AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

59 ಎಸೆತಗಳಲ್ಲಿ ಪಂದ್ಯ ಮುಗಿಸಿದ ‘ಸೂಪರ್ ಜೈಂಟ್ಸ್​’

The Hundred: ದಿ ಹಂಡ್ರೆಡ್ ಎಂಬುದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಆಯೋಜಿಸುವ 100 ಎಸೆತಗಳ ಹೊಸ ಮಾದರಿಯ ಕ್ರಿಕೆಟ್ ಲೀಗ್. ಸಾಂಪ್ರದಾಯಿಕ ಓವರ್‌ಗಳ ನಿಯಮದ ಬದಲಾಗಿ, ಈ ಟೂರ್ನಿಯಲ್ಲಿ ಪ್ರತಿ ಇನ್ನಿಂಗ್ಸ್ ಕೇವಲ 100 ಎಸೆತಗಳನ್ನು ಮಾತ್ರ ಒಳಗೊಂಡಿರುತ್ತದೆ. ಹಾಗೆಯೇ ಬೌಲರ್‌ಗಳು ಸತತವಾಗಿ 5 ಅಥವಾ 10 ಎಸೆತಗಳನ್ನು ಬೌಲಿಂಗ್ ಮಾಡಲು ಅವಕಾಶವಿರುತ್ತದೆ. 

59 ಎಸೆತಗಳಲ್ಲಿ ಪಂದ್ಯ ಮುಗಿಸಿದ 'ಸೂಪರ್ ಜೈಂಟ್ಸ್​'
Manchester Super Giants WomenImage Credit source: MSG
ಝಾಹಿರ್ ಯೂಸುಫ್
|

Updated on: Jul 25, 2026 | 9:10 AM

Share

ದಿ ಹಂಡ್ರೆಡ್ ಲೀಗ್ ಮಹಿಳಾ ಟೂರ್ನಿಯ ಮೂರನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡ ಗೆಲುವಿನ ಖಾತೆ ತೆರೆದಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಲಂಡನ್ ಸ್ಪಿರಿಟ್ ಮಹಿಳಾ ತಂಡ ಹಾಗೂ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದ ನಾಯಕ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಲಂಡನ್ ಸ್ಪಿರಿಟ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ್ತಿ ಗ್ರೇಸ್ ಹ್ಯಾರಿಸ್ 4 ರನ್​ಗಳಿಸಿ ಔಟಾದರೆ, ಆ್ಯಮಿ ಜೋನ್ಸ್ (0) ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೇರಿ ಕೆಲ್ಲಿ ಕಲೆಹಾಕಿದ್ದು ಕೇವಲ 1 ರನ್ ಮಾತ್ರ.

ಆ ಬಳಿಕ ಬಂದ ಮರಿಝನ್ನೆ ಕಪ್ 17 ರನ್​ ಗಳಿಸಿದರೆ, ಷಾರ್ಲೆಟ್ ಡೀನ್ 14 ರನ್​ ಬಾರಿಸಿದರು. ಈ ಮೂಲಕ ಲಂಡನ್ ಸ್ಪಿರಿಟ್ ತಂಡವು 91 ಎಸೆತಗಳಲ್ಲಿ ಕೇವಲ 80 ರನ್​ಗಳಿಸಿ ಆಲೌಟ್ ಆಯಿತು.

81 ರನ್​ಗಳ ಸುಲಭ ಗುರಿ:

ಕೇವಲ 81 ರನ್​ಗಳ ಗುರಿ ಪಡೆದ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್  ತಂಡಕ್ಕೆ ಸ್ಮೃತಿ ಮಂಧಾನ ಹಾಗೂ ಮೆಗ್ ಲ್ಯಾನಿಂಗ್ ಉತ್ತಮ ಆರಂಭ ಒದಗಿಸಿದ್ದರು. ಆದರೆ 17 ರನ್​ಗಳಿಸಿದ್ದ ವೇಳೆ ಭರ್ಜರಿ ಹೊಡೆತಕ್ಕೆ ಮುಂದಾಗಿ ಸ್ಮೃತಿ ಕ್ಯಾಚ್ ನೀಡಿದರು. ಇನ್ನು ಮೆಗ್ ಲ್ಯಾನಿಂಗ್ 21 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಜೊತೆಗೂಡಿದ ಪೈಜ್ ಸ್ಕೋಲ್ಫೀಲ್ಡ್ ಹಾಗೂ ರಿಚಾ ಘೋಷ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಪೈಜ್ ಸ್ಕೋಲ್ಫೀಲ್ಡ್ 15 ಎಸೆತಗಳಲ್ಲಿ 22 ರನ್ ಬಾರಿಸಿದರೆ, ರಿಚಾ 5 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್​ನೊಂದಿಗೆ 15 ರನ್ ಚಚ್ಚಿದರು. ಈ ಮೂಲಕ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡವು ಕೇವಲ 59 ಎಸೆತಗಳಲ್ಲಿ 86 ರನ್ ಬಾರಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪಡೆ ದಿ ಹಂಡ್ರೆಡ್ ಲೀಗ್ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ.

ಲಂಡನ್ ಸ್ಪಿರಿಟ್ ಪ್ಲೇಯಿಂಗ್ 11: ಗ್ರೇಸ್ ಹ್ಯಾರಿಸ್ , ಆ್ಯಮಿ ಜೋನ್ಸ್ (ವಿಕೆಟ್ ಕೀಪರ್) ಮೇರಿ ಕೆಲ್ಲಿ , ಮರಿಝನ್ನೆ ಕಪ್ , ನಾಡಿನ್ ಡಿ ಕ್ಲರ್ಕ್ , ಡಿಯಾಂಡ್ರಾ ಡಾಟಿನ್ , ಚಾರಿಸ್ ಪಾವೆಲಿ , ಷಾರ್ಲೆಟ್ ಡೀನ್ (ನಾಯಕಿ) , ಕೇಟೀ ಜಾರ್ಜ್ , ಜೋಸಿ ಗ್ರೋವ್ಸ್ , ಹನ್ನಾ ರೈನಿ.

ಇದನ್ನೂ ಓದಿ: ಏಷ್ಯನ್ ಗೇಮ್ಸ್​ನಲ್ಲಿ ಟೀಮ್ ಇಂಡಿಯಾ ಎದುರಾಳಿ ಯಾರು?

ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11:  ಮೆಗ್ ಲ್ಯಾನಿಂಗ್ (ನಾಯಕಿ) , ಸ್ಮೃತಿ ಮಂಧಾನ , ಗ್ರೇಸ್ ಸ್ಕ್ರಿವೆನ್ಸ್ , ಪೈಜ್ ಸ್ಕೋಲ್ಫೀಲ್ಡ್ , ರಿಚಾ ಘೋಷ್ (ವಿಕೆಟ್ ಕೀಪರ್ ), ಮ್ಯಾಡಿ ವಿಲಿಯರ್ಸ್ , ಕ್ಯಾಥರಿನ್ ಬ್ರೈಸ್ , ಮೈಟ್ಲಾನ್ ಬ್ರೌನ್ , ರಿಯಾನಾ ಮ್ಯಾಕ್‌ಡೊನಾಲ್ಡ್-ಗೇ , ಸೋಫಿ ಎಕ್ಲೆಸ್ಟೋನ್ , ಗ್ರೇಸ್ ಬ್ಯಾಲಿಂಗರ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ