AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 4,4,6, ಔಟ್..! ಪ್ರತೀಕಾರ ಅಂದ್ರೆ ಹೀಗಿರಬೇಕು; ಶಹಬ್ಬಾಸ್ ಆಕಾಶ್‌ ದೀಪ್

India vs England: ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಆರಂಭಿಕ ಆಘಾತ ಅನುಭವಿಸಿದೆ. ಮೊದಲ ಸೆಷನ್‌ನಲ್ಲಿ ನಾಲ್ಕು ಪ್ರಮುಖ ವಿಕೆಟ್‌ಗಳು ಉರಿಳಿವೆ. ಆಕಾಶ್ ದೀಪ್ ಅವರು ವಿಶ್ವದ ನಂಬರ್ ಒನ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಅವರನ್ನು ಔಟ್ ಮಾಡುವ ಮೂಲಕ ಭಾರತಕ್ಕೆ ಮಹತ್ವದ ಯಶಸ್ಸು ತಂದುಕೊಟ್ಟಿದ್ದಾರೆ. ಬ್ರೂಕ್ 23 ರನ್ ಗಳಿಸಿ ಔಟ್ ಆದರು. ಭಾರತೀಯ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ.

IND vs ENG: 4,4,6, ಔಟ್..! ಪ್ರತೀಕಾರ ಅಂದ್ರೆ ಹೀಗಿರಬೇಕು; ಶಹಬ್ಬಾಸ್ ಆಕಾಶ್‌ ದೀಪ್
Harry Brook
ಪೃಥ್ವಿಶಂಕರ
|

Updated on:Jul 13, 2025 | 9:58 PM

Share

ಲಾರ್ಡ್ಸ್‌ನಲ್ಲಿ (Lords Test) ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಆರಂಭಿಕ ಆಘಾತ ಕಂಡಿದೆ. ತಂಡ 100 ರನ್​ಗಳ ಗಡಿ ದಾಟುವ ಮುನ್ನವೇ ಮೊದಲ ಸೆಷನ್‌ನಲ್ಲಿ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿದೆ. ಭಾರತದ ಪರ ಪ್ರಸ್ತುತ ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದಿದ್ದರೆ, ನಿತೀಶ್ ಕುಮಾರ್ ರೆಡ್ಡಿ ಮತ್ತು ಆಕಾಶ್ ದೀಪ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ. ಅದರಲ್ಲೂ ಆಕಾಶ್ ದೀಪ್ (Akash Deep) ಉರುಳಿಸಿದ್ದ ವಿಕೆಟ್ ಟೀಂ ಇಂಡಿಯಾ ಪಾಳಾಯದಲ್ಲಿ ಸಂಭ್ರಮ ಮನೆ ಮಾಡುವಂತೆ ಮಾಡಿತ್ತು. ಇದಕ್ಕೆ ಕಾರಣ, ಆಕಾಶ್ ಪಡೆದ ವಿಕೆಟ್ ವಿಶ್ವ ಟೆಸ್ಟ್ ಕ್ರಿಕೆಟ್​ನಲ್ಲಿ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿರುವ ಹ್ಯಾರಿ ಬ್ರೂಕ್ ಅವರದ್ದಾಗಿತ್ತು.

ಆಕಾಶ್ ಓವರ್​ನಲ್ಲಿ 15 ರನ್

ಓಲಿ ಪೋಪ್ ಔಟಾದ ಬಳಿಕ ಬ್ಯಾಟಿಂಗ್​ಗೆ ಬಂದ ಹ್ಯಾರಿ ಬ್ರೂಕ್ ತಾಳ್ಮೆಯ ಆಟಕ್ಕೆ ಮುಂದಾದರು. ಆದರೆ ಎರಡನೇ ಇನ್ನಿಂಗ್ಸ್‌ನ 20 ನೇ ಓವರ್ ಬೌಲಿಂಗ್ ಮಾಡಲು ಬಂದ ಆಕಾಶ್ ದೀಪ್ ಅವರ ಈ ಓವರ್‌ನಲ್ಲಿ ಒಟ್ಟು 15 ರನ್‌ಗಳು ಬಂದವು. ಈ ಓವರ್​ನಲ್ಲಿ ಹ್ಯಾರಿ ಬ್ರೂಕ್‌ ಮೊದಲ ಎರಡು ಎಸೆತಗಳಲ್ಲಿ ಬೌಂಡರಿಗಟ್ಟಿದರೆ, ಕೊನೆಯ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸಿದರು.

ಹ್ಯಾರಿ ಬ್ರೂಕ್ ವಿಕೆಟ್ ವಿಡಿಯೋ

23 ರನ್​ಗಳಿಗೆ ಬ್ರೂಕ್ ಔಟ್

ಆ ಬಳಿಕ 22ನೇ ಓವರ್​ ಬೌಲ್ ಮಾಡಲು ಮತ್ತೆ ದಾಳಿಗಿಳಿದ ಆಕಾಶ್‌ದೀಪ್ ವಿರುದ್ಧ ಬ್ರೂಕ್ ಮತ್ತೊಮ್ಮೆ ಅಬ್ಬರಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆಕಾಶ್‌ದೀಪ್ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಈ ಓವರ್‌ನ ಮೊದಲ ಎಸೆತದಲ್ಲಿ, ಜೋ ರೂಟ್ ಮೊದಲ ಎಸೆತದಲ್ಲಿ ಎರಡು ರನ್‌ಗಳನ್ನು ಪಡೆದರು. ನಂತರ ಎರಡನೇ ಎಸೆತದಲ್ಲಿ ಒಂದು ರನ್ ತೆಗೆದುಕೊಂಡು ಹ್ಯಾರಿ ಬ್ರೂಕ್‌ಗೆ ಸ್ಟ್ರೈಕ್ ನೀಡಿದರು. ಆಕಾಶ್ ಬೌಲ್ ಮಾಡಿದ ಮುಂದಿನ ಎಸೆತದಲ್ಲಿ ಬ್ರೂಕ್ ಮತ್ತೆ ಸ್ಕೂಪ್ ಶಾಟ್ ಆಡಲು ಪ್ರಯತ್ನಿಸಿದರು. ಆದರೆ ಈ ಬಾರಿ ಬ್ರೂಕ್​ಗೆ ಮೇಲುಗೈ ಸಾಧಿಸಲು ಸಾಧ್ಯವಾಗಲಿಲ್ಲ. ಚೆಂಡು ನೇರವಾಗಿ ಮಿಡಲ್ ಸ್ಟಂಪ್​ಗೆ ಬಡಿಯಿತು. ಹೀಗಾಗಿ ಹ್ಯಾರಿ ಬ್ರೂಕ್ ಅವರ ಆಟ 19 ಎಸೆತಗಳಲ್ಲಿ 23 ರನ್‌ಗಳೊಂದಿಗೆ ಕೊನೆಗೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:29 pm, Sun, 13 July 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಸಿಜೆಪಿ ಪ್ರತಿಭಟನೆ ನಿಷೇಧಿಸಿ: ಎಲ್ಲ ರಾಜ್ಯಗಳಿಗೆ ಗೃಹ ಇಲಾಖೆ ಸೂಚನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?