ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!

Sunil Gavaskar: ಒಂದು ಕ್ರೀಡಾಂಗಣಕ್ಕೆ ಇಡುತ್ತಿರುವುದು ನನಗೆ ತುಂಬಾ ಸಂತೋಷ ಮತ್ತು ಗೌರವವಾಗಿದೆ. ಲೀಸೆಸ್ಟರ್ ಪ್ರಬಲ ಕ್ರೀಡಾ ಅಭಿಮಾನಿಗಳನ್ನು ಹೊಂದಿರುವ ನಗರವಾಗಿದೆ.

ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 23, 2022 | 10:25 AM

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ 73ರ ಹರೆಯದ ಸುನಿಲ್ ಗವಾಸ್ಕರ್ ವಿಶ್ವ ಕ್ರಿಕೆಟ್‌ನಲ್ಲಿ ಚಿರಪರಿಚಿತ ವ್ಯಕ್ತಿ. ಟೆಸ್ಟ್ ಕ್ರಿಕೆಟ್‌ನಲ್ಲಿ 10,000 ರನ್ ಗಳಿಸಿದ ಮೊದಲ ಆಟಗಾರ ಎಂಬ ದಾಖಲೆ ಲಿಟ್ಲ್​ ಮಾಸ್ಟರ್ ಗವಾಸ್ಕರ್ ಹೆಸರಿನಲ್ಲಿದೆ. ಇದಲ್ಲದೇ ಇಂತಹ ಹಲವು ದಾಖಲೆಗಳು ಅವರ ಹೆಸರಿನಲ್ಲಿದ್ದು, ಹೀಗಾಗಿಯೇ ಕ್ರಿಕೆಟ್ ಜಗತ್ತು ಇಂದಿಗೂ ಅವರ ಬಗ್ಗೆ ಹೆಮ್ಮೆ ಪಡುತ್ತಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತೀಯ ದಂತಕಥೆಯ ಈ ಸಾಧನೆಯನ್ನು ಗಮನದಲ್ಲಿಟ್ಟುಕೊಂಡು, ಇಂಗ್ಲೆಂಡ್​ನ ಲೀಸೆಸ್ಟರ್ ಕ್ರಿಕೆಟ್ ಕ್ಲಬ್ ಸುನಿಲ್ ಗವಾಸ್ಕರ್ ಅವರಿಗೆ ವಿಶೇಷ ಗೌರವ ಸಲ್ಲಿಸಲು ಮುಂದಾಗಿದೆ. ಅದು ಅಂತಿಂಥ ಗೌರವವಲ್ಲ, ಬದಲಾಗಿ ಲೀಸೆಸ್ಟರ್​ ಕ್ಲಬ್ ತನ್ನ ಸ್ಟೇಡಿಯಂಗೆ ಗವಾಸ್ಕರ್ ಹೆಸರಿಡಲಿದ್ದಾರೆ. ಇಂಗ್ಲೆಂಡಿನ ಇತಿಹಾಸದಲ್ಲಿ ಭಾರತೀಯ ಕ್ರಿಕೆಟಿಗರೊಬ್ಬರ ಹೆಸರನ್ನು ಕ್ರೀಡಾಂಗಣಕ್ಕೆ ಇಡುತ್ತಿರುವುದು ಇದೇ ಮೊದಲು.

ಲೀಸೆಸ್ಟರ್ ಸ್ಟೇಡಿಯಂಗೆ ಗವಾಸ್ಕರ್ ಹೆಸರಿಡುವ ಅಭಿಯಾನ ಆರಂಭಿಸಿದ್ದು, ಭಾರತೀಯ ಮೂಲದ ಇಂಗ್ಲೆಂಡ್​​ನ ಸಂಸತ್ತು ಸದಸ್ಯ ರಾಹೆ ಕೀತ್ ವಾಜ್. ಇವರು ಸುದೀರ್ಘ ಕಾಲದಿಂದಲೂ ಸಂಸದರಾಗಿ ಲೀಸೆಸ್ಟರ್ ಅನ್ನು ಪ್ರತಿನಿಧಿಸುತ್ತಿದ್ದಾರೆ. ಇದೀಗ ಲೀಸೆಸ್ಟರ್ ಭಾರತದ ಕ್ರಿಕೆಟ್​ ದಂತಕಥೆಗೆ ಗೌರವ ಸೂಚಿಸಲು ಕ್ರೀಡಾಂಗಣದ ಹೆಸರನ್ನೇ ಬದಲಿಸಲು ಮುಂದಾಗಿದೆ.

ಇನ್ನು ಇಂಗ್ಲೆಂಡ್‌ನಲ್ಲಿ ಸಿಕ್ಕಿರುವ ಈ ವಿಶೇಷ ಗೌರವದಿಂದ ಗವಾಸ್ಕರ್ ಕೂಡ ತುಂಬಾ ಸಂತೋಷಗೊಂಡಿದ್ದಾರೆ. ಲೀಸೆಸ್ಟರ್‌ನಲ್ಲಿ ನನ್ನ ಹೆಸರನ್ನು ಒಂದು ಕ್ರೀಡಾಂಗಣಕ್ಕೆ ಇಡುತ್ತಿರುವುದು ನನಗೆ ತುಂಬಾ ಸಂತೋಷ ಮತ್ತು ಗೌರವವಾಗಿದೆ. ಲೀಸೆಸ್ಟರ್ ಪ್ರಬಲ ಕ್ರೀಡಾ ಅಭಿಮಾನಿಗಳನ್ನು ಹೊಂದಿರುವ ನಗರವಾಗಿದೆ. ವಿಶೇಷವಾಗಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಿದ್ದಾರೆ. ಹಾಗಾಗಿ ಇದು ನಿಜಕ್ಕೂ ದೊಡ್ಡ ಗೌರವ ಎಂದು ಲಿಟ್ಲ್ ಮಾಸ್ಟರ್ ಹೇಳಿದ್ದಾರೆ.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ವಿಶೇಷ ಎಂದರೆ ಸುನಿಲ್ ಗವಾಸ್ಕರ್ ಹೆಸರನ್ನು ವಿದೇಶಗಳ ಕ್ರೀಡಾಂಗಣಕ್ಕೆ ಇಡುತ್ತಿರುವುದು ಇದೇ ಮೊದಲ ಬಾರಿಯಲ್ಲ. ಇದಕ್ಕೂ ಮುಂಚೆಯೇ ಅಮೇರಿಕದ ಕೆಂಟುಕಿ ಮತ್ತು ತಾಂಜಾನಿಯಾದ ಜಾನ್ಸಿಬಾರ್‌ನಲ್ಲಿ ಕ್ರೀಡಾಂಗಣಗಳಿಗೆ ಅವರ ಹೆಸರನ್ನು ಇಡಲಾಗಿದೆ.

ಟೆಸ್ಟ್ ಕ್ರಿಕೆಟ್​ನ ಕಿಂಗ್: ಕ್ರಿಕೆಟ್ ಲೋಕದಲ್ಲಿ ಲಿಟ್ಲ್ ಮಾಸ್ಟರ್ ಎಂದೇ ಖ್ಯಾತರಾದ ಸುನಿಲ್ ಗವಾಸ್ಕರ್ ಅವರು ಮಾರ್ಚ್ 7, 1987 ರಂದು ಟೆಸ್ಟ್ ಕ್ರಿಕೆಟ್‌ನಲ್ಲಿ 10,000 ರನ್ ಗಳಿಸಿದ ದಾಖಲೆ ಬರೆದಿದ್ದರು. ಈ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಇದಾದ ಬಳಿಕವಷ್ಟೇ ಸಚಿನ್ ತೆಂಡೂಲ್ಕರ್, ರಿಕಿ ಪಾಂಟಿಂಗ್, ಜಾಕ್ವೆಸ್ ಕಾಲಿಸ್ ಮತ್ತು ಬ್ರಿಯಾನ್ ಲಾರಾ ಸೇರಿದಂತೆ ಅನೇಕ ಬ್ಯಾಟ್ಸ್‌ಮನ್‌ಗಳು ಈ ರನ್‌ಗಳ ಶಿಖರವನ್ನು ಮುಟ್ಟಿರುವುದು.

ಹೀಗಾಗಿಯೇ ಟೆಸ್ಟ್ ಕ್ರಿಕೆಟ್​​ನ ದಾಖಲೆಗಳ ಬಗ್ಗೆ ಚರ್ಚೆಗಳು ಬಂದಾಗೆಲ್ಲ ಸುನಿಲ್ ಗವಾಸ್ಕರ್ ಹೆಸರು ಕೂಡ ಕಾಣಿಸುತ್ತದೆ. ಇದೀಗ ಈ ಸಾಧನೆಯನ್ನು ಅಚ್ಚಾಗಿ ಉಳಿಸಲು ಲೀಸೆಸ್ಟರ್ ಕ್ರಿಕೆಟ್ ಕ್ಲಬ್ ಮುಂದಾಗಿದೆ. ಅಂದಹಾಗೆ ಇಂಗ್ಲೆಂಡ್​ನ ಕ್ರಿಕೆಟ್​ ಸ್ಟೇಡಿಯಂಗೆ ಭಾರತೀಯ ಆಟಗಾರನ ಹೆಸರು ಇಡುತ್ತಿರುವುದು ಇದೇ ಮೊದಲ ಬಾರಿಗೆ ಎಂಬುದು ಇಲ್ಲಿ ವಿಶೇಷ.

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ