LPL 2023: ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ಸ್

LPL 2023: 148 ರನ್​ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್​ಗಳ ಕೊಡುಗೆ ನೀಡಿದರು.

LPL 2023: ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ಸ್
B-Love Kandy
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2023 | 5:22 PM

ಶ್ರೀಲಂಕಾದಲ್ಲಿ ನಡೆದ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಡಂಬುಲ್ಲಾ ಔರಾ ಹಾಗೂ ಬಿ-ಲವ್ ಕ್ಯಾಂಡಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಂಬುಲ್ಲಾ ಔರಾ ಮೊದಲು ಬ್ಯಾಟಿಂಗ್ ಮಾಡಿದ್ದರು.

ಆದರೆ ಡಂಬುಲ್ಲಾ ಔರಾ ತಂಡವು ನಿರೀಕ್ಷಿತ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೊ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ಕುಸಾಲ್ ಮೆಂಡಿಸ್ 22 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 30 ಎಸೆತಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 36 ರನ್​ ಮಾತ್ರ. ಹಾಗೆಯೇ ಕುಸಾಲ್ ಪೆರೆರಾ 25 ಎಸೆತಗಳಲ್ಲಿ 31 ರನ್​ ಬಾರಿಸಿದರು.

ಇದಾಗ್ಯೂ ಅಂತಿಮ ಹಂತದಲ್ಲಿ ಅಬ್ಬರಿಸಿದ ಧನಂಜಯ ಡಿಸಿಲ್ವಾ 29 ಎಸೆತಗಳಲ್ಲಿ 40 ರನ್​ ಚಚ್ಚಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡಂಬುಲ್ಲಾ ಔರಾ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್​ ಕಲೆಹಾಕಿತು.

148 ರನ್​ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್​ಗಳ ಕೊಡುಗೆ ನೀಡಿದರು.

ಆದರೆ ಮಧ್ಯಮ ಕ್ರಮಾಂಕದಲ್ಲಿ ಉಂಟಾದ ದಿಢೀರ್ ಕುಸಿತದಿಂದ ಒಂದು ಹಂತದಲ್ಲಿ ಡಂಬುಲ್ಲಾ ಔರ ಬೌಲರ್​ಗಳು ಮೇಲುಗೈ ಸಾಧಿಸಿದರು. ಈ ವೇಳೆ ತಮ್ಮ ಅನುಭವವನ್ನು ಧಾರೆಯೆರೆದ ಏಂಜೆಲೊ ಮ್ಯಾಥ್ಯೂಸ್ ಅಜೇಯ 25 ರನ್ ಬಾರಿಸುವ ಮೂಲಕ 19.5 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಡಂಬುಲ್ಲಾ ಔರ ಪ್ಲೇಯಿಂಗ್ 11: ಅವಿಷ್ಕಾ ಫೆರ್ನಾಂಡೋ , ಕುಸಾಲ್ ಮೆಂಡಿಸ್ (ನಾಯಕ) , ಸದೀರ ಸಮರವಿಕ್ರಮ , ಕುಸಲ್ ಪೆರೇರಾ , ಧನಂಜಯ ಡಿ ಸಿಲ್ವಾ , ಅಲೆಕ್ಸ್ ರಾಸ್ , ಹೇಡನ್ ಕೆರ್ , ದುಶನ್ ಹೇಮಂತ , ಬಿನೂರ ಫರ್ನಾಂಡೋ , ನೂರ್ ಅಹ್ಮದ್ , ಪ್ರಮೋದ್ ಮಧುಶನ್.

ಇದನ್ನೂ ಓದಿ: ಟೀಮ್ ಇಂಡಿಯಾಗೆ ಶ್ರೇಯಸ್ ಅಯ್ಯರ್ ಆಯ್ಕೆ ಬಹುತೇಕ ಖಚಿತ

ಬಿ-ಲವ್ ಕ್ಯಾಂಡಿ ಪ್ಲೇಯಿಂಗ್ 11: ಮೊಹಮ್ಮದ್ ಹ್ಯಾರಿಸ್ , ದಿನೇಶ್ ಚಂಡಿಮಲ್ (ವಿಕೆಟ್ ಕೀಪರ್) , ಅಶೆನ್ ಬಂಡಾರ , ಏಂಜೆಲೊ ಮ್ಯಾಥ್ಯೂಸ್ (ನಾಯಕ) , ಕಾಮಿಂದು ಮೆಂಡಿಸ್ , ಚತುರಂಗ ಡಿ ಸಿಲ್ವಾ , ಆಸಿಫ್ ಅಲಿ , ಲಹಿರು ಮಧುಶಂಕ , ಮೊಹಮ್ಮದ್ ಹಸ್ನೈನ್ , ಮುಜೀಬ್ ಉರ್ ರೆಹಮಾನ್ , ನುವಾನ್ ಪ್ರದೀಪ್.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ