ಫೈನಲ್​ ಫೈಟ್​ನಲ್ಲಿ ಸೂಪರ್ ಓವರ್: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್

ಫೈನಲ್​ ಫೈಟ್​ನಲ್ಲಿ ಸೂಪರ್ ಓವರ್: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
|

Updated on: Oct 17, 2024 | 8:30 AM

LLC 2024 Final: ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕೇದರ್ ಜಾಧವ್ ನೇತೃತ್ವದ ಸದರ್ನ್ ಸೂಪರ್ ಸ್ಟಾರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಂತಿಮ ಹಣಾಹಣಿಯಲ್ಲಿ ಇರ್ಫಾನ್ ಪಠಾಣ್ ಮುಂದಾಳತ್ವದ ಕೊನಾರ್ಕ್ ಸೂರ್ಯ ಒಡಿಶಾ ತಂಡವನ್ನು ಸೂಪರ್ ಓವರ್​ನಲ್ಲಿ ಮಣಿಸಿ ಕಿರೀಟ ಮುಡಿಗೇರಿಸಿಕೊಂಡಿದೆ.

ಲೆಜೆಂಡ್ಸ್ ಲೀಗ್ ಕ್ರಿಕೆಟ್​ನ ಫೈನಲ್ ಪಂದ್ಯದಲ್ಲಿ ಸದರ್ನ್ ಸೂಪರ್ ಸ್ಟಾರ್ಸ್ ತಂಡವು ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಶ್ರೀನಗರದ ಭಕ್ಷಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಸದರ್ನ್ ಸೂಪರ್ ಸ್ಟಾರ್ಸ್ ಮತ್ತು ಕೊನಾರ್ಕ್ ಸೂರ್ಯ ಒಡಿಶಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೊನಾರ್ಕ್ ಸೂರ್ಯ ಒಡಿಶಾ ತಂಡದ ನಾಯಕ ಇರ್ಫಾನ್ ಪಠಾಣ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಸದರ್ನ್ ಸೂಪರ್ ಸ್ಟಾರ್ಸ್​ ಪರ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ 27 ರನ್ ಬಾರಿಸಿದರೆ, ಪವನ್ ನೇಗಿ 33 ರನ್​ ಸಿಡಿಸಿದರು. ಇನ್ನು ಹ್ಯಾಮಿಲ್ಟನ್ ಮಸಕಡ್ಝ 58 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 83 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನಿಂದ ಸದರ್ನ್ ಸೂಪರ್ ಸ್ಟಾರ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 164 ರನ್​ ಕಲೆಹಾಕಿತು.

165 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕೊನಾರ್ಕ್ ಸೂರ್ಯ ಒಡಿಶಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 37 ರನ್​ಗಳಿಸುವಷ್ಟರಲ್ಲಿ ಪ್ರಮುಖ ಮೂರು ಬ್ಯಾಟರ್​ಗಳು ಔಟಾಗಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಯೂಸುಫ್ ಪಠಾಣ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು.

ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಸಿಡಿಲಬ್ಬರ ಶುರು ಮಾಡಿದ ಪಠಾಣ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಅಲ್ಲದೆ ಕೇವಲ 38 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 85 ರನ್ ಚಚ್ಚಿದರು. ಇದಾಗ್ಯೂ ಕೊನೆಯ ಓವರ್​ನಲ್ಲಿ 7 ರನ್​ಗಳ ಅವಶ್ಯಕತೆಯಿತ್ತು.

ಚುತುರಂಗ ಡಿಸಿಲ್ವಾ ಎಸೆದ ಅಂತಿಮ ಓವರ್​ನಲ್ಲಿ 6 ರನ್ ಕಲೆಹಾಕುವ ಮೂಲಕ ಯೂಸುಫ್ ಪಠಾಣ್ ಪಂದ್ಯವನ್ನು ಟೈನಲ್ಲಿ ಅಂತ್ಯಗೊಳಿಸುವಲ್ಲಿ ಯಶಸ್ವಿಯಾದರು. ಉಭಯ ತಂಡಗಳು 164 ರನ್​ಗಳಿಸಿದ್ದರಿಂದ ಪಂದ್ಯದ ಫಲಿತಾಂಶಕ್ಕಾಗಿ ಸೂಪರ್ ಓವರ್​ನ ಮೊರೆ ಹೋಗಲಾಯಿತು.

ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಕೊನಾರ್ಕ್ ಸೂರ್ಯ ಒಡಿಶಾ ತಂಡವು 13 ರನ್ ಕಲೆಹಾಕಿತು. ಅದರಂತೆ 6 ಎಸೆತಗಳಲ್ಲಿ 14 ರನ್​ಗಳ ಗುರಿ ಪಡೆದ ಸದರ್ನ್ ಸೂಪರ್ ಸ್ಟಾರ್ಸ್ ಪರ ಕಣಕ್ಕಿಳಿದ ಮಾರ್ಟಿನ್ ಗಪ್ಟಿಲ್ ಬ್ಯಾಕ್ ಟು ಬ್ಯಾಕ್ 2 ಸಿಕ್ಸ್ ಸಿಡಿಸಿದರು. ಅಲ್ಲದೆ 5 ಎಸೆತಗಳಲ್ಲಿ 14 ರನ್ ಬಾರಿಸುವ ಮೂಲಕ ಸದರ್ನ್ ಸೂಪರ್ ಸ್ಟಾರ್ಸ್ ತಂಡವು ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಕೇದರ್ ಜಾಧವ್ ನೇತೃತ್ವದ ಸದರ್ನ್ ಸೂಪರ್ ಸ್ಟಾರ್ಸ್ ತಂಡವು ಲೆಜೆಂಡ್ಸ್ ಲೀಗ್ ಕ್ರಿಕೆಟ್​ನ ಹೊಸ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

Follow us
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು