AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಹಾನ್ ವಿಸ್ಫೋಟಕ ಸೆಂಚುರಿ: ಕ್ರಿಸ್ ಗೇಲ್ 175 ರನ್​ಗಳ ವಿಶ್ವ ದಾಖಲೆ ಧೂಳೀಪಟ!

ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಟಿ20 ಚಾಲೆಂಜ್ ಪಂದ್ಯದಲ್ಲಿ ಲುಹಾನ್-ಡ್ರೆ ಪ್ರಿಟೋರಿಯಸ್ ಸಿಡಿಲಬ್ಬರ ಸೆಂಚುರಿ ಸಿಡಿಸಿದ್ದಾರೆ. ಈ ಸ್ಫೋಟಕ ಶತಕದೊಂದಿಗೆ 20 ವರ್ಷದ ಲುಹಾನ್ 13 ವರ್ಷಗಳ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಬರೆದಿದ್ದ ವಿಶ್ವ ದಾಖಲೆಯನ್ನು ಅಳಿಸಿಹಾಕಿದ್ದಾರೆ.

ಲುಹಾನ್ ವಿಸ್ಫೋಟಕ ಸೆಂಚುರಿ: ಕ್ರಿಸ್ ಗೇಲ್ 175 ರನ್​ಗಳ ವಿಶ್ವ ದಾಖಲೆ ಧೂಳೀಪಟ!
Lhuan Dre Pretorius Image Credit source: GettyImages
ಝಾಹಿರ್ ಯೂಸುಫ್
|

Updated on:Oct 03, 2026 | 8:24 AM

Share

ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದು ಮತ್ಯಾರೂ ಅಲ್ಲ, ಸೌತ್ ಆಫ್ರಿಕಾದ ಯುವ ದಾಂಡಿಗ ಲುಹಾನ್-ಡ್ರೆ ಪ್ರಿಟೋರಿಯಸ್. ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ 175 ರನ್​ಗಳ ವಿಶ್ವ ದಾಖಲೆ ಧೂಳೀಪಟವಾಗಿದೆ.

ಬ್ಲೂಮ್‌ಫಾಂಟೈನ್‌ನಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಚಾಲೆಂಜ್ ಪಂದ್ಯದಲ್ಲಿ ಟೈಟಾನ್ಸ್ ಪರ ಕಣಕ್ಕಿಳಿದ ಲುಹಾನ್-ಡ್ರೆ ಪ್ರಿಟೋರಿಯಸ್ ನೈಟ್​ ವಿರುದ್ಧ ವಿಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೈಟಾನ್ಸ್ ತಂಡದ ನಾಯಕ ಡೊನೊವನ್ ಫೆರೇರಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡದಿ ಟೈಟಾನ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಲುಹಾನ್-ಡ್ರೆ ಪ್ರಿಟೋರಿಯಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ನೈಟ್ಸ್ ತಂಡದ ಬೌಲರ್​ಗಳ ಬೆಂಡೆತ್ತಿದ ಲುಹಾನ್ ಮೈದಾನ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದರು.

ಪರಿಣಾಮ ಲುಹಾನ್-ಡ್ರೆ ಪ್ರಿಟೋರಿಯಸ್ ಬ್ಯಾಟ್​ನಿಂದ ಕೇವಲ 40 ಎಸೆತಗಳಲ್ಲಿ ಶತಕ ಮೂಡಿಬಂತು. ಸೆಂಚುರಿ ಬಳಿಕ ಕೂಡ ಆರ್ಭಟ ಮುಂದುವರೆಸಿದ ಯುವ ದಾಂಡಿಗ ಸಿಕ್ಸರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 79 ಎಸೆತಗಳಲ್ಲಿ 13 ಭರ್ಜರಿ ಸಿಕ್ಸರ್ ಹಾಗೂ 15 ಫೋರ್​ಗಳೊಂದಿಗೆ ಅಜೇಯ 188 ರನ್​ ಬಾರಿಸಿದರು.

ಹೊಸ ವಿಶ್ವ ದಾಖಲೆ:

ಈ 188 ರನ್​ಗಳ ಅಮೋಘ ಇನಿಂಗ್ಸ್​ನೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ವೈಯುಕ್ತಿಕ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಲುಹಾನ್-ಡ್ರೆ ಪ್ರಿಟೋರಿಯಸ್ ಪಾಲಾಯಿತು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

  • 2013ರ ಐಪಿಎಲ್ ಪಂದ್ಯದಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಕ್ರಿಸ್ ಗೇಲ್ ಅಜೇಯ 175 ರನ್ ಬಾರಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ವೈಯುಕ್ತಿಕ ಸ್ಕೋರ್​ಗಳಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು.
  • ಬರೋಬ್ಬರಿ 13 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ 20 ವರ್ಷದ ಯುವ ದಾಂಡಿಗ ಲುಹಾನ್-ಡ್ರೆ ಪ್ರಿಟೋರಿಯಸ್ ಯಶಸ್ವಿಯಾಗಿದ್ದಾರೆ.

ಕೇವಲ 79 ಎಸೆತಗಳಲ್ಲಿ ಬರೋಬ್ಬರಿ 188 ರನ್​ಗಳಿಸುವ ಮೂಲಕ ಲುಹಾನ್-ಡ್ರೆ ಪ್ರಿಟೋರಿಯಸ್ ಟಿ20 ಇತಿಹಾಸದಲ್ಲೇ ಗರಿಷ್ಠ ವೈಯುಕ್ತಿಕ ಸ್ಕೋರ್​ಗಳಿಸಿದ ಬ್ಯಾಟರ್ ಎಂಬ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ‘ಟೀಮ್’ ಇಂಡಿಯಾಗೆ ಇಂದು 4 ಪಂದ್ಯಗಳು..!

267 ರನ್​, 124 ರನ್​ಗಳ ಜಯ:

ಈ ಪಂದ್ಯದಲ್ಲಿ ಲುಹಾನ್-ಡ್ರೆ ಪ್ರಿಟೋರಿಯಸ್ ಬಾರಿಸಿದ ಅಜೇಯ 188 ರನ್​ಗಳ ಅಮೋಘ ಇನಿಂಗ್ಸ್​ನ ನೆರವಿನೊಂದಿಗೆ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 267 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನೈಟ್ಸ್ ತಂಡವು 143 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೈಟಾನ್ಸ್ ತಂಡವು 124 ರನ್​ಗಳ ಭರ್ಜರಿ ಜಯ ಸಾಧಿಸಿದೆ.

Published On - 8:23 am, Sat, 3 October 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್