AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Legends League Cricket: ಗಂಗೂಲಿಗೆ ಭಾರತ ತಂಡದ ನಾಯಕತ್ವ; ವಿಶೇಷ ಪಂದ್ಯಕ್ಕೆ ಉಭಯ ತಂಡಗಳು ಪ್ರಕಟ

ವರದಿಯ ಪ್ರಕಾರ, ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ ಎರಡನೇ ಸೀಸನ್, ಭಾರತದ ಟೀಮ್ ಇಂಡಿಯಾ ಮಹಾರಾಜ ತಂಡ, ರೆಸ್ಟ್ ಆಫ್ ದಿ ವರ್ಲ್ಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಸೆಪ್ಟೆಂಬರ್ 15 ರಂದು ಈಡನ್ ಗಾರ್ಡನ್‌ನಲ್ಲಿ ನಡೆಯಲಿದೆ.

Legends League Cricket: ಗಂಗೂಲಿಗೆ ಭಾರತ ತಂಡದ ನಾಯಕತ್ವ; ವಿಶೇಷ ಪಂದ್ಯಕ್ಕೆ ಉಭಯ ತಂಡಗಳು ಪ್ರಕಟ
Image Credit source: Timesnow
TV9 Web
| Edited By: |

Updated on:Aug 12, 2022 | 2:35 PM

Share

ಸೌರವ್ ಗಂಗೂಲಿ (Sourav Ganguly) ಭಾರತ ತಂಡದ ನಾಯಕತ್ವ ತೊರೆದು, ಕ್ರಿಕೆಟ್‌ನಿಂದ ನಿವೃತ್ತಿಯಾಗಿ ವರ್ಷಗಳೆ ಕಳೆದಿದೆ. ಆದರೆ, ಸ್ವಾತಂತ್ರ್ಯದ 75ನೇ ವರ್ಷಾಚರಣೆಯಂದು ನಡೆಯುವ ಮಹತ್ವದ ಪಂದ್ಯದಲ್ಲಿ ಅವರು ಮತ್ತೊಮ್ಮೆ ಭಾರತ ತಂಡದ ನಾಯಕತ್ವ ವಹಿಸಿ ಬ್ಯಾಟ್ ಬೀಸುವುದನ್ನು ಅಭಿಮಾನಿಗಳು ಕಾಣಬಹುದಾಗಿದೆ. ವಾಸ್ತವವಾಗಿ, ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ (Legends League cricket) ಎರಡನೇ ಸೀಸನ್‌ನಲ್ಲಿ, ಭಾರತದ ಇಂಡಿಯಾ ಮಹಾರಾಜಸ್ (India Maharaja) ತಂಡ ರೆಸ್ಟ್ ಆಫ್ ದಿ ವರ್ಲ್ಡ್ ತಂಡವನ್ನು (Rest of the World team) ಎದುರಿಸಲಿದೆ ಎಂದು ವರದಿಯಾಗಿದೆ. ಈ ಪಂದ್ಯ ಸೆಪ್ಟೆಂಬರ್ 16 ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದ್ದು, ಇದಕ್ಕಾಗಿ ತಂಡವನ್ನು ಸಹ ಪ್ರಕಟಿಸಲಾಗಿದೆ.

ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದಂದು, ಭಾರತ ಮತ್ತು ರೆಸ್ಟ್ ಆಫ್ ದಿ ವರ್ಲ್ಡ್ ತಂಡದ ನಡುವಿನ ಪಂದ್ಯವನ್ನು ಭಾರತ ಸರ್ಕಾರ ಆಯೋಜಿಸಲಿದೆ.

10 ದೇಶಗಳ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ

ಇದನ್ನೂ ಓದಿ
Image
Sourav Ganguly: ಬ್ಯಾಟ್​ನೊಂದಿಗೆ ಮತ್ತೆ ಕ್ರಿಕೆಟ್ ಅಖಾಡಕ್ಕಳಿಯುತ್ತಾರಾ ಗಂಗೂಲಿ; ಹೌದು ಎನ್ನುತ್ತಿವೆ ಈ ಫೋಟೋಗಳು
Image
BCCI: ಎರಡು ಪ್ರಮುಖ ದೇಶೀ ಕ್ರಿಕೆಟ್ ಪಂದ್ಯಾವಳಿಗಳು ಪುನರಾರಂಭ: ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ ಬಿಸಿಸಿಐ
Image
ಬಿಸಿಸಿಐನಲ್ಲಿ ದಾದಾ- ಜೈ ಶಾ ಪಾರುಪತ್ಯ; ಮೇಲ್ಮನವಿ ವಿಚಾರಣೆ ಒಂದು ವಾರ ಮುಂದೂಡಿದ ಸುಪ್ರೀಂ ಕೋರ್ಟ್

ಈ ಪಂದ್ಯ ಇಂಡಿಯಾ ಮಹಾರಾಜಸ್ ತಂಡ ಮತ್ತು ರೆಸ್ಟ್ ಆಫ್ ದಿ ವರ್ಲ್ಡ್ ತಂಡದ ನಡುವೆ ನಡೆಯಲಿದ್ದು, ಈ ಪಂದ್ಯದಲ್ಲಿ 10 ದೇಶಗಳ ಆಟಗಾರರು ಭಾಗವಹಿಸಲಿದ್ದಾರೆ. ಈ ಮಹತ್ವದ ಪಂದ್ಯದ ಬಳಿಕ ಮರುದಿನದಿಂದ ಲೆಜೆಂಡ್ಸ್ ಲೀಗ್ ಆರಂಭವಾಗಲಿದ್ದು, ಇದರಲ್ಲಿ 4 ತಂಡಗಳು ಆಡಲಿವೆ. ಇದು ಲೀಗ್‌ನ ಎರಡನೇ ಸೀಸನ್ ಆಗಿದ್ದು, ಇದರಲ್ಲಿ 15 ಪಂದ್ಯಗಳು ನಡೆಯಲಿವೆ.

ಪಂದ್ಯಕ್ಕೆ ಸೌರವ್ ಗಂಗೂಲಿ ತಂಡ ಹೀಗಿದೆ

ಇಂಡಿಯಾ ಮಹಾರಾಜಸ್ ತಂಡದಲ್ಲಿ ಈ ಹಿಂದೆ ಟೀಂ ಇಂಡಿಯಾವನ್ನು ಆಳಿದ್ದ ಭಾರತದ ಮಾಜಿ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ತಂಡದ ನಾಯಕತ್ವವನ್ನು ಬಂಗಾಳದ ಹುಲಿ ಖ್ಯಾತಿಯ ಸೌರವ್ ಗಂಗೂಲಿ ವಹಿಸಿಕೊಳ್ಳಲಿದ್ದಾರೆ.

ಸೌರವ್ ಗಂಗೂಲಿ (ನಾಯಕ), ವೀರೇಂದ್ರ ಸೆಹ್ವಾಗ್, ಮೊಹಮ್ಮದ್ ಕೈಫ್, ಎ. ಬದ್ರಿನಾಥ್, ಪ್ರಗ್ಯಾನ್ ಓಜಾ, ಪಾರ್ಥಿವ್ ಪಟೇಲ್, ಯೂಸುಫ್ ಪಠಾಣ್, ಹರ್ಭಜನ್ ಸಿಂಗ್, ನಮನ್ ಓಜಾ, ಅಶೋಕ್ ದಿಂಡಾ, ಆರ್‌ಪಿ ಸಿಂಗ್, ಅಜಯ್ ಜಡೇಜಾ, ಜೋಗಿಂದರ್ ಶರ್ಮಾ, ರಿತೀಂದರ್ ಸಿಂಗ್ ಸೋಧಿ ಮತ್ತು ಇರ್ಫಾನ್ ಪಠಾಣ್

ರೆಸ್ಟ್ ಆಫ್ ದಿ ವರ್ಲ್ಡ್ ತಂಡ ಹೀಗಿರಲಿದೆ

ರೆಸ್ಟ್ ಆಫ್ ದಿ ವರ್ಲ್ಡ್ ತಂಡದ ನಾಯಕತ್ವ ಇಂಗ್ಲೆಂಡ್​ನ ಮಾಜಿ ನಾಯಕ ಇಯಾನ್ ಮಾರ್ಗನ್ ಕೈಯಲ್ಲಿರಲಿದ್ದು, ಉಳಿದಂತೆ ತಂಡದಲ್ಲಿರುವ ಆಟಗಾರರ ವಿವರ ಈ ಕೆಳಗಿನಂತಿದೆ.

ಇಯಾನ್ ಮಾರ್ಗನ್ (ನಾಯಕ), ಹರ್ಷಲ್ ಗಿಬ್ಸ್, ಸನತ್ ಜಯಸೂರ್ಯ, ಮ್ಯಾಟ್ ಪ್ರಯರ್, ಲೆಂಡ್ಲ್ ಸಿಮನ್ಸ್, ಜಾಕ್ವೆಸ್ ಕಾಲಿಸ್, ನಾಥನ್ ಮೆಕಲಮ್, ಜಾಂಟಿ ರೋಡ್ಸ್, ಮಶ್ರಫೆ ಮೊರ್ತಜಾ, ಅಸ್ಗರ್ ಅಫ್ಘಾನ್, ಮುತ್ತಯ್ಯ ಮುರಳೀಧರನ್, ಡೇಲ್ ಸ್ಟೇಯ್ನ್, ಹ್ಯಾಮಿಲ್ಟನ್ ಒ ಬ್ರೆಟ್ಟಾಬ್ಜಾ, ದಿನೇಶ್ ರಾಮ್ದಿನ್, ಮಿಚೆಲ್ ಜಾನ್ಸನ್.

ಈ ವರ್ಷ ನಾವು ಲೀಗ್ ಅನ್ನು ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವಕ್ಕೆ ಸಮರ್ಪಿಸುತ್ತಿದ್ದೇವೆ ಎಂದು ತಿಳಿಸಲು ಹೆಮ್ಮೆಪಡುತ್ತೇನೆ ಎಂದು ಲೀಗ್‌ನ ಕಮಿಷನರ್ ರವಿಶಾಸ್ತ್ರಿ ಹೇಳಿದ್ದಾರೆ.

Published On - 2:33 pm, Fri, 12 August 22

Follow Us
TV9 Web
TV9 Web

TV9 Kannada

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ