
ಪ್ರಸ್ತುತ ಇಂಗ್ಲೆಂಡ್‌ನಲ್ಲಿ 2026 ರ ಮಹಿಳಾ ಟಿ20 ವಿಶ್ವಕಪ್ ನಡೆಯುತ್ತಿದೆ. ಈ ಪಂದ್ಯಾವಳಿ ಮುಗಿದ ಬಳಿಕ ಐತಿಹಾಸಿಕ ಲಾರ್ಡ್ಸ್ (Lord’s) ಮೈದಾನದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ಇಂಗ್ಲೆಂಡ್ ಮಹಿಳಾ ತಂಡದ (India vs England Women) ನಡುವೆ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ಮಹಿಳಾ ತಂಡವನ್ನು ಬಿಸಿಸಿಐ ಈಗಾಗಲೇ ಘೋಷಿಸಿತ್ತು. ಇದೀಗ ಇಂಗ್ಲೆಂಡ್ ಮಹಿಳಾ ಟೆಸ್ಟ್ ತಂಡವನ್ನು ಸಹ ಪ್ರಕಟಿಸಲಾಗಿದೆ. ನ್ಯಾಟ್ ಸಿವರ್ ಬ್ರಂಟ್ ನಾಯಕತ್ವದ ಬಲಿಷ್ಠ ಇಂಗ್ಲೆಂಡ್ ತಂಡ, ಭಾರತದ ವಿರುದ್ಧ ಸೆಣಸಲು ಸಜ್ಜಾಗಿದೆ.
ಜುಲೈ 10 ರಿಂದ ಐತಿಹಾಸಿಕ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಏಕೈಕ ಮಹಿಳಾ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಇಂಗ್ಲೆಂಡ್ 15 ಸದಸ್ಯರ ಬಲಿಷ್ಠ ತಂಡವನ್ನು ಘೋಷಿಸಿದೆ. ಐದು ವರ್ಷಗಳ ನಂತರ ಭಾರತೀಯ ಮಹಿಳಾ ತಂಡ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಪಂದ್ಯವನ್ನು ಆಡಲಿದೆ. ಇದಕ್ಕೂ ಮೊದಲು ಉಭಯ ತಂಡಗಳ ನಡುವಿನ ಕೊನೆಯ ಟೆಸ್ಟ್ ಪಂದ್ಯವು 2023 ರಲ್ಲಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದಿತ್ತು. ಆ ಪಂದ್ಯವನ್ನು ಆತಿಥೇಯ ಭಾರತ ತಂಡ 347 ರನ್‌ಗಳಿಂದ ಗೆದ್ದುಕೊಂಡಿತ್ತು.
ಇನ್ನು ಲಾರ್ಡ್ಸ್ ಟೆಸ್ಟ್ನಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿರುವ ನಾಯಕಿ ನ್ಯಾಟ್ ಸಿವರ್-ಬ್ರಂಟ್ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಲಿದ್ದಾರೆ. ತಂಡದಲ್ಲಿ ಹೀದರ್ ನೈಟ್, ಟ್ಯಾಮಿ ಬ್ಯೂಮಾಂಟ್ ಮತ್ತು ಆಮಿ ಜೋನ್ಸ್‌ರಂತಹ ಅನುಭವಿ ಆಟಗಾರ್ತಿಯರು ಇದ್ದಾರೆ. ಹಾಗೆಯೇ ಈ ತಂಡದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ಆಲಿಸ್ ಕ್ಯಾಪ್ಸೆ, ಟಿಲ್ಲಿ ಕೋರ್ಟೆನೆ-ಕೋಲ್ಮನ್, ಮಾಡಿ ವಿಲಿಯರ್ಸ್, ಗ್ರೇಸ್ ಪಾಟ್ಸ್ ಮತ್ತು ಎಲ್ಲೀ ಥ್ರೆಲ್ಕೆಲ್ಡ್ ಕೂಡ ಸ್ಥಾನ ಪಡೆದಿದ್ದಾರೆ. ಇವರಲ್ಲಿ, ಗ್ರೇಸ್ ಪಾಟ್ಸ್ ಮತ್ತು ಎಲ್ಲೀ ಥ್ರೆಲ್ಕೆಲ್ಡ್ ಇನ್ನೂ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿಲ್ಲ.
ENG vs NZ: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯವಾಗಿ ಸೋತ ನ್ಯೂಜಿಲೆಂಡ್
ಲಾರ್ಡ್ಸ್ ಟೆಸ್ಟ್‌ಗೆ ಇಂಗ್ಲೆಂಡ್ ಮಹಿಳಾ ತಂಡ: ನ್ಯಾಟ್ ಸಿವರ್ ಬ್ರಂಟ್ (ನಾಯಕಿ), ಟ್ಯಾಮಿ ಬ್ಯೂಮಾಂಟ್, ಲಾರೆನ್ ಬೆಲ್, ಮಾಯಾ ಬೌಚಿಯರ್, ಎಲಿಸ್ ಕ್ಯಾಪ್ಸೆ, ಟಿಲ್ಲಿ ಕೋರ್ಟಿನ್ ಕೋಲ್ಮನ್, ಸೋಫಿ ಎಕ್ಲೆಸ್ಟೋನ್, ಲಾರೆನ್ ಫಿಲ್ಲರ್, ಆಮಿ ಜೋನ್ಸ್, ಹೀದರ್ ನೈಟ್, ಎಮ್ಮಾ ಲ್ಯಾಂಬ್, ಗ್ರೇಸ್ ಪಾಟ್ಸ್, ಎಲ್ಲೀ ಥ್ರೆಲ್ಕೆಲ್ಡ್, ಮ್ಯಾಡಿ ವಿಲಿಯರ್ಸ್, ಇಸ್ಸಿ ವಾಂಗ್.
ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಪ್ರತೀಕಾ ರಾವಲ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಶ್ರೀ ಚರಣಿ, ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನಂದನಿ ಶರ್ಮಾ, ಹರ್ಲೀನ್ ಡಿಯೋಲ್, ರೇಣುಕಾ ಠಾಕೂರ್, ಕ್ರಾಂತಿ ಗೌಡ್, ಸಯಾಲಿ ಸತ್ಘರೆ, ಸ್ನೇಹ ರಾಣಾ.
Published On - 7:45 pm, Thu, 18 June 26