Liam Livingstone: 10 ಎಸೆತಗಳಲ್ಲಿ 50 ರನ್​: ಅಬ್ಬರಿಸಿದ ಲಿಯಾಮ್ ಲಿವಿಂಗ್​ಸ್ಟೋನ್

T20 Blast: ಬೃಹತ್ ಟಾರ್ಗೆಟ್ ಬೆನ್ನತ್ತಿದ ಡರ್ಬಿಶೈರ್ ಪರ ಲೂಯಿಸ್ ರೀಸ್ ಅಬ್ಬರಿಸಿದರು. ಆರಂಭಿಕನಾಗಿ ಕಣಕ್ಕಿಳಿದ ರೀಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 36 ಎಸೆತಗಳಲ್ಲಿ 55 ರನ್ ಬಾರಿಸಿದರು.

Liam Livingstone: 10 ಎಸೆತಗಳಲ್ಲಿ 50 ರನ್​: ಅಬ್ಬರಿಸಿದ ಲಿಯಾಮ್ ಲಿವಿಂಗ್​ಸ್ಟೋನ್
Liam Livingstone
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 02, 2022 | 1:10 PM

T20 Blast: ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ವಿಟಾಲಿಟಿ ಟಿ20 ಬ್ಲಾಸ್ಟ್​ನಲ್ಲಿ ನಡೆದ ಡರ್ಬಿಶೈರ್ ಹಾಗೂ ಲಂಕಾಶೈರ್ ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾಶೈರ್ ತಂಡವು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಲಂಕಾಶೈರ್ ಆರಂಭಿಕರಾದ ಜೆನ್ನಿಂಗ್ಸ್ ಹಾಗೂ ಸಾಲ್ಟ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ವಿಕೆಟ್​ಗೆ 45 ರನ್​ಗಳ ಜೊತೆಯಾಟವಾಡಿ ಈ ಜೋಡಿ ನಿರ್ಗಮಿಸುತ್ತಿದ್ದಂತೆ ಕ್ರೀಸ್​ಗೆ ಎಂಟ್ರಿ ಕೊಟ್ಟಿದ್ದು ಲಿಯಾಮ್ ಲಿವಿಂಗ್​ಸ್ಟೋನ್ (Liam Livingstone).

ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಅಬ್ಬರಿಸಿ ಬೊಬ್ಬರಿದಿದ್ದ ಲಿವಿಂಗ್​ಸ್ಟೋನ್ ತಮ್ಮ ಅದ್ಭುತ ಫಾರ್ಮ್​ನ್ನು ಟಿ20 ಬ್ಲಾಸ್ಟ್​ ಲೀಗ್​ನಲ್ಲೂ ಮುಂದುವರೆಸಿದ್ದಾರೆ. ಆರಂಭದಿಂದಲೇ ಡರ್ಬಿಶೈರ್​ ಬೌಲರ್​ಗಳ ಬೆಂಡೆತ್ತಿದ ಲಿವಿಂಗ್​ಸ್ಟೋನ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಹಾಫ್​ ಸೆಂಚುರಿ ಬೆನ್ನಲ್ಲೇ ಬ್ಯಾಟಿಂಗ್ ಅಬ್ಬರ ಮುಂದುವರೆಸಿದ ಲಿವಿಂಗ್​ಸ್ಟೋನ್ 5 ಸಿಕ್ಸ್ ಹಾಗೂ 5 ಫೋರ್​ಗಳನ್ನು ಬಾರಿಸಿದ್ದರು. ಪರಿಣಾಮ 40 ಎಸೆತಗಳಲ್ಲಿ ವೈಯುಕ್ತಿಕ ಮೊತ್ತ 75ಕ್ಕೆ ಬಂದು ನಿಂತಿತು. ವಿಶೇಷ ಎಂದರೆ ಸಿಕ್ಸ್​, ಫೋರ್​ಗಳ ಮೂಲಕವೇ ಲಿವಿಂಗ್​ಸ್ಟೋನ್ ಕೇವಲ 10 ಎಸೆತಗಳಲ್ಲಿ 50 ರನ್​ ಕಲೆಹಾಕಿದ್ದರು. ಈ ಹಂತದಲ್ಲಿ ಲಿವಿಂಗ್​ಸ್ಟೋನ್ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್​ ಅನ್ನು ತಡೆಯಲು ಕೊನೆಗೂ ಹೇಡನ್ ಕೇರ್ ಯಶಸ್ವಿಯಾದರು. ಅದರಂತೆ ಬಿರುಸಿನ 75 ರನ್​ಗಳಿಸಿ ಲಿವಿಂಗ್​ಸ್ಟೋನ್ ಔಟಾದರು. ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಲಂಕಾಶೈರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್​ ಕಲೆಹಾಕಿತು.

220 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಡರ್ಬಿಶೈರ್ ಪರ ಲೂಯಿಸ್ ರೀಸ್ ಅಬ್ಬರಿಸಿದರು. ಆರಂಭಿಕನಾಗಿ ಕಣಕ್ಕಿಳಿದ ರೀಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 36 ಎಸೆತಗಳಲ್ಲಿ 55 ರನ್ ಬಾರಿಸಿದರು. ಆ ಬಳಿಕ ಬಂದ ಡುಪೊಲಿ ಕೂಡ ಸ್ಪೋಟಕ ಇನಿಂಗ್ಸ್ ಆಡಿದರು. 3 ಸಿಕ್ಸ್ ಹಾಗೂ 3 ಫೋರ್​ಗಳನ್ನು ಒಳಗೊಂಡಂತೆ ಕೇವಲ 31 ಎಸೆತಗಳಲ್ಲಿ 59 ರನ್​ ಬಾರಿಸಿದ ಡುಪೊಲಿ ತಂಡವನ್ನು ಜಯದತ್ತ ಕೊಂಡೊಯ್ದರು.

ಆದರೆ ಅಂತಿಮ ಹಂತದಲ್ಲಿ ಲಂಕಾಶೈರ್ ಅತ್ಯುತ್ತಮ ಬೌಲಿಂಗ್ ಮೂಲಕ ಡರ್ಬಿಶೈರ್ ತಂಡವನ್ನು 202 ರನ್​ಗೆ ನಿಯಂತ್ರಿಸಿದರು. ಪರಿಣಾಮ ಲಂಕಾಶೈರ್ ತಂಡವು 17 ರನ್​ಗಳಿಂದ ಜಯ ಸಾಧಿಸಿತು.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!