
ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದು ಮತ್ಯಾರೂ ಅಲ್ಲ, ಸೌತ್ ಆಫ್ರಿಕಾದ ಯುವ ದಾಂಡಿಗ ಲುಹಾನ್-ಡ್ರೆ ಪ್ರಿಟೋರಿಯಸ್. ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ 175 ರನ್ಗಳ ವಿಶ್ವ ದಾಖಲೆ ಧೂಳೀಪಟವಾಗಿದೆ.
ಬ್ಲೂಮ್‌ಫಾಂಟೈನ್‌ನಲ್ಲಿ ನಡೆದ ಸೌತ್ ಆಫ್ರಿಕಾ ಟಿ20 ಚಾಲೆಂಜ್ ಪಂದ್ಯದಲ್ಲಿ ಟೈಟಾನ್ಸ್ ಪರ ಕಣಕ್ಕಿಳಿದ ಲುಹಾನ್-ಡ್ರೆ ಪ್ರಿಟೋರಿಯಸ್ ನೈಟ್ ವಿರುದ್ಧ ವಿಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೈಟಾನ್ಸ್ ತಂಡದ ನಾಯಕ ಡೊನೊವನ್ ಫೆರೇರಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡದಿ ಟೈಟಾನ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಲುಹಾನ್-ಡ್ರೆ ಪ್ರಿಟೋರಿಯಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್ನಿಂದಲೇ ನೈಟ್ಸ್ ತಂಡದ ಬೌಲರ್ಗಳ ಬೆಂಡೆತ್ತಿದ ಲುಹಾನ್ ಮೈದಾನ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದರು.
ಪರಿಣಾಮ ಲುಹಾನ್-ಡ್ರೆ ಪ್ರಿಟೋರಿಯಸ್ ಬ್ಯಾಟ್ನಿಂದ ಕೇವಲ 40 ಎಸೆತಗಳಲ್ಲಿ ಶತಕ ಮೂಡಿಬಂತು. ಸೆಂಚುರಿ ಬಳಿಕ ಕೂಡ ಆರ್ಭಟ ಮುಂದುವರೆಸಿದ ಯುವ ದಾಂಡಿಗ ಸಿಕ್ಸರ್ಗಳ ಸುರಿಮಳೆಗೈದರು. ಈ ಮೂಲಕ ಕೇವಲ 79 ಎಸೆತಗಳಲ್ಲಿ 13 ಭರ್ಜರಿ ಸಿಕ್ಸರ್ ಹಾಗೂ 15 ಫೋರ್ಗಳೊಂದಿಗೆ ಅಜೇಯ 188 ರನ್ ಬಾರಿಸಿದರು.
ಈ 188 ರನ್ಗಳ ಅಮೋಘ ಇನಿಂಗ್ಸ್ನೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ವೈಯುಕ್ತಿಕ ಸ್ಕೋರ್ಗಳಿಸಿದ ವಿಶ್ವ ದಾಖಲೆ ಲುಹಾನ್-ಡ್ರೆ ಪ್ರಿಟೋರಿಯಸ್ ಪಾಲಾಯಿತು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.
ಕೇವಲ 79 ಎಸೆತಗಳಲ್ಲಿ ಬರೋಬ್ಬರಿ 188 ರನ್ಗಳಿಸುವ ಮೂಲಕ ಲುಹಾನ್-ಡ್ರೆ ಪ್ರಿಟೋರಿಯಸ್ ಟಿ20 ಇತಿಹಾಸದಲ್ಲೇ ಗರಿಷ್ಠ ವೈಯುಕ್ತಿಕ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
ಇದನ್ನೂ ಓದಿ: ‘ಟೀಮ್’ ಇಂಡಿಯಾಗೆ ಇಂದು 4 ಪಂದ್ಯಗಳು..!
ಈ ಪಂದ್ಯದಲ್ಲಿ ಲುಹಾನ್-ಡ್ರೆ ಪ್ರಿಟೋರಿಯಸ್ ಬಾರಿಸಿದ ಅಜೇಯ 188 ರನ್ಗಳ ಅಮೋಘ ಇನಿಂಗ್ಸ್ನ ನೆರವಿನೊಂದಿಗೆ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 267 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನೈಟ್ಸ್ ತಂಡವು 143 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೈಟಾನ್ಸ್ ತಂಡವು 124 ರನ್ಗಳ ಭರ್ಜರಿ ಜಯ ಸಾಧಿಸಿದೆ.
Published On - 8:23 am, Sat, 3 October 26