AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ಲೆಕ್ಕಾಚಾರ ಬಿಟ್ಟು, ಐಪಿಎಲ್‌ಗೆ ಹೊಸ ವೇಳಾಪಟ್ಟಿ ರೂಪಿಸಿ: ಲಲಿತ್ ಮೋದಿ

ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಅವರು ಐಪಿಎಲ್ ವೇಳಾಪಟ್ಟಿಯನ್ನು ಬದಲಿಸುವಂತೆ ಒತ್ತಾಯಿಸಿದ್ದಾರೆ. ಐಸಿಸಿ ಪ್ರತ್ಯೇಕ ವಿಂಡೋ ಅಗತ್ಯವಿಲ್ಲ, ಬಿಸಿಸಿಐ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ. ಜನವರಿ ಅಥವಾ ಅಕ್ಟೋಬರ್-ಏಪ್ರಿಲ್ ಅವಧಿಯಲ್ಲಿ ಟೂರ್ನಿ ಆಯೋಜಿಸಲು ಸಲಹೆ ನೀಡಿದ್ದಾರೆ. ಜತೆಗೆ, ಚಾಂಪಿಯನ್ಸ್ ಲೀಗ್ ಟಿ20 ಪುನರಾರಂಭಕ್ಕೂ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬದಲಾವಣೆಗಳು ಭಾರತೀಯ ಕ್ರಿಕೆಟ್‌ಗೆ ಲಾಭ ತರಲಿವೆ ಎನ್ನುವುದು ಅವರ ಅಭಿಪ್ರಾಯ.

ಹಳೆಯ ಲೆಕ್ಕಾಚಾರ ಬಿಟ್ಟು, ಐಪಿಎಲ್‌ಗೆ ಹೊಸ ವೇಳಾಪಟ್ಟಿ ರೂಪಿಸಿ: ಲಲಿತ್ ಮೋದಿ
Lalit Modi
ಪೃಥ್ವಿಶಂಕರ
|

Updated on: Nov 09, 2026 | 10:48 PM

Share

ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಮತ್ತೊಮ್ಮೆ ಐಪಿಎಲ್ ಟೂರ್ನಿಯ ವೇಳಾಪಟ್ಟಿ ಬದಲಿಸುವಂತೆ ಒತ್ತಾಯಿಸಿದ್ದಾರೆ. ಐಪಿಎಲ್ ಆಯೋಜನೆಗೆ ಐಸಿಸಿ ಪ್ರತ್ಯೇಕ ವಿಂಡೋ ನೀಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಬಿಸಿಸಿಐ ತನ್ನದೇ ಆದ ನಿರ್ಧಾರ ತೆಗೆದುಕೊಂಡು ಟೂರ್ನಿಯ ವೇಳಾಪಟ್ಟಿಯನ್ನು ನಿಗದಿಪಡಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕಾಗಿ ಐಪಿಎಲ್ ಅನ್ನು ಜನವರಿಯಲ್ಲಿ ಆರಂಭಿಸಬೇಕು ಅಥವಾ ಅಕ್ಟೋಬರ್‌ನಿಂದ ಏಪ್ರಿಲ್ ಅವಧಿಯಲ್ಲಿ ಆಯೋಜಿಸುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಲಲಿತ್ ಮೋದಿ ಸಲಹೆ ನೀಡಿದ್ದಾರೆ.

ಲಲಿತ್ ಮೋದಿ ಪ್ರಕಾರ, ಐಪಿಎಲ್ ಈಗ ಕೇವಲ ಕ್ರಿಕೆಟ್ ಟೂರ್ನಿಯಾಗಿ ಉಳಿದಿಲ್ಲ. ಇದು ಜಾಗತಿಕ ಮಟ್ಟದಲ್ಲಿ ದೊಡ್ಡ ಕ್ರೀಡಾ ಹಾಗೂ ವ್ಯಾಪಾರ ವೇದಿಕೆಯಾಗಿ ಬೆಳೆದಿದೆ. ಹೀಗಾಗಿ ವಿಶ್ವ ಕ್ರಿಕೆಟ್ ಕೂಡ ಐಪಿಎಲ್‌ನ ಮಹತ್ವವನ್ನು ಅರಿತುಕೊಂಡು, ಅಂತಾರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿಯನ್ನು ಅದಕ್ಕೆ ತಕ್ಕಂತೆ ರೂಪಿಸಬೇಕು ಎಂಬುದು ಅವರ ಅಭಿಪ್ರಾಯ.

ಐಪಿಎಲ್‌ಗೆ ಐಸಿಸಿ ವಿಂಡೋ ಬೇಕಿಲ್ಲ

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಲಲಿತ್ ಮೋದಿ, ‘ಐಪಿಎಲ್ ಆಯೋಜಿಸಲು ಐಸಿಸಿಯಿಂದ ಪ್ರತ್ಯೇಕ ವಿಂಡೋ ಪಡೆಯುವ ಅಗತ್ಯವಿಲ್ಲ. ಟೂರ್ನಿ ಯಾವಾಗ ನಡೆಯಬೇಕು ಎಂಬುದನ್ನು ಬಿಸಿಸಿಐ ನಿರ್ಧರಿಸಬಹುದು. ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳು ಹಾಗೂ ಆಟಗಾರರ ಲಭ್ಯತೆಯನ್ನು ನಿರ್ವಹಿಸುವುದು ಬೇರೆ ವಿಚಾರ. ಅದಕ್ಕಾಗಿ ನಿರ್ದಿಷ್ಟ ಸಮಯದಲ್ಲಿ ಟೂರ್ನಿ ನಡೆಸಲು ಯಾರ ಅನುಮತಿಯನ್ನೂ ಪಡೆಯಬೇಕಾಗಿಲ್ಲ’ ಎಂದು ಮೋದಿ ಹೇಳಿದ್ದಾರೆ.

ಐಪಿಎಲ್ ವೇಳಾಪಟ್ಟಿ ಬದಲಿಸಿ

ಸದ್ಯ ಐಪಿಎಲ್ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯುತ್ತಿದೆ. ಈ ಸಮಯದಲ್ಲಿ ದೇಶದ ಹಲವು ಭಾಗಗಳಲ್ಲಿ ತಾಪಮಾನ ಹೆಚ್ಚಾಗುವುದರಿಂದ ಆಟಗಾರರಿಗೆ ಮೈದಾನದಲ್ಲಿ ಆಡುವುದು ಸವಾಲಿನ ಕೆಲಸವಾಗುತ್ತಿದೆ. ಹೀಗಾಗಿ ಟೂರ್ನಿಯ ಆಯೋಜನಾ ಸಮಯವನ್ನು ಬದಲಿಸುವ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಲಲಿತ್ ಮೋದಿ ಹೇಳಿದ್ದಾರೆ. ಇದಕ್ಕಾಗಿ ಅವರು ಎರಡು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.

1. ಜನವರಿಯಲ್ಲಿ ಐಪಿಎಲ್ ಆರಂಭ: ಪ್ರತಿ ವರ್ಷ ಜನವರಿ ತಿಂಗಳಿನಿಂದಲೇ ಐಪಿಎಲ್ ಆಯೋಜಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕು.

2. ಅಕ್ಟೋಬರ್‌ನಿಂದ ಏಪ್ರಿಲ್‌ವರೆಗೆ ವೇಳಾಪಟ್ಟಿ: ಅಕ್ಟೋಬರ್‌ನಿಂದ ಏಪ್ರಿಲ್‌ವರೆಗಿನ ಅವಧಿಯಲ್ಲಿ ಐಪಿಎಲ್ ಆಯೋಜಿಸಲು ಸೂಕ್ತ ವೇಳಾಪಟ್ಟಿ ರೂಪಿಸಬೇಕು.

ಈ ಬದಲಾವಣೆಗಳಿಂದ ಆಟಗಾರರಿಗೆ ಉತ್ತಮ ವಾತಾವರಣದಲ್ಲಿ ಆಡಲು ಅವಕಾಶ ಸಿಗಲಿದೆ. ಜೊತೆಗೆ ಪ್ರಸಾರ ಹಕ್ಕುಗಳಿಂದ ಬರುವ ಆದಾಯ ಹೆಚ್ಚಿಸುವುದರ ಜತೆಗೆ ಭಾರತೀಯ ಕ್ರಿಕೆಟ್‌ನ ಆರ್ಥಿಕ ಶಕ್ತಿಯನ್ನೂ ದೀರ್ಘಕಾಲದವರೆಗೆ ಬಲಪಡಿಸಬಹುದು ಎಂಬುದು ಅವರ ಅಭಿಪ್ರಾಯ.

ಐಪಿಎಲ್ ರಿಟೆನ್ಷನ್ ಗಡುವು ವಿಸ್ತರಿಸಿದ ಬಿಸಿಸಿಐ: ದಿಢೀರ್ ನಿರ್ಧಾರದ ಹಿಂದಿದೆ ಬಲವಾದ ಕಾರಣ

ಚಾಂಪಿಯನ್ಸ್ ಲೀಗ್ ಆರಂಭಕ್ಕೆ ವಿರೋಧ

ವಿಶ್ವದ ಪ್ರಮುಖ ದೇಶೀಯ ಟಿ20 ಲೀಗ್‌ಗಳ ವಿಜೇತ ಹಾಗೂ ಬಲಿಷ್ಠ ತಂಡಗಳ ನಡುವೆ ಚಾಂಪಿಯನ್ಸ್ ಲೀಗ್ ಟಿ20 ಟೂರ್ನಿಯನ್ನು ಮತ್ತೆ ಆರಂಭಿಸುವ ಪ್ರಸ್ತಾಪಕ್ಕೂ ಲಲಿತ್ ಮೋದಿ ಬೆಂಬಲ ನೀಡಿಲ್ಲ. ‘ಈ ಟೂರ್ನಿಯ ಮೂಲ ಪರಿಕಲ್ಪನೆ ರೂಪಿಸುವಲ್ಲಿ ತಾವು ಕೂಡ ಭಾಗಿಯಾಗಿದ್ದೆವು. ಆಗ ಅದಕ್ಕೆ ಉತ್ತಮ ವಾಣಿಜ್ಯ ಮೌಲ್ಯವಿತ್ತು. ಆದರೆ, ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಐಪಿಎಲ್ ತಂಡಗಳ ಮಾಲೀಕರು ಈಗ ವಿಶ್ವದ ಹಲವು ಟಿ20 ಲೀಗ್‌ಗಳಲ್ಲೂ ತಂಡಗಳನ್ನು ಹೊಂದಿದ್ದಾರೆ. ಹೀಗಾಗಿ ಒಂದೇ ಮಾಲೀಕತ್ವದಡಿ ಇರುವ ತಂಡಗಳು ಪರಸ್ಪರ ಮುಖಾಮುಖಿಯಾದಾಗ ಹಿತಾಸಕ್ತಿ ಸಂಘರ್ಷ ಹಾಗೂ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳು ಎದುರಾಗಬಹುದು. ಈಗಾಗಲೇ ಕ್ರಿಕೆಟ್ ವೇಳಾಪಟ್ಟಿ ತುಂಬಾ ಒತ್ತಡದಿಂದ ಕೂಡಿದೆ. ಮತ್ತೊಂದು ಟೂರ್ನಿ ಆರಂಭಿಸಿದರೆ ಆಟಗಾರರು, ಪ್ರಸಾರಕರು ಹಾಗೂ ಪ್ರಾಯೋಜಕರ ನಡುವೆ ಮತ್ತಷ್ಟು ಪೈಪೋಟಿ ಎದುರಾಗಲಿದೆ. ಹೊಸ ಟೂರ್ನಿ ಆರಂಭಿಸುವ ಬದಲು ಈಗಿರುವ ಐಪಿಎಲ್ ಅನ್ನು ಮತ್ತಷ್ಟು ಬಲಪಡಿಸುವುದು ಉತ್ತಮ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಮಗುವಿನ ಪ್ರಾಣಾಪಾಯ ತಪ್ಪಿದೆ, ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಸ್ಪತ್ರೆ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಬಿಜೆಪಿ ಡಿಕ್ಷನರಿ ಓದಲಿ; ಖರ್ಗೆಯ ದೀಪಾವಳಿ ಶುಭಾಶಯಕ್ಕೆ ಕಾಂಗ್ರೆಸ್ ಸಮರ್ಥನೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?