AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virender Sehwag: ಕೂ ಆಪ್​ಗೆ ಎಂಟ್ರಿಕೊಟ್ಟ ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್; ಅಭಿಮಾನಿಗಳಿಗೆ ವಿಶೇಷ ಆಹ್ವಾನ

Virender Sehwag: ಕೂ ಬಹುಭಾಷೆಯ ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ಆಗಿದ್ದು, ಭಾರತೀಯರು ತಮ್ಮ ಸ್ಥಳೀಯ ಭಾಷೆಗಳಲ್ಲಿ ತಮ್ಮನ್ನು ತಾವು ಅಭಿವ್ಯಕ್ತಪಡಿಸಲು ಶಕ್ತಿಯಾಗುವ ಉದ್ದೇಶ ಹೊಂದಿದೆ.

Virender Sehwag: ಕೂ ಆಪ್​ಗೆ ಎಂಟ್ರಿಕೊಟ್ಟ ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್; ಅಭಿಮಾನಿಗಳಿಗೆ ವಿಶೇಷ ಆಹ್ವಾನ
ಕೂ ಆಪ್​ಗೆ ಎಂಟ್ರಿಕೊಟ್ಟ ವೀರೇಂದ್ರ ಸೆಹ್ವಾಗ್
Follow us
TV9 Web
| Updated By: ಪೃಥ್ವಿಶಂಕರ

Updated on: Oct 04, 2021 | 3:52 PM

ಬೆಂಗಳೂರು: ಕ್ರಿಕೆಟ್ ದಂತಕಥೆ ವೀರೇಂದ್ರ ಸೆಹ್ವಾಗ್ ಭಾರತದ ಅತಿದೊಡ್ಡ ಬಹುಭಾಷಾ ಮೈಕ್ರೋ ಬ್ಲಾಗಿಂಗ್ ಆಪ್ – ಕೂ ಗೆ ಎಂಟ್ರಿಕೊಟ್ಟಿದ್ದಾರೆ. @VirenderSehwag ಹ್ಯಾಂಡಲ್ ಬಳಸಿ ತಮ್ಮ ಆಗಮನದ ಬಗ್ಗೆ ಮೊದಲ ಕೂನಲ್ಲಿ ಹಂಚಿಕೊಂಡರು. ‘ಹೇಗೆ ಬೆಂಗಳೂರು, ದೆಹಲಿ ಮತ್ತು ಚೆನ್ನೈ ಪ್ಲೇಆಫ್ ಪ್ರವೇಶಿಸಿವೆ ಹಾಗೆ ನಾನೂ ಕೂ ಕ್ರೀಡಾಂಗಣವನ್ನು ಪ್ರವೇಶಿಸಿದ್ದೇನೆ’ ಎಂದು ಸೆಹ್ವಾಗ್ ಕೂ ಮಾಡಿದ್ದಾರೆ. ಐಪಿಎಲ್ ಪಂದ್ಯಗಳನ್ನು ವಿಮರ್ಶಿಸುವ ಆನ್ಲೈನ್ ಸರಣಿಯಾದ #DejaViru ಬಗ್ಗೆ ತಮ್ಮ ಕೂ ವಿನಲ್ಲಿ ಉಲ್ಲೇಖಿಸಿದ್ದಾರೆ. ಸೆಹ್ವಾಗ್ ಅವರ ಕೂ ಪ್ರವೇಶವು ಬಳಕೆದಾರರಿಗೆ ಭಾರತೀಯ ಭಾಷೆಗಳಲ್ಲಿ ಲೈವ್ ಆಕ್ಷನ್ ಮತ್ತು ಮ್ಯಾಚ್ ಕಾಮೆಂಟರಿಯನ್ನು ಕೇಳುವುದಕ್ಕೆ ಉತ್ಸಾಹ ತರುತ್ತದೆ.

ಯುಎಇ ಮತ್ತು ಒಮಾನ್​ನಲ್ಲಿ ಅಕ್ಟೋಬರ್ 17 ರಿಂದ ಟಿ 20 ವಿಶ್ವಕಪ್ ಆರಂಭವಾಗಲಿದ್ದು, ಈ ಸಂದರ್ಭದಲ್ಲಿ ಸೆಹ್ವಾಗ್ ಕೂ ಸೇರಿರುವುದು ಕ್ರಿಕೆಟ್ ಪ್ರೇಮಿಗಳಿಗೆ ದುಪ್ಪಟ್ಟು ಸಂಭ್ರಮ ದೊರೆಯಲಿದೆ. ಕೂ ಸೇರಿದ ಕೆಲವೇ ಗಂಟೆಗಳಲ್ಲಿ ಕ್ರಿಕೆಟ್ ಮತ್ತು ಟ್ರೆಂಡಿಂಗ್ ವಿಷಯಗಳ ಬಗ್ಗೆ ಚುರುಕಾದ ಪ್ರತಿಕ್ರಿಯೆಗಳು ಮತ್ತು ಚಮತ್ಕಾರಿ ಕಾಮೆಂಟ್ ಗಳಿಗೆ ಹೆಸರುವಾಸಿಯಾದ ಸೆಹ್ವಾಗ್ ಅಭಿಮಾನಿಗಳಿಂದ ಅದ್ಭುತ ಪ್ರತಿಕ್ರಿಯೆ ಪಡೆದರು!

ಕೂ ಬಹುಭಾಷೆಯ ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ವೇದಿಕೆಗೆ ಸೆಹ್ವಾಗ್ ಅವರನ್ನು ಸ್ವಾಗತಿಸಿದ ಕೂ ವಕ್ತಾರರು, ಕ್ರಿಕೆಟ್ ಕೇವಲ ಒಂದು ಆಟವಲ್ಲ – ಭಾರತೀಯರ ಬದುಕು ಮತ್ತು ಉಸಿರಿನ ಜೊತೆಯಲ್ಲಿ ಬೆರೆತ ಭಾವ. ನಮ್ಮ ಸಾಂಸ್ಕೃತಿಕ ಮತ್ತು ಭಾಷಾ ವೈವಿದ್ಯತೆಗಳನ್ನು ಮೀರಿ ನಮ್ಮೆಲ್ಲರನ್ನು ಒಟ್ಟಿಗೆ ಬಂಧಿಸುವ ಅಭಿವ್ಯಕ್ತಿ. ಹಾಗೆಯೇ, ಕೂ ಬಹುಭಾಷೆಯ ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ಆಗಿದ್ದು, ಭಾರತೀಯರು ತಮ್ಮ ಸ್ಥಳೀಯ ಭಾಷೆಗಳಲ್ಲಿ ತಮ್ಮನ್ನು ತಾವು ಅಭಿವ್ಯಕ್ತಪಡಿಸಲು ಶಕ್ತಿಯಾಗುವ ಉದ್ದೇಶ ಹೊಂದಿದೆ. ಟಿ 20 ವಿಶ್ವಕಪ್ ಮುಂಚಿತವಾಗಿ ವೀರೇಂದ್ರ ಸೆಹ್ವಾಗ್ ಅವರ ಕೂ ಪ್ರವೇಶವು ಬಳಕೆದಾರರು ಮತ್ತು ಕ್ರಿಕೆಟ್ ಅಭಿಮಾನಿಗಳಿಗೆ ಅದ್ಭುತವಾದ ಉತ್ಸಾಹವನ್ನು ಕೆರಳಿಸಿದೆ ಎಂದು ಹೇಳಿದರು.

ಕೂ ಆಪ್ ಬಗ್ಗೆ ಒಂದಿಷ್ಟು ಮಾಹಿತಿ ಕೂ ಮಾರ್ಚ್ 2020 ರಲ್ಲಿ ಭಾರತೀಯ ಭಾಷೆಗಳನ್ನೊಳಗೊಂಡ ಮೈಕ್ರೋ-ಬ್ಲಾಗಿಂಗ್ ವೇದಿಕೆಯಾಗಿ ಸ್ಥಾಪಿತವಾಯಿತು. ಇದು ಅನೇಕ ಭಾರತೀಯ ಭಾಷೆಗಳಲ್ಲಿ ಲಭ್ಯವಿದೆ, ಇಲ್ಲಿ ಭಾರತದ ವಿವಿಧ ಪ್ರದೇಶಗಳ ಜನರು ತಮ್ಮ ಮಾತೃಭಾಷೆಯಲ್ಲಿಯೇ ತಮ್ಮ ಮನದಾಳವನ್ನು ವ್ಯಕ್ತಪಡಿಸಿಕೊಳ್ಳಬಹುದು. ಕೇವಲ 10% ಜನರು ಇಂಗ್ಲಿಷ್ ಮಾತನಾಡುವ ಭಾರತ ದೇಶದಲ್ಲಿ, ಭಾರತೀಯ ಬಳಕೆದಾರರಿಗೆ ಮನಮುಟ್ಟುವಂತೆ ಭಾಷಾ ಅನುಭವಗಳನ್ನು ತಲುಪಿಸಬಲ್ಲ ಮತ್ತು ಪರಸ್ಪರ ಸಂಪರ್ಕ ಸಾಧಿಸಲು ಸಹಾಯ ಮಾಡುವ ಸಾಮಾಜಿಕ ಜಾಲತಾಣ ವೇದಿಕೆ ಅತ್ಯವಶ್ಯವಾಗಿದೆ. ಭಾರತೀಯ ಭಾಷೆಗಳಿಗೆ ಆದ್ಯತೆ ನೀಡುವ ಭಾರತೀಯರ ಧ್ವನಿಗಳಿಗೆ ಕೂ ಒಂದು ವೇದಿಕೆಯನ್ನು ಒದಗಿಸುತ್ತದೆ.

ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ