AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಪಂದ್ಯದಲ್ಲಿ 10 ವಿಕೆಟ್; ಆಂಗ್ಲರ ನೆಲದಲ್ಲಿ ಕುಲ್ದೀಪ್ ಕೈಚೆಳಕ

ಭಾರತ ಟೆಸ್ಟ್ ತಂಡದಲ್ಲಿ ಖಾಯಂ ಸ್ಥಾನಕ್ಕಾಗಿ ಹೋರಾಡುತ್ತಿರುವ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್, ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಯಾರ್ಕ್‌ಷೈರ್ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಎಸೆಕ್ಸ್ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ ಅತ್ಯುತ್ತಮ 10 ವಿಕೆಟ್‌ಗಳನ್ನು (120 ರನ್‌ಗಳಿಗೆ) ಪಡೆದು ಮಿಂಚಿದ್ದಾರೆ. ಈ ಭರ್ಜರಿ ಪ್ರದರ್ಶನ ಭಾರತ ಟೆಸ್ಟ್ ತಂಡಕ್ಕೆ ಮರಳುವ ಅವರ ಆಕಾಂಕ್ಷೆಗೆ ಹೊಸ ಬಲ ತುಂಬಿದೆ.

ಒಂದೇ ಪಂದ್ಯದಲ್ಲಿ 10 ವಿಕೆಟ್; ಆಂಗ್ಲರ ನೆಲದಲ್ಲಿ ಕುಲ್ದೀಪ್ ಕೈಚೆಳಕ
ಕುಲ್ದೀಪ್ ಯಾದವ್
ಪೃಥ್ವಿಶಂಕರ
|

Updated on: Sep 10, 2026 | 9:59 PM

Share

ಭಾರತ ಟೆಸ್ಟ್ ತಂಡದಲ್ಲಿ ಖಾಯಂ ಸ್ಥಾನ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್​ಗೆ ಇದುವರೆಗೆ ಅದು ಈಡೇರಿಸಿಕೊಳ್ಳಲು ಸಾಧ್ಯವಾಗಿಲ್ಲ. ಅಪರೂಪಕ್ಕೊಮ್ಮೆ ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯುವ ಕುಲ್ದೀಪ್ ಆ ಬಳಿಕ ಕಣ್ಮರೆಯಾಗುತ್ತಾರೆ. ಆದರೂ ತಮ್ಮ ಛಲ ಬಿಡದ ಕುಲ್ದೀಪ್ ವಿದೇಶಿ ನೆಲದಲ್ಲಿ ಬೇರೊಂದು ತಂಡದ ಪರ ಕಣಕ್ಕಿಳಿದು ತಮ್ಮ ಸಾಮರ್ಥ್ಯವನ್ನು ಸಾಭೀತುಪಡಿಸಿದೆ. ಪ್ರಸ್ತುತ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಯಾರ್ಕ್‌ಷೈರ್ ತಂಡದ ಪರ ಅಡುತ್ತಿರುವ ಕುಲ್ದೀಪ್ ಯಾದವ್ ತಮ್ಮ ಕೈಚೆಳಕದ ಮೂಲಕ ಎದುರಾಳಿ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಡಿಂಗ್ಲಿಯಲ್ಲಿ ನಡೆದ ಡಿವಿಷನ್ ಒನ್ ಪಂದ್ಯದಲ್ಲಿ, ಕುಲ್ದೀಪ್ ಮತ್ತು ವೇಗಿ ಜಾರ್ಜ್ ಹಿಲ್ ಅವರ ಬಲದಿಂದ ಯಾರ್ಕ್‌ಷೈರ್ ಕೇವಲ ಮೂರು ದಿನಗಳಲ್ಲಿ ಎಸೆಕ್ಸ್ ತಂಡವನ್ನು ಇನ್ನಿಂಗ್ಸ್ ಮತ್ತು 106 ರನ್‌ಗಳಿಂದ ಸೋಲಿಸಿತು. ಕುಲ್ದೀಪ್ ಯಾದವ್ ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಪ್ರಾಬಲ್ಯ ಸಾಧಿಸಿ ತಮ್ಮ ವೃತ್ತಿಜೀವನದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.

ಕುಲ್ದೀಪ್ ಅದ್ಭುತ ಬೌಲಿಂಗ್

ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಕುಲ್ದೀಪ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಕುಲ್ದೀಪ್ 120 ರನ್‌ಗಳಿಗೆ 10 ವಿಕೆಟ್‌ಗಳನ್ನು ಕಬಳಿಸಿದರು. ಈ ಮೂಲಕ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಒಂದು ಪಂದ್ಯದಲ್ಲಿ 10 ವಿಕೆಟ್‌ಗಳನ್ನು ಪಡೆದ ದಾಖಲೆ ನಿರ್ಮಿಸಿದರು. ಈ ಪಂದ್ಯದಲ್ಲಿ, ಯಾರ್ಕ್‌ಷೈರ್ ಮೊದಲ ಇನ್ನಿಂಗ್ಸ್‌ನಲ್ಲಿ 390 ರನ್‌ ದಾಖಲಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಎಸೆಕ್ಸ್ ಕೇವಲ 171 ರನ್‌ಗಳಿಗೆ ಆಲೌಟ್ ಆಯಿತು. ಹಿಲ್ 12 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದರೆ, ಕುಲ್ದೀಪ್ ಯಾದವ್ 20 ಓವರ್‌ಗಳಲ್ಲಿ 70 ರನ್‌ಗಳಿಗೆ 4 ವಿಕೆಟ್ ಕಬಳಿಸಿದರು. ಹೀಗಾಗಿ ಯಾರ್ಕ್‌ಷೈರ್, ಎಸೆಕ್ಸ್ ತಂಡದ ಮೇಲೆ ಫಾಲೋ ಆನ್ ಹೇರಿತು.

ಇಂಗ್ಲೆಂಡ್‌ ನೆಲದಲ್ಲಿ ಮಿಂಚಿದ ಕುಲ್ದೀಪ್ ಯಾದವ್

ಹ್ಯಾಟ್ರಿಕ್ ಜಸ್ಟ್ ಮಿಸ್

ಎಸೆಕ್ಸ್ ತಂಡದ ಎರಡನೇ ಇನ್ನಿಂಗ್ಸ್ ದುಃಸ್ವಪ್ನದ ಆರಂಭಕ್ಕೆ ನಾಂದಿ ಹಾಡಿತು. ಜಾರ್ಜ್ ಹಿಲ್ ಮೊದಲ ಒಂಬತ್ತು ಓವರ್‌ಗಳಲ್ಲಿ ದಾಳಿ ನಡೆಸಿ ಡೀನ್ ಎಲ್ಗರ್ ಮತ್ತು ಟಾಮ್ ವೆಸ್ಟ್ಲಿಯನ್ನು ಔಟ್ ಮಾಡಿದರು. ನಂತರ, ಊಟಕ್ಕೆ ಸ್ವಲ್ಪ ಮೊದಲು, ಕುಲ್ದೀಪ್ ಯಾದವ್ ಸತತ ಎಸೆತಗಳಲ್ಲಿ ಚಾರ್ಲಿ ಎಲಿಸನ್ ಮತ್ತು ಮ್ಯಾಟ್ ಕ್ರಿಚ್ಲಿಯನ್ನು ಔಟ್ ಮಾಡಿದರು. ಕುಲ್ದೀಪ್ ಹ್ಯಾಟ್ರಿಕ್ ತಪ್ಪಿಸಿಕೊಂಡರೂ, ಲ್ಯೂಕ್ ಬೆಂಕೆನ್‌ಸ್ಟೈನ್‌ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಮೂರನೇ ವಿಕೆಟ್ ಪಡೆದರು. ನಂತರ ಕುಲ್ದೀಪ್ ಜಾರ್ಜ್ ಬೆಲ್, ಜಮಾನ್ ಅಖ್ತರ್ ಮತ್ತು ಸ್ಯಾಮ್ ಕುಕ್ ಅವರನ್ನು ಔಟ್ ಮಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್