AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಟೆಸ್ಟ್​ ಭವಿಷ್ಯದ ಬಗ್ಗೆ ಮಾಜಿ ಕ್ರಿಕೆಟರುಗಳ ‘ಭಿನ್ನಾಭಿಪ್ರಾಯ’

ಭಾರತೀಯ ಕ್ರಿಕೆಟ್‌ನ 15 ವರ್ಷದ ಉದಯೋನ್ಮುಖ ತಾರೆ ಹಾಗೂ ರನ್ ಮಷಿನ್ ವೈಭವ್ ಸೂರ್ಯವಂಶಿ ಅವರ ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ಜಾಗತಿಕ ಕ್ರಿಕೆಟ್ ವಲಯದಲ್ಲಿ ಈಗ ಭಾರಿ ಚರ್ಚೆ ಶುರುವಾಗಿದೆ. ಇತ್ತೀಚೆಗೆ ನಡೆದ ‘ಬಿಯಾಂಡ್23 ಕ್ರಿಕೆಟ್ ಪಾಡ್‌ಕಾಸ್ಟ್‌’ ನಲ್ಲಿ ವಿಶ್ವದ ಮೂವರು ಮಾಜಿ ದಿಗ್ಗಜ ಆಟಗಾರರು ಈ ಯುವ ಎಡಗೈ ಬ್ಯಾಟರ್‌ನ ಸುದೀರ್ಘ ಮಾದರಿಯ ಕ್ರಿಕೆಟ್ ಸಾಮರ್ಥ್ಯದ ಬಗ್ಗೆ ಪರ-ವಿರೋಧದ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ವೈಭವ್ ಟೆಸ್ಟ್​ ಭವಿಷ್ಯದ ಬಗ್ಗೆ ಮಾಜಿ ಕ್ರಿಕೆಟರುಗಳ 'ಭಿನ್ನಾಭಿಪ್ರಾಯ'
ವೈಭವ್ ಸೂರ್ಯವಂಶಿImage Credit source: x.com
ಝಾಹಿರ್ ಯೂಸುಫ್
|

Updated on: Sep 20, 2026 | 10:05 AM

Share

ಭಾರತೀಯ ಕ್ರಿಕೆಟ್‌ನ 15 ವರ್ಷದ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಕೌಶಲ್ಯದ ಬಗ್ಗೆ ಇಂಗ್ಲೆಂಡ್‌ನ ಮಾಜಿ ಎಡಗೈ ಸ್ಪಿನ್ನರ್ ಮಾಂಟಿ ಪನೇಸರ್ ತೀವ್ರ ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಯಾಂಡ್23 ಕ್ರಿಕೆಟ್ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಅವರು, ಸೂರ್ಯವಂಶಿ ಅವರ ಪ್ರಸ್ತುತ ಬ್ಯಾಟಿಂಗ್ ಶೈಲಿ ಸುದೀರ್ಘ ಫಾರ್ಮ್ಯಾಟ್‌ಗೆ ಸೂಕ್ತವಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪನೇಸರ್ ಅವರ ವಿಮರ್ಶೆ ಏನು?

ಆಧುನಿಕ ಕ್ರಿಕೆಟ್‌ನಲ್ಲಿ ಮೂರೂ ಫಾರ್ಮ್ಯಾಟ್‌ಗಳಲ್ಲಿ (ಟೆಸ್ಟ್, ಏಕದಿನ, ಟಿ20) ಯಶಸ್ವಿಯಾಗುವುದು ಅತ್ಯಂತ ಕಠಿಣ ಎಂದಿರುವ ಪನೇಸರ್, ಇಂಗ್ಲೆಂಡ್‌ನ ಹ್ಯಾರಿ ಬ್ರೂಕ್ ತರಹದ ಕೆಲವೇ ಕೆಲವು ಆಟಗಾರರು ಮಾತ್ರ ಈ ಸಾಧನೆ ಮಾಡುತ್ತಿದ್ದಾರೆ ಎಂದಿದ್ದಾರೆ.

ನನ್ನ ಪ್ರಕಾರ, ವೈಭವ್ ಸೂರ್ಯವಂಶಿ ಟೆಸ್ಟ್ ಕ್ರಿಕೆಟ್‌ಗೆ ಹೊಂದಿಕೊಳ್ಳುತ್ತಾರೆ ಎಂದು ನನಗೆ ಅನಿಸುತ್ತಿಲ್ಲ. ಸುದೀರ್ಘ ಮಾದರಿಯಲ್ಲಿ ಆಡಲು ಬೇಕಾದ ಸೂಕ್ತ ಬ್ಯಾಟಿಂಗ್ ತಂತ್ರ ಅವರಲ್ಲಿ ಇದ್ದಂತಿಲ್ಲ ಎಂದು ಮಾಂಟಿ ಪನೇಸರ್ ನೇರವಾಗಿ ಹೇಳಿದ್ದಾರೆ.

ಮಾಂಟಿ ಪನೇಸರ್ ಅವರ ಹೇಳಿಕೆಗೆ ಪುಷ್ಟಿ ನೀಡುವಂತೆ ವೈಭವ್ ಅವರ ಇದುವರೆಗಿನ ಪ್ರದರ್ಶನದ ಅಂಕಿ-ಅಂಶಗಳನ್ನು ಗಮನಿಸಬಹುದು:

  • ಟಿ20 ಕ್ರಿಕೆಟ್‌ನಲ್ಲಿ ಅಬ್ಬರ: ಟಿ20 ಮಾದರಿಯಲ್ಲಿ ವೈಭವ್ ಸೂರ್ಯವಂಶಿ ಅದ್ಭುತ ದಾಖಲೆ ಹೊಂದಿದ್ದಾರೆ. ಐಪಿಎಲ್ ಹಾಗೂ ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ 216.32 ರ ಸ್ಟ್ರೈಕ್ ರೇಟ್ ಹಾಗೂ 42.82 ರ ಸರಾಸರಿಯಲ್ಲಿ ರನ್ ಚಚ್ಚಿದ್ದಾರೆ.
  • ಪ್ರಥಮ ದರ್ಜೆ (ಟೆಸ್ಟ್​) ಕ್ರಿಕೆಟ್‌ನಲ್ಲಿ ತಡಕಾಟ: ರೆಡ್ ಬಾಲ್​ ಕ್ರಿಕೆಟ್‌ನಲ್ಲಿ ಅವರ ಪ್ರದರ್ಶನ ಇನ್ನೂ ಸುಧಾರಿಸಬೇಕಿದೆ. 11 ಪ್ರಥಮ ದರ್ಜೆ ಪಂದ್ಯಗಳಲ್ಲಿ ಅವರ ಬ್ಯಾಟಿಂಗ್ ಸರಾಸರಿ 23.47 ರಷ್ಟಿದೆ. ಆದರೆ ಇತ್ತೀಚೆಗೆ ನಡೆದ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯದ ಪರ 93 ರನ್‌ ಗಳಿಸಿ ಭರವಸೆ ಮೂಡಿಸಿದ್ದಾರೆ.

ಕ್ಲಾರ್ಕ್ ಕೌಂಟರ್!

ಇದೇ ಪಾಡ್‌ಕಾಸ್ಟ್‌ ನಲ್ಲಿದ್ದ ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್ ಅವರು ಪನೇಸರ್ ವಾದವನ್ನು ಸಂಪೂರ್ಣವಾಗಿ ಒಪ್ಪದಿದ್ದರೂ, ವೈಭವ್ ಪರ ಬ್ಯಾಟ್ ಬೀಸಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ದಿಗ್ಗಜರು ಮೂರೂ ಫಾರ್ಮ್ಯಾಟ್‌ಗಳಲ್ಲಿ ಅಧಿಪತ್ಯ ಸ್ಥಾಪಿಸಿದ್ದನ್ನು ನೆನಪಿಸಿದ ಕ್ಲಾರ್ಕ್, ಈ ತಲೆಮಾರಿನ ವೈಭವ್ ಸೂರ್ಯವಂಶಿ ಕೂಡ ಭವಿಷ್ಯದಲ್ಲಿ ಅದ್ಭುತ ಟೆಸ್ಟ್ ಆಟಗಾರನಾಗಿ ಹೊರಹೊಮ್ಮಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವೈಭವ್ ಸೂರ್ಯವಂಶಿಗೆ ಈಗ 15 ವರ್ಷ ಅಷ್ಟೇ. ಇನ್ನೂ ಸಾಕಷ್ಟು ಸಮಯವಿದೆ. ಮೂರು ಸ್ವರೂಪದ ಕ್ರಿಕೆಟ್​ ಆಡಲು ಬೇಕಾದ ಸಂಪೂರ್ಣ ಕೌಶಲ್ಯವನ್ನು ವೃದ್ಧಿಸಿಕೊಳ್ಳಬಹುದು. ಹೀಗಾಗಿ ವೈಭವ್ ಸೂರ್ಯವಂಶಿ, ಮುಂಬರುವ ದಿನಗಳಲ್ಲಿ ಟೆಸ್ಟ್​​ ಆಟಗಾರನಾಗಿಯೂ ಹೊರಹೊಮ್ಮಲಿದ್ದಾರೆ ಎಂದು ಕ್ಲಾರ್ಕ್ ಹೇಳಿದ್ದಾರೆ.

ವಾನ್ ಕಳವಳ:

ಇಂಗ್ಲೆಂಡ್‌ನ ಮತ್ತೊಬ್ಬ ಮಾಜಿ ನಾಯಕ ಮೈಕೆಲ್ ವಾನ್ ಕೂಡ ವೈಭವ್ ಸೂರ್ಯವಂಶಿ ಅವರ ಫಿಟ್‌ನೆಸ್ ಹಾಗೂ ಏಕಾಗ್ರತೆಯ ಬಗ್ಗೆ ಮಾತನಾಡಿದ್ದಾರೆ. ಟಿ20 ಕ್ರಿಕೆಟ್‌ನಂತೆ ಇಲ್ಲಿ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮ ಇರುವುದಿಲ್ಲ. ಟೆಸ್ಟ್ ಕ್ರಿಕೆಟ್‌ನಲ್ಲಿ ದಿನವಿಡೀ ಫೀಲ್ಡಿಂಗ್ ಮಾಡುವುದು ಮತ್ತು ಸುದೀರ್ಘ ಅವಧಿಗೆ ಕ್ರೀಸ್‌ನಲ್ಲಿ ನಿಲ್ಲುವುದು ಈ 15 ವರ್ಷದ ಹುಡುಗನಿಗೆ ದೈಹಿಕ ಹಾಗೂ ಮಾನಸಿಕವಾಗಿ ದೊಡ್ಡ ಸವಾಲಾಗಲಿದೆ ಎಂದು ವಾನ್ ವಿಶ್ಲೇಷಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ವೈಭವ್ ಅವರನ್ನು ಕೇವಲ ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಅದಕ್ಕಿಂತ ಹೆಚ್ಚಾಗಿ ಫೀಲ್ಡಿಂಗ್‌ನಲ್ಲಿ ಪರೀಕ್ಷಿಸಲಿದೆ. ಸುದೀರ್ಘ ಅವಧಿಯ ಫೀಲ್ಡಿಂಗ್ ಸೆಷನ್‌ಗಳು ದೈಹಿಕವಾಗಿ ಅಪಾರ ಶಕ್ತಿಯನ್ನು ಬೇಡುತ್ತವೆ. ವಿರೋಧಿ ತಂಡಗಳು ವೈಭವ್ ಅವರ ಈ ದೈಹಿಕ ಆಯಾಸವನ್ನೇ ಬಂಡವಾಳ ಮಾಡಿಕೊಳ್ಳಬಹುದು ಎಂದು ವಾನ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಇಂಡಿಯಾ ಇಲೆವೆನ್ vs ವರ್ಲ್ಡ್ ಇಲೆವೆನ್ ಪಂದ್ಯಕ್ಕೆ ಪ್ಲ್ಯಾನ್!

ಒಟ್ಟಾರೆಯಾಗಿ ಹೇಳುವುದಾದರೆ, 15 ವರ್ಷದ ವೈಭವ್ ಸೂರ್ಯವಂಶಿ ಬ್ಯಾಟಿಂಗ್ ತಂತ್ರದ ಕೊರತೆಯಿಂದಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಯಶಸ್ವಿಯಾಗಲ್ಲ ಎಂದು ಮಾಂಟಿ ಪನೇಸರ್ ವಾದಿಸಿದರೆ, ಭವಿಷ್ಯದಲ್ಲಿ ಅವರು ಟೆಸ್ಟ್ ಮಾದರಿಯಲ್ಲೂ ಮಿಂಚಲಿದ್ದಾರೆ ಎಂದು ಮೈಕೆಲ್ ಕ್ಲಾರ್ಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಮೈಕೆಲ್ ವಾನ್, ಟೆಸ್ಟ್ ಆಡಲು ವೈಭವ್‌ಗೆ ಫಿಟ್‌ನೆಸ್ ಮತ್ತು ಸುದೀರ್ಘ ಅವಧಿಯ ಏಕಾಗ್ರತೆಯ ಸವಾಲು ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ. ಹೀಗೆ ಒಂದೇ ಪಾಡ್‌ಕಾಸ್ಟ್‌ನಲ್ಲಿ ಮೂವರು ಮಾಜಿ ದಿಗ್ಗಜ ಆಟಗಾರರು ಈ ಯುವ ಆಟಗಾರನ ಟೆಸ್ಟ್ ಭವಿಷ್ಯದ ಬಗ್ಗೆ ಭಿನ್ನಾಭಿಪ್ರಾಯಗಳನ್ನು ಹಂಚಿಕೊಂಡಿದ್ದು, ಮುಂದಿನ ದಿನಗಳಲ್ಲಿ ಯಾರ ಭವಿಷ್ಯವಾಣಿ ನಿಜವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಬಿಗ್ ಬಾಸ್ ಮನೆಯಿಂದ ಮಂಜ ಔಟ್: ಅಶ್ಲೀಲವಾಗಿ ಮಾತಾಡಿದ್ದಕ್ಕೆ ಶಿಕ್ಷೆ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ