಯನ್ನು ಬೆನ್ನಟ್ಟಿದ ಬೆಂಗಳುರಿನ ಕಾರ್ಮೆಲ್ ಶಾಲೆ ಕೇವಲ 20.5 ಓವರ್‌ಗಳಲ್ಲಿ  94 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 410 ರನ್​​​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ವಿದ್ಯಾನಿಕೇತನ ಶಾಲೆ ಭಾರಿ ಅಂತರದ ಜಯವನ್ನು ತನ್ನದಾಗಿಸಿಕೊಂಡಿದೆ. ಈ ಅಮೋಘ ಪ್ರದರ್ಶನ ನೀಡುವ ಮೂಲಕ ವ್ಯೊಮ್ ನಾಯ್ಡು ಅವರು ಪ್ರಸ್ತುತ ಕೆ.ಎಸ್.ಸಿ.ಎ ಬಿ.ಟಿ.ಆರ್ ಶೀಲ್ಡ್‌ ಟೂರ್ನಿಯಲ್ಲಿ ಅತ್ಯಂತ ಭರವಸೆಯ ಯುವ ಪ್ರತಿಭೆಯಾಗಿ ಹೊರಹೊಮ್ಮಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್