Sign In

By signing in or creating an account, you agree with Associated Broadcasting Company's Terms & Conditions and Privacy Policy.

Bishan Singh Bedi: ಭಾರತದ ಲೆಜೆಂಡರಿ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ನಿಧನ

Bishan Singh Bedi: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಪಿನ್ ಸರ್ದಾರ್ ಆಗಿ ಗುರುತಿಸಿಕೊಂಡಿದ್ದ ಬಿಷನ್ ಸಿಂಗ್ ಬೇಡಿ ಮೂಲತಃ ಪಂಜಾಬ್​ನ ಅಮೃತಸರದವರು. ಆದರೆ ಅವರು ದೇಶೀಯ ಅಂಗಳದಲ್ಲಿ ಕಣಕ್ಕಿಳಿದದ್ದು ದೆಹಲಿ ಪರ ಎಂಬುದು ವಿಶೇಷ.

Bishan Singh Bedi: ಭಾರತದ ಲೆಜೆಂಡರಿ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ನಿಧನ
Bishan Singh Bedi
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 23, 2023 | 4:28 PM

ಭಾರತ ತಂಡದ ಮಾಜಿ ಸ್ಪಿನ್ನರ್  ಬಿಷನ್ ಸಿಂಗ್ ಬೇಡಿ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.  1967 ಮತ್ತು 1979 ರ ನಡುವೆ ಭಾರತದ ಪರ 67 ಟೆಸ್ಟ್ ಪಂದ್ಯಗಳನ್ನಾಡಿರುವ ಬಿಷನ್ ಸಿಂಗ್ ಬೇಡಿ ಅವರು 266 ಟೆಸ್ಟ್ ವಿಕೆಟ್​ ಕಬಳಿಸಿದ್ದರು. ಹಾಗೆಯೇ 10 ಏಕದಿನ ಪಂದ್ಯಗಳಿಂದ 7 ವಿಕೆಟ್​ಗಳನ್ನು ಪಡೆದಿದ್ದರು.

ವಿಶೇಷ ಎಂದರೆ ಭಾರತ ತಂಡವು ಏಕದಿನ ಕ್ರಿಕೆಟ್​ನಲ್ಲಿ ಮೊದಲ ಗೆಲುವು ಸಾಧಿಸಿದಾಗ ಕಣಕ್ಕಿಳಿದ ತಂಡದಲ್ಲಿ ಬಿಷನ್ ಸಿಂಗ್ ಬೇಡಿ ಕಾಣಿಸಿಕೊಂಡಿದ್ದರು. 1975 ರಲ್ಲಿ ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ಈಸ್ಟ್ ಆಫ್ರಿಕಾ ವಿರುದ್ಧ 12 ಓವರ್​ಗಳನ್ನು ಎಸೆದಿದ್ದ ಬೇಡಿ 8 ಮೇಡನ್ ಮಾಡಿ ಕೇವಲ 6 ರನ್ ನೀಡಿದ್ದರು. ಅಲ್ಲದೆ 1 ವಿಕೆಟ್ ಕಬಳಿಸುವ ಮೂಲಕ ಎದುರಾಳಿ ತಂಡವನ್ನು ಕೇವಲ 120 ರನ್​ಗಳಿಗೆ ನಿರ್ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಸರ್ದಾರ್ ಆಫ್ ಸ್ಪಿನ್:

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಪಿನ್ ಸರ್ದಾರ್ ಆಗಿ ಗುರುತಿಸಿಕೊಂಡಿದ್ದ ಬಿಷನ್ ಸಿಂಗ್ ಬೇಡಿ ಮೂಲತಃ ಪಂಜಾಬ್​ನ ಅಮೃತಸರದವರು. ಆದರೆ ಅವರು ದೇಶೀಯ ಅಂಗಳದಲ್ಲಿ ಕಣಕ್ಕಿಳಿದದ್ದು ದೆಹಲಿ ಪರ ಎಂಬುದು ವಿಶೇಷ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ದೆಹಲಿ ಪರ 370 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದ ಬಿಷನ್ ಸಿಂಗ್ ಬೇಡಿ ಒಟ್ಟು 1,560  ವಿಕೆಟ್​ಗಳನ್ನು ಕಬಳಿಸಿದ್ದರು.

ಹಾಗೆಯೇ 1978-79 ಮತ್ತು 1979-80ರ ರಣಜಿ ಟ್ರೋಫಿಯಲ್ಲಿ ದೆಹಲಿ ತಂಡವನ್ನು ಮುನ್ನಡೆಸಿದ್ದರು. ಇವರ ನಾಯಕತ್ವದಲ್ಲಿ ದೆಹಲಿ ತಂಡವು ಎರಡು ಬಾರಿ ರನ್ನರ್ ಅಪ್ ಆಗಿತ್ತು. ಅಲ್ಲದೆ ಇವರ ಅವಧಿಯಲ್ಲೇ ದೆಹಲಿ ತಂಡವು ಐದು ವರ್ಷಗಳಲ್ಲಿ ನಾಲ್ಕು ಬಾರಿ ರಣಜಿ ಫೈನಲ್ ಆಡಿತ್ತು ಎಂಬುದು ಮತ್ತೊಂದು ವಿಶೇಷ.

ಇದನ್ನೂ ಓದಿ: ಚೇಸ್ ಮಾಸ್ಟರ್…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

ಕೌಂಟಿಯಲ್ಲೂ ಮಿಂಚಿದ್ದ ಸಿಂಗ್:

ಇಂಗ್ಲಿಷ್ ಕೌಂಟಿ ಕ್ರಿಕೆಟ್ ಸರ್ಕ್ಯೂಟ್‌ನಲ್ಲಿ ಬಿಷನ್ ಸಿಂಗ್ ಬೇಡಿ ಅತ್ಯಂತ ಯಶಸ್ವಿ ಸಾಗರೋತ್ತರ ಆಟಗಾರರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ನಾರ್ಥಾಂಪ್ಟನ್‌ಶೈರ್‌ ತಂಡದ ಪರ 1972 ಮತ್ತು 1977 ರ ನಡುವೆ 102 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ  ಬೇಡಿ ಒಟ್ಟು 434 ವಿಕೆಟ್‌ಗಳನ್ನು ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ಎಲ್ಲಾ ಸಾಧನೆಗಳೊಂದಿಗೆ ಭಾರತೀಯ ಸ್ಪಿನ್ ದಂತಕಥೆ  ಇಹಲೋಕ ತ್ಯಜಿಸಿದ್ದಾರೆ.

Published On - 3:49 pm, Mon, 23 October 23

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ