Lasith Malinga: ಕ್ರಿಕೆಟ್ ಕೆರಿಯರ್​ಗೆ ಗುಡ್​ ಬೈ ಹೇಳಿದ ಯಾರ್ಕರ್ ಕಿಂಗ್ ಲಸಿತ್ ಮಾಲಿಂಗ

TV9 Digital Desk

| Edited By: Zahir Yusuf

Updated on:Sep 14, 2021 | 7:05 PM

Lasith malinga Retirement: ಯಾರ್ಕರ್ ಎಸೆತಗಳ ಮೂಲಕ ಬ್ಯಾಟ್ಸ್​ಮನ್​ಗಳನ್ನು ಸಿಂಹಸ್ವಪ್ನವಾಗಿ ಕಾಡಿದ್ದ ಮಾಲಿಂಗ ಶ್ರೀಲಂಕಾ ಪರ 30 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.

Lasith Malinga: ಕ್ರಿಕೆಟ್ ಕೆರಿಯರ್​ಗೆ ಗುಡ್​ ಬೈ ಹೇಳಿದ ಯಾರ್ಕರ್ ಕಿಂಗ್ ಲಸಿತ್ ಮಾಲಿಂಗ
Lasith Malinga

ಶ್ರೀಲಂಕಾ ತಂಡದ ಹಿರಿಯ ವೇಗಿ ಲಸಿತ್ ಮಾಲಿಂಗ (Lasith Malinga) ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಹಿಂದೆ ಟೆಸ್ಟ್‌ ಮತ್ತು ಏಕದಿನಕ್ಕೆ ವಿದಾಯ ಹೇಳಿದ್ದ ಮಾಲಿಂಗ ಟಿ20 ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು. ಇದಾಗ್ಯೂ ಟಿ20 ವಿಶ್ವಕಪ್​ಗಾಗಿ (T20 World Cup 2021) ಆಯ್ಕೆ ಮಾಡಲಾಗಿರುವ ಲಂಕಾ ತಂಡದಲ್ಲಿ ಮಾಲಿಂಗಗೆ ಸ್ಥಾನ ನೀಡಲಾಗಿರಲಿಲ್ಲ. ಹೀಗಾಗಿ ಟಿ20 ಕ್ರಿಕೆಟ್​ಗೆ ವಿದಾಯ ಹೇಳುವ ಮೂಲಕ ಎಲ್ಲಾ ಮಾದರಿ ಕ್ರಿಕೆಟ್​ಗೆ ಗುಡ್ ಬೈ ಹೇಳುತ್ತಿರುವುದಾಗಿ ಯಾರ್ಕರ್ ಕಿಂಗ್ ತಿಳಿಸಿದ್ದಾರೆ. ಅದರಂತೆ ಮುಂದಿನ ದಿನಗಳಲ್ಲಿ ಯಾವುದೇ ಲೀಗ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2014 ರಲ್ಲಿ ಟಿ20 ವಿಶ್ವಕಪ್ ವಿಜೇತ ಶ್ರೀಲಂಕಾ ತಂಡದ ನಾಯಕರಾಗಿದ್ದ 38 ವರ್ಷ ಮಾಲಿಂಗ, 2020 ರಲ್ಲಿ ಟಿ20 ವಿಶ್ವಕಪ್​ನಲ್ಲಿ ಮತ್ತೆ ತಂಡವನ್ನು ಮುನ್ನಡೆಸುವ ಬಯಕೆ ಹೊಂದಿದ್ದರು. ಆದರೆ ಕೊರೋನಾ ಕಾರಣದಿಂದ ಟೂರ್ನಿ ಮುಂದೂಲ್ಪಟ್ಟಿತು. ಇದಾಗ್ಯೂ ಈ ಬಾರಿ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಹಿರಿಯ ವೇಗಿಯನ್ನು ಲಂಕಾ ಕ್ರಿಕೆಟ್ ಮಂಡಳಿ ಪರಿಗಣಿಸಿರಲಿಲ್ಲ. ಇದರ ಬೆನ್ನಲ್ಲೇ ನಿವೃತ್ತಿ ಘೋಷಿಸುವ ಮೂಲಕ ಮಾಲಿಂಗ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದಾರೆ.

ಟ್ವಿಟರ್​ ಮೂಲಕ ನಿವೃತ್ತಿ ಘೋಷಿಸಿರುವ ಮಾಲಿಂಗ, ನಾನು ನನ್ನ ಟಿ20 ಶೂಗಳನ್ನು ಜೋತು ಹಾಕುತ್ತಿದ್ದೇನೆ. ಈ ಮೂಲಕ ಎಲ್ಲಾ ಮಾದರಿ ಕ್ರಿಕೆಟ್​ನಿಂದ ನಿವೃತ್ತಿಯಾಗಿದ್ದೇನೆ. ನನ್ನ ಈ ಪ್ರಯಾಣದುದ್ದಕ್ಕೂ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಚಿರಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕರೆ ಯುವ ಆಟಗಾರರಿಗೆ ಮಾರ್ಗದರ್ಶನ ನೀಡುವುದಾಗಿ ತಿಳಿಸಿದ್ದಾರೆ.

ಯಾರ್ಕರ್ ಎಸೆತಗಳ ಮೂಲಕ ಬ್ಯಾಟ್ಸ್​ಮನ್​ಗಳನ್ನು ಸಿಂಹಸ್ವಪ್ನವಾಗಿ ಕಾಡಿದ್ದ ಮಾಲಿಂಗ ಶ್ರೀಲಂಕಾ ಪರ 30 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 101 ವಿಕೆಟ್ ಉರುಳಿಸಿ ಮಿಂಚಿದ್ದರು. ಇನ್ನು 226 ಏಕದಿನ ಪಂದ್ಯಗಳಿಂದ 338 ವಿಕೆಟ್ ಹಾಗೂ 83 ಟಿ20 ಪಂದ್ಯಗಳಲ್ಲಿ 107 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದ ಲಸಿತ್ ಮಾಲಿಂಗ 122 ಪಂದ್ಯಗಳಿಂದ 170 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದಿದ್ದಾರೆ.

ಇನ್ನು ಈ ಬಾರಿ ಐಪಿಎಲ್​ನಿಂದಲೂ ಲಸಿತ್ ಮಾಲಿಂಗ ಹೊರಗುಳಿದಿದ್ದರು. ವೈಯುಕ್ತಿಕ ಕಾರಣಗಳಿಂದಾಗಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುತ್ತಿಲ್ಲ ಎಂದು ತಿಳಿಸಿದ್ದರು. ಹೀಗಾಗಿ ಮಾಲಿಂಗ ಮೊದಲಾರ್ಧದಲ್ಲಿ ಕಾಣಿಸಿಕೊಂಡಿರಲಿಲ್ಲ. ಅತ್ತ ಮುಂಬೈ ಇಂಡಿಯನ್ಸ್​ ಈ ಬಾರಿ ದ್ವಿತಿಯಾರ್ಧದಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.

ಇದನ್ನೂ ಓದಿ: 16 ಸಿಕ್ಸರ್, 4 ಫೋರ್: ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ಬರೆದ ಜಸ್ಕರನ್

ಇದನ್ನೂ ಓದಿ: Rashid Khan: ಟಿ20 ವಿಶ್ವಕಪ್​ಗೆ ಅಫ್ಘಾನ್ ತಂಡ ಪ್ರಕಟ: ನಾಯಕತ್ವಕ್ಕೆ ರಶೀದ್ ಖಾನ್ ರಾಜೀನಾಮೆ

ಇದನ್ನೂ ಓದಿ: Crime News: ಯುವತಿಗೆ ಡ್ರಾಪ್ ಕೊಡಲು ಬೈಕ್ ನಿಲ್ಲಿಸಿದ ಯುವಕ: ಆಮೇಲೆ ಆಗಿದ್ದೇ ಬೇರೆ!

ಇದನ್ನೂ ಓದಿ: Crime News: ತಾಯಿಗೆ ಅನೈತಿಕ ಸಂಬಂಧ: ಅದನ್ನೇ ಬಂಡವಾಳ ಮಾಡಿಕೊಂಡ ಮಗಳು

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada