ಬಾಲಿವುಡ್ ನಟಿ ಸುಶ್ಮಿತಾ ಸೇನ್‌ ಜೊತೆ ಲಲಿತ್ ಮೋದಿ ಡೇಟಿಂಗ್

ತನ್ನ ಮಾಜಿ ಗೆಳೆಯ ರೋಹ್ಮನ್ ಶಾಲ್ ಜೊತೆಗಿನ ಬ್ರೇಕ್ ಅಪ್ ನಂತರ, ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರು ಲಲಿತ್ ಮೋದಿಯನ್ನು ಮದುವೆಯಾಗಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಆದರೆ ಈ ಈ ಸುದ್ದಿ ಎಲ್ಲೆಡೆ ಹಬ್ಬಲು ಆರಂಭಿಸಿದಂತೆ ಮತ್ತೊಂದು ಟ್ವೀಟ್ ಮಾಡುವ ಮೂಲಕ ಮೋದಿ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ.

ಬಾಲಿವುಡ್ ನಟಿ ಸುಶ್ಮಿತಾ ಸೇನ್‌ ಜೊತೆ ಲಲಿತ್ ಮೋದಿ ಡೇಟಿಂಗ್
ಲಲಿತ್ ಮೋದಿ ಮತ್ತು ಸುಶ್ಮಿತಾ ಸೇನ್
Edited By:

Updated on: Jul 15, 2022 | 6:44 AM

ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ (Lalit Modi) ಅವರು ಬಾಲಿವುಡ್ ನಟಿ ಸುಶ್ಮಿತಾ ಸೇನ್ (Sushmita Sen) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. ಐಪಿಎಲ್ ಪಂದ್ಯಾವಳಿಯ ಮೊದಲ ಅಧ್ಯಕ್ಷ ಮತ್ತು ಕಮಿಷನರ್ ಆಗಿದ್ದ ಮೋದಿ ಅವರು ಗುರುವಾರ ಈ ಸುದ್ದಿಯನ್ನು ಟ್ವಿಟರ್‌ನಲ್ಲಿ ಸರಣಿ ಚಿತ್ರಗಳೊಂದಿಗೆ ಹಂಚಿಕೊಂಡಿದ್ದಾರೆ. ತನ್ನ ಮಾಜಿ ಗೆಳೆಯ ರೋಹ್ಮನ್ ಶಾಲ್ ಜೊತೆಗಿನ ಬ್ರೇಕ್ ಅಪ್ ನಂತರ, ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರು ಲಲಿತ್ ಮೋದಿಯನ್ನು ಮದುವೆಯಾಗಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಆದರೆ ಈ ಈ ಸುದ್ದಿ ಎಲ್ಲೆಡೆ ಹಬ್ಬಲು ಆರಂಭಿಸಿದಂತೆ ಮತ್ತೊಂದು ಟ್ವೀಟ್ ಮಾಡುವ ಮೂಲಕ ಮೋದಿ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ. ಎರಡನೇ ಟ್ವೀಟ್ ಮಾಡಿರುವ ಮೋದಿ ಅದರಲ್ಲಿ ನಾವು ಪರಸ್ಪರ ಡೇಟಿಂಗ್ ಮಾಡುತ್ತಿರುವುದು ನಿಜ ಎಂದು ಬರೆದುಕೊಂಡಿದ್ದಾರೆ.

2010ರಲ್ಲಿ ತೆರಿಗೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಮಧ್ಯೆ ಲಲಿತ್ ಮೋದಿ ಭಾರತ ತೊರೆದಿದ್ದರು. ಅಂದಿನಿಂದ ಅವರು ಲಂಡನ್‌ನಲ್ಲಿದ್ದಾರೆ.

ಸುಶ್ಮಿತಾ ಸೇನ್ 1994 ರಲ್ಲಿ ವಿಶ್ವ ಸುಂದರಿ ಕಿರೀಟವನ್ನು ತೊಟ್ಟಿದ್ದರು. ನಂತರ ಅವರು 1996 ರ ಚಲನಚಿತ್ರ ದಸ್ತಕ್ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಬಳಿಕ ಸೇನ್, ಬಿವಿ ನಂ 1, ಡು ನಾಟ್ ಡಿಸ್ಟರ್ಬ್, ಮೈ ಹೂ ನಾ, ಮೈನೆ ಪ್ಯಾರ್ ಕ್ಯೂನ್ ಕಿಯಾ ಮತ್ತು ತುಮ್ಕೋ ನಾ ಭೂಲ್ ಪಾಯೆಂಗೆ ಮತ್ತು ನೋ ಪ್ರಾಬ್ಲಂ ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸುಶ್ಮಿತಾ ಸೇನ್​ಗೆ ಈಗ ಅಲಿಸಾ ಮತ್ತು ರೆನೀ ಎಂಬ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಶ್ರೀಮತಿ ಸೇನ್ 2000 ರಲ್ಲಿ ರೆನೀಯನ್ನು ದತ್ತು ಪಡೆದರು, ಆದರೆ ಅಲಿಸಾ 2010 ರಲ್ಲಿ ಕುಟುಂಬವನ್ನು ಸೇರಿಕೊಂಡರು. ರೆನೀ ಅವರು ಕಿರುಚಿತ್ರದ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದ್ದಾರೆ.

ಸುಶ್ಮಿತಾ ಸೇನ್ ಕೊನೆಯ ಬಾರಿಗೆ ಆರ್ಯ ಎಂಬ ವೆಬ್ ಸರಣಿಯಲ್ಲಿ ಕಾಣಿಸಿಕೊಂಡಿದ್ದರು, ಇದು ಕಳೆದ ವರ್ಷ ಇಂಟರ್ನ್ಯಾಷನಲ್ ಎಮ್ಮಿಸ್‌ನಲ್ಲಿ ಅತ್ಯುತ್ತಮ ನಾಟಕ ಸರಣಿಯ ವಿಭಾಗದಲ್ಲಿ ನಾಮನಿರ್ದೇಶನಗೊಂಡಿತು.

Published On - 8:31 pm, Thu, 14 July 22