Shardul Thakur: ಹೌದು, ನನಗೆ ನಿರಾಸೆಯಾಗಿದ್ದು ನಿಜ: ಅವಕಾಶ ಸಿಗದಿದ್ದ ಬಗ್ಗೆ ಮೌನ ಮುರಿದ ಶಾರ್ದೂಲ್
T20 World Cup team Shardul Thakur: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ , ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (WK), ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ.

T20 ವಿಶ್ವಕಪ್ (T20 World Cup 2021) ಭಾರತ ತಂಡ (Team India) ಘೋಷಣೆಯಾಗಿ ವಾರಗಳೇ ಕಳೆದರೂ ಟೀಮ್ ಇಂಡಿಯಾ ಕುರಿತು ಚರ್ಚೆಗಳು ಮುಂದುವರೆದಿದೆ. ಕೆಲ ಆಟಗಾರರು ಅವಕಾಶ ವಂಚಿತರಾಗಿದ್ದು ಚರ್ಚೆಗೀಡಾದರೆ, ಇನ್ನು ಕೆಲವರು ಟಾಪ್-15ನಲ್ಲಿ ಸ್ಥಾನ ಪಡೆದು ಅಚ್ಚರಿ ಮೂಡಿಸಿದ್ದರು. ಇದೀಗ 15 ಸದಸ್ಯರ ಬಳಗದಿಂದ ಅವಕಾಶ ವಂಚಿತರಾಗಿರುವ ಬಗ್ಗೆ ಟೀಮ್ ಇಂಡಿಯಾ ಆಲ್ರೌಂಡರ್ ಶಾರ್ದೂಲ್ ಠಾಕೂರ್ (Shardul Thakur) ಮೌನ ಮುರಿದಿದ್ದಾರೆ. ತಂಡದಲ್ಲಿ ಚಾನ್ಸ್ ಸಿಗದಿರುವ ಬಗ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶಾರ್ದೂಲ್ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ಪಡೆಯುವ ವಿಶ್ವಾಸದಲ್ಲಿದ್ದರು. ಆದರೆ ತಂಡದಲ್ಲಿ ಶಾರ್ದೂಲ್ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು.
ಈ ಬಗ್ಗೆ ಮಾತನಾಡಿರುವ ಶಾರ್ದೂಲ್ ಠಾಕೂರ್, ಹೌದು, ಟಿ20 ವಿಶ್ವಕಪ್ ತಂಡದಲ್ಲಿ ಆಯ್ಕೆಯಾಗದಿರುವುದಕ್ಕೆ ನನಗೆ ಸ್ವಲ್ಪ ನಿರಾಶೆಯಾಗಿದೆ. ದೇಶಕ್ಕಾಗಿ ಆಡುವುದು ಮತ್ತು ವಿಶ್ವಕಪ್ ಗೆಲ್ಲುವುದು ಪ್ರತಿಯೊಬ್ಬ ಆಟಗಾರನ ಕನಸಾಗಿದೆ. ನಾನು ಕಳೆದ ಎರಡು ವರ್ಷಗಳಿಂದ ಸೀಮಿತ ಓವರ್ ಕ್ರಿಕೆಟ್ನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇನೆ. ಹೀಗಾಗಿ ನಾನು ವಿಶ್ವಕಪ್ ತಂಡ ಭಾಗವಾಗಲಿದ್ದೇನೆ ಎಂದು ಭಾವಿಸಿದ್ದೆ ಎಂದು ಶಾರ್ದೂಲ್ ಠಾಕೂರ್ ತಿಳಿಸಿದರು.
ಇದೇ ವೇಳೆ ಮೀಸಲು ಆಟಗಾರನಾಗಿ ಆಯ್ಕೆಯಾಗಿರುವುದನ್ನು ಪ್ರಸ್ತಾಪಿಸಿದ ಶಾರ್ದೂಲ್, 18 ಸದಸ್ಯರ ಬಳಗದಲ್ಲಿ ಅವಕಾಶ ಸಿಕ್ಕಿದೆ. ನನಗೆ ಯಾವುದೇ ಕ್ಷಣದಲ್ಲೂ ಬೇಕಿದ್ದರೂ ತಂಡಕ್ಕೆ ಕರೆ ಬರಬಹುದು. ಹೀಗಾಗಿ ಎಲ್ಲದಕ್ಕೂ ನಾನು ಸಿದ್ಧನಾಗಿರಬೇಕು ಎಂದಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ವೇಳೆ 15ರ ಬಳಗದಲ್ಲಿ ಮತ್ತೆ ಅವಕಾಶ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಶಾರ್ದೂಲ್.
ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆದ ಆಸೀಸ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಶಾರ್ದೂಲ್ ಠಾಕೂರ್ 67 ರನ್ ಬಾರಿಸಿ ತಂಡಕ್ಕೆ ಮಹತ್ವದ ಕಾಣಿಕೆ ನೀಡಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ಓವಲ್‌ನಲ್ಲಿ ನಡೆದಿದ್ದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ 36 ಎಸೆತಗಳಲ್ಲಿ 57 ರನ್, ದ್ವಿತೀಯ ಇನ್ನಿಂಗ್ಸ್‌ನಲ್ಲಿ 72 ಎಸೆತಗಳಿಗೆ 60 ರನ್ ಬಾರಿಸಿ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಶಾರ್ದೂಲ್ ಠಾಕೂರ್ ಅವರ ಆಲ್ರೌಂಡರ್ ಪ್ರದರ್ಶನದಿಂದಾಗಿ ಟೀಮ್ ಇಂಡಿಯಾ ಓವಲ್ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿಯೇ ಶಾರ್ದೂಲ್ ಟಿ20 ವಿಶ್ವಕಪ್ಗೆ ಆಯ್ಕೆಯಾಗುವ ಭರವಸೆ ಹೊಂದಿದ್ದರು.
ಸದ್ಯ ಐಪಿಎಲ್ನ ದ್ವಿತಿಯಾರ್ಧಕ್ಕಾಗಿ ಶಾರ್ದೂಲ್ ಠಾಕೂರ್ ಯುಎಇನಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಐಪಿಎಲ್ 2021 ರ ಎರಡನೇ ಹಂತದಲ್ಲಿ ಸಿಎಸ್ಕೆ ಪರ ಶಾರ್ದೂಲ್ ಕಣಕ್ಕಿಳಿಯಲಿದ್ದಾರೆ. ಐಪಿಎಲ್ ಮುಗಿದ ತಕ್ಷಣ ಟಿ20 ವಿಶ್ವಕಪ್ ಶುರುವಾಗಲಿದೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಟಿ20 ವಿಶ್ವಕಪ್ ತಂಡಕ್ಕೆ ಸೇರಲು ಉತ್ತಮ ಅವಕಾಶವಿದೆ. ಹೀಗಾಗಿ ಐಪಿಎಲ್ನ ಮುಂದಿನ 7 ಪಂದ್ಯಗಳು ಬಹುತೇಕ ಭಾರತೀಯ ಆಟಗಾರರಿಗೆ ಮಹತ್ವದ್ದಾಗಿ ಪರಿಣಮಿಸಿದೆ.
ಟಿ20 ವಿಶ್ವಕಪ್ಗೆ ಟೀಮ್ ಇಂಡಿಯಾ ಹೀಗಿದೆ – ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ , ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (WK), ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ
ಮೀಸಲು ಆಟಗಾರರ ಆಟಗಾರರು – ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್.
ಇದನ್ನೂ ಓದಿ: IPL 2021: ಪ್ಲೇ ಆಫ್ ಪ್ರವೇಶಿಸಲು ದ್ವಿತಿಯಾರ್ಧದಲ್ಲಿ ಪ್ರತಿ ತಂಡಗಳು ಎಷ್ಟು ಪಂದ್ಯ ಗೆಲ್ಲಬೇಕು?
ಇದನ್ನೂ ಓದಿ: IPL 2021: ಐಪಿಎಲ್‌ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಭಾಗ್ಯ ಕೊಹ್ಲಿ, ಗೇಲ್, ಎಬಿಡಿಗೆ ಇನ್ನೂ ಸಿಕ್ಕಿಲ್ಲ
ಇದನ್ನೂ ಓದಿ: Crime News: ಅಕ್ಕನಿಗೆ ಯುವಕನೊಂದಿಗೆ ಸಂಬಂಧ: ಕಥೆ ಮುಗಿಸಿ ನಗುತ್ತಾ ನಿಂತಿದ್ದ ತಮ್ಮ..!
ಇದನ್ನೂ ಓದಿ: IPL 2021: ಐಪಿಎಲ್ ದ್ವಿತಿಯಾರ್ಧದಲ್ಲಿ ಸೃಷ್ಟಿಯಾಗಲಿದೆ ಹೊಸ ದಾಖಲೆ
(Little disappointed to not be in the T20 World Cup team: Shardul Thakur)
