AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀರ್ಘಾವಧಿಯ ಡಕ್ ಔಟ್: ಅತ್ಯಂತ ಕೆಟ್ಟ ದಾಖಲೆ ಬರೆದ ಲೌರೆನ್ಸ್

Longest Duck In Cricket: ಬ್ಯಾಟರ್ ಎದುರಿಸಿದ ಎಸೆತಗಳ ಆಧಾರದ ಮೇಲೆ ಕ್ರಿಕೆಟ್​ನಲ್ಲಿ ದೀರ್ಘಾವಧಿಯ ಡಕ್​ ಔಟ್ ಅನ್ನು ನಿರ್ಧರಿಸಲಾಗುತ್ತದೆ. ಅಂದರೆ ಬ್ಯಾಟರ್​ರೊಬ್ಬರು ಹೆಚ್ಚು ಎಸೆತಗಳನ್ನು ಎದುರಿಸಿ ಯಾವುದೇ ರನ್​ ಗಳಿಸದೇ ಔಟಾದರೆ, ಅದನ್ನು ದೀರ್ಘಾವಧಿಯ ಡಕ್​ ಔಟ್ ಎಂದು ಪರಿಗಣಿಸಲಾಗುತ್ತದೆ. ಅದರಂತೆ ಇದೀಗ ಏಕದಿನ ಕ್ರಿಕೆಟ್​ನಲ್ಲಿ ದೀರ್ಘಾವಧಿಯ ಡಕ್​ ಔಟ್​ ಆದ ಆರಂಭಿಕ ಆಟಗಾರ ಎಂಬ ಕಳಪೆ ದಾಖಲೆಯೊಂದನ್ನು ಲೋ-ಹಂಡ್ರೆ ಲೌರೆನ್ಸ್ ನಿರ್ಮಿಸಿದ್ದಾರೆ.

ದೀರ್ಘಾವಧಿಯ ಡಕ್ ಔಟ್: ಅತ್ಯಂತ ಕೆಟ್ಟ ದಾಖಲೆ ಬರೆದ ಲೌರೆನ್ಸ್
Lo-handre Louwrens
ಝಾಹಿರ್ ಯೂಸುಫ್
|

Updated on: Jul 24, 2024 | 8:37 AM

Share

ಏಕದಿನ ಕ್ರಿಕೆಟ್​ನಲ್ಲಿ ಅತ್ಯಂತ ದೀರ್ಘಾವಧಿಯ ಬಳಿಕ ಡಕ್ ಔಟಾದ ಆರಂಭಿಕ ಆಟಗಾರ ಎಂಬ ಕಳಪೆ ದಾಖಲೆಯೊಂದು ನಮೀಬಿಯಾ ಬ್ಯಾಟರ್ ಲೋ-ಹಂಡ್ರೆ ಲೌರೆನ್ಸ್ ಪಾಲಾಗಿದೆ. ಅದು ಕೂಡ 23 ಎಸೆತಗಳನ್ನು ಎದುರಿಸಿ ಎಂಬುದು ವಿಶೇಷ. ಅಂದರೆ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾದ ಆರಂಭಿಕ ಬ್ಯಾಟರ್​ಗಳ ಪಟ್ಟಿಯಲ್ಲಿ ಈಗ ಲೋ-ಹಂಡ್ರೆ ಲೌರೆನ್ಸ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದಕ್ಕೂ ಮುನ್ನ ಬಾಂಗ್ಲಾದೇಶ್ ತಂಡದ ಮಾಜಿ ಆಟಗಾರ ಅತರ್ ಅಲಿ ಖಾನ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರು.

1988 ರಲ್ಲಿ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಅತರ್ ಅಲಿ ಖಾನ್ 22 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾಗಿದ್ದರು.

ಇದೀಗ ಸ್ಕಾಟ್ಲೆಂಡ್ ವಿರುದ್ಧದ ಏಕದಿನ ವಿಶ್ವಕಪ್ ಲೀಗ್-2 ಪಂದ್ಯದಲ್ಲಿ ನಮೀಬಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಲೋ-ಹಂಡ್ರೆ ಲೌರೆನ್ಸ್ 23ನೇ ಎಸೆತದಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. ಇದರೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಡಕ್​ ಔಟಾದ ಆರಂಭಿಕ ಆಟಗಾರ ಎಂಬ ಅನಗತ್ಯ ದಾಖಲೆ ಲೋ-ಹಂಡ್ರೆ ಲೌರೆನ್ಸ್ ಪಾಲಾಗಿದೆ.

ಯಾರ ಹೆಸರಿನಲ್ಲಿದೆ ವಿಶ್ವ ದಾಖಲೆ?

ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ ಬಳಿಕ ಡಕ್​ ಔಟ್ ಆದ ಬ್ಯಾಟರ್ ಎಂಬ ಹೀನಾಯ ದಾಖಲೆ ವೆಸ್ಟ್ ಇಂಡೀಸ್​ನ ರುನಾಕೊ ಮಾರ್ಟನ್ ಹೆಸರಿನಲ್ಲಿದೆ. 2006 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ರುನಾಕೊ 31 ಎಸೆತಗಳನ್ನು ಎದುರಿಸಿದರೂ ಯಾವುದೇ ರನ್ ಗಳಿಸದೇ ಔಟಾಗಿದ್ದರು. ಇದುವೇ ಸೀಮಿತ ಓವರ್​ಗಳಲ್ಲಿ ಕಂಡು ಬಂದ ಅತ್ಯಂತ ದೀರ್ಘಾವಧಿಯ ಡಕ್ ಔಟ್.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

ಇದೀಗ ಏಕದಿನ ಕ್ರಿಕೆಟ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಅತ್ಯಂತ ದೀರ್ಘಾವಧಿ ಬಳಿಕ ಶೂನ್ಯಕ್ಕೆ ಔಟಾದ ಆರಂಭಿಕ ಬ್ಯಾಟರ್ ಎಂಬ ಕಳಪೆ ದಾಖಲೆ ಲೋ-ಹಂಡ್ರೆ ಲೌರೆನ್ಸ್ ಹೆಸರಿಗೆ ಸೇರ್ಪಡೆಯಾಗಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ