AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 341 ರನ್​ಗಳಿಗೆ ಡಿಕ್ಲೇರ್ ಘೋಷಿಸಿದ ಭಾರತ; ಇಂಗ್ಲೆಂಡ್ ಗೆಲುವಿಗೆ 456 ರನ್ ಗುರಿ

Lord's Test: ಲಾರ್ಡ್ಸ್ ಟೆಸ್ಟ್‌ನಲ್ಲಿ ಭಾರತ ಮಹಿಳಾ ತಂಡ ಇಂಗ್ಲೆಂಡ್‌ಗೆ 457 ರನ್‌ಗಳ ಬೃಹತ್ ಗುರಿ ನೀಡಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ 341 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡ ಭಾರತದ ಪರ ಯಾಸ್ತಿಕಾ ಭಾಟಿಯಾ ಸ್ಮರಣೀಯ ಶತಕ ಸಿಡಿಸಿದರು. ಸ್ಮೃತಿ ಮಂಧಾನ ಮತ್ತು ರಿಚಾ ಘೋಷ್ ಅರ್ಧಶತಕಗಳೊಂದಿಗೆ ಮಿಂಚಿದರೆ, ಇಂಗ್ಲೆಂಡ್ ಪರ ಸೋಫಿ ಎಕ್ಲೆಸ್ಟೋನ್ ಐದು ವಿಕೆಟ್ ಗೊಂಚಲು ಪಡೆದರು.

IND vs ENG: 341 ರನ್​ಗಳಿಗೆ ಡಿಕ್ಲೇರ್ ಘೋಷಿಸಿದ ಭಾರತ; ಇಂಗ್ಲೆಂಡ್ ಗೆಲುವಿಗೆ 456 ರನ್ ಗುರಿ
India Women
ಪೃಥ್ವಿಶಂಕರ
|

Updated on:Jul 12, 2026 | 8:24 PM

Share

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ (Lord’s Test) ಪಂದ್ಯದಲ್ಲಿ ಭಾರತ ಮಹಿಳಾ ತಂಡ (India Women’s Cricket) ತನ್ನ ಎರಡನೇ ಇನ್ನಿಂಗ್ಸ್​ ಅನ್ನು 341 ರನ್​​ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಆತಿಥೇಯ ಇಂಗ್ಲೆಂಡ್‌ ಮಹಿಳಾ ತಂಡದ ಗೆಲುವಿಗೆ 457 ರನ್​ಗಳ ಬೃಹತ್ ಗುರಿ ನೀಡಿದೆ. ಎರಡನೇ ಇನ್ನಿಂಗ್ಸ್​ನಲ್ಲಿ ಭಾರತದ ಪರ ಯಾಸ್ತಿಕಾ ಭಾಟಿಯಾ (Yastika Bhatia) ಸ್ಮರಣೀಯ ಶತಕ ಸಿಡಿಸಿದರೆ, ಉಪನಾಯಕಿ ಸ್ಮೃತಿ ಮಂಧಾನ ಹಾಗೂ ವಿಕೆಟ್‌ಕೀಪರ್ ರಿಚಾ ಘೋಷ್ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇತ್ತ ಇಂಗ್ಲೆಂಡ್‌ ಪರ ಸೋಫಿ ಎಕ್ಲೆಸ್ಟೋನ್ ಸತತ ಎರಡನೇ ಇನ್ನಿಂಗ್ಸ್​ನಲ್ಲೂ ಐದು ವಿಕೆಟ್​ಗಳ ಗೊಂಚಲು ಪಡೆದರು.

ಸತತ 2ನೇ ಅರ್ಧಶತಕ ಬಾರಿಸಿದ ಸ್ಮೃತಿ

ಮೊದಲ ಇನ್ನಿಂಗ್ಸ್​ನಲ್ಲಿ 285 ರನ್​ಗಳಿಗೆ ಆಲೌಟ್ ಆಗಿದ್ದ ಟೀಂ ಇಂಡಿಯಾ, ಆತಿಥೇಯ ಇಂಗ್ಲೆಂಡ್‌ ತಂಡವನ್ನು ಮೊದಲ ಇನ್ನಿಂಗ್ಸ್​ನಲ್ಲಿ 170 ರನ್​​ಗಳಿಗೆ ಕಟ್ಟಿಹಾಕಿತು. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ 115 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾಕ್ಕೆ ಮೊದಲ ವಿಕೆಟ್​ಗೆ 88 ರನ್​ಗಳ ಜೊತೆಯಾಟ ಸಿಕ್ಕಿತು. ಆರಂಭಿಕ ಆಟಗಾರ್ತಿ ಶಫಾಲಿ 33 ರನ್​ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಈ ಜೊತೆಯಾಟ ಮುರಿದುಬಿತ್ತು. ಇದಾದ ಬಳಿಕ ಜೊತೆಯಾದ ಸ್ಮೃತಿ ಹಾಗೂ ಯಾಸ್ತಿಕಾ ಎರಡನೇ ವಿಕೆಟ್‌ಗೆ 73 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಇದೇ ವೇಳೆ ಸ್ಮೃತಿ ಸತತ ಎರಡನೇ ಇನ್ನಿಂಗ್ಸ್​ನಲ್ಲೂ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಆದಾಗ್ಯೂ ಎರಡನೇ ಇನ್ನಿಂಗ್ಸ್​ನಲ್ಲೂ ಶತಕ ವಂಚಿತರಾದ ಸ್ಮೃತಿ 70 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಶತಕದ ಸಿಡಿಸಿದ ಯಾಸ್ತಿಕಾ

ಆದರೆ ಸ್ಮೃತಿ ನಂತರ ಬಂದ ಜೆಮಿಮಾ, ನಾಯಕಿ ಹರ್ಮನ್​ಪ್ರೀತ್​ಗೆ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಾಗಲಿಲ್ಲ. 6ನೇ ಕ್ರಮಾಂಕದಲ್ಲಿ ಬಂದ ದೀಪ್ತಿ, ಯಾಸ್ತಿಕಾ ಅವರೊಂದಿಗೆ 6ನೇ ವಿಕೆಟ್​ಗೆ 52 ರನ್‌ಗಳ ಅರ್ಧಶತಕದ ಜೊತೆಯಾಟವನ್ನು ನಡೆಸಿದರು. ಇದೇ ವೇಳೆ ಯಾಸ್ತಿಕಾ ತಮ್ಮ ವೃತ್ತಿಜೀವನದ ಮೊದಲ ಟೆಸ್ಟ್ ಶತಕವನ್ನು ಬಾರಿಸಿದರು. ಹಾಗೆಯೇ ಲಾರ್ಡ್ಸ್‌ನಲ್ಲಿ ದಾಖಲಾದ ಮೊದಲ ಮಹಿಳಾ ಟೆಸ್ಟ್ ಶತಕ ಎಂಬ ದಾಖಲೆಯೂ ಸೃಷ್ಟಿಯಾಯಿತು. ಅಂತಿಮವಾಗಿ ಯಾಸ್ತಿಕಾ ತಮ್ಮ ಇನ್ನಿಂಗ್ಸ್​ನಲ್ಲಿ 158 ಎಸೆತಗಳನ್ನು ಎದುರಿಸಿ 14 ಬೌಂಡರಿಗಳ ಸಹಿತ 113 ರನ್ ಗಳಿಸಿ ಔಟಾದರು.

IND vs ENG: ಲಾರ್ಡ್ಸ್‌ನಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಮಹಿಳಾ ಆಟಗಾರ್ತಿ ಯಾಸ್ತಿಕಾ ಭಾಟಿಯಾ

ರಿಚಾ ಸ್ಫೋಟಕ ಅರ್ಧಶತಕ

ಯಾಸ್ತಿಕಾ ವಿಕೆಟ್ ಪತನದ ಬಳಿಕ ತಂಡದ ಇನ್ನಿಂಗ್ಸ್ ನಿಭಾಯಿಸಿದ ರಿಚಾ ಘೋಷ್ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು. ರಿಚಾ ಅವರ ಆಟದಿಂದಾಗಿ ಭಾರತ ತಂಡ 300 ರನ್​ಗಳ ಗಡಿ ದಾಟಿತು. 8ನೇ ವಿಕೆಟ್​ಗೆ ರಿಚಾ ಹಾಗೂ ಸಯ್ಯಾಲಿ ಅಜೇಯ 42 ರನ್​ಗಳ ಜೊತೆಯಾಟವನ್ನು ನಿರ್ಮಿಸಿದರು. ರಿಚಾ 52 ಎಸೆತಗಳಲ್ಲಿ 8 ಬೌಂಡರಿ ಸಹಿತ ಅರ್ಧಶತಕ ಪೂರೈಸುತ್ತಿದ್ದಂತೆ ನಾಯಕಿ ಹರ್ಮನ್ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Sun, 12 July 26

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ