VIDEO: ಮೈದಾನದಲ್ಲಿ ಕಾಣಿಸಿಕೊಂಡ ಹಾವು: ಕೂದಲೆಳೆ ಅಂತರದಲ್ಲಿ ಪಾರಾದ ಲಂಕಾ ಆಟಗಾರ

LPL 2023: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಿ-ಲವ್ ಕ್ಯಾಂಡಿ ಪರ ಆರಂಭಿಕ ಆಟಗಾರ ಮೊಹಮ್ಮದ್ ಹ್ಯಾರಿಸ್ 51 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 81 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಬಿ-ಲವ್ ಕ್ಯಾಂಡಿ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು.

VIDEO: ಮೈದಾನದಲ್ಲಿ ಕಾಣಿಸಿಕೊಂಡ ಹಾವು: ಕೂದಲೆಳೆ ಅಂತರದಲ್ಲಿ ಪಾರಾದ ಲಂಕಾ ಆಟಗಾರ
LPL 2023- Snake
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 13, 2023 | 6:43 PM

ಶ್ರೀಲಂಕಾದಲ್ಲಿ ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್​ಗೆ (LPL 2023) ಹಾವಿನ ಕಾಟ ಮುಂದುವರೆದಿದೆ. ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಜಾಫ್ನಾ ಕಿಂಗ್ಸ್ ಹಾಗೂ ಬಿ-ಲವ್ ಕ್ಯಾಂಡಿ ನಡುವಣ ಪಂದ್ಯದ ವೇಳೆ ಹಾವೊಂದು ಮೈದಾನದಲ್ಲಿ ಕಾಣಿಸಿಕೊಂಡಿದೆ. ಆದರೆ ಇದರ ಅರಿವೆ ಇರದ ಬಿ-ಲವ್ ಕ್ಯಾಂಡಿ ವೇಗಿ ಇಸುರು ಉದಾನಾ ಫೀಲ್ಡಿಂಗ್ ಮಾಡುತ್ತಿದ್ದರು.

ಅಲ್ಲದೆ ಓವರ್ ಮುಕ್ತಾಯದ ಬಳಿಕ ತನ್ನ ಫೀಲ್ಡಿಂಗ್ ಸ್ಥಾನಕ್ಕೆ ಹಿಮ್ಮುಖವಾಗಿ ಹಿಂತಿರುಗಿದ್ದರು. ಈ ವೇಳೆ ಹಾವನ್ನು ಇಸುರು ಉದಾನ ಬೆಚ್ಚಿ ಬಿದ್ದಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಇದೇ ಪಂದ್ಯದ ವೇಳೆ ಮತ್ತೊಂದು ಹಾವು ಬೌಂಡರಿ ಲೈನ್ ಆಚೆ ಕಾಣಿಸಿಕೊಂಡಿದ್ದು, ಇದಾಗ್ಯೂ ಪಂದ್ಯಕ್ಕೆ ಯಾವುದೇ ಅಡಚಣೆ ಉಂಟಾಗಿಲ್ಲ. ಸದ್ಯ ಲಂಕಾ ಪ್ರೀಮಿಯರ್ ಲೀಗ್​ ಹಾವುಗಳ ಎಂಟ್ರಿಯೊಂದಿಗೆ ಸಖತ್ ಸುದ್ದಿಯಾಗುತ್ತಿರುವುದು ವಿಶೇಷ.

ಇದಕ್ಕೂ ಮುನ್ನ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಗಾಲೆ ಟೈಟಾನ್ಸ್ ವಿರುದ್ಧ ಡಂಬುಲ್ಲಾ ಔರಾ ತಂಡಗಳ ನಡುವಿನ ಪಂದ್ಯದ ವೇಳೆಯೂ ಹಾವು ಕಾಣಿಸಿಕೊಂಡಿತ್ತು. ಇದರಿಂದ ಕೆಲ ಕಾಲ ಪಂದ್ಯವನ್ನು ಸ್ಥಗಿತಗೊಳಿಸಲಾಗಿತ್ತು.

View this post on Instagram

A post shared by FanCode (@fancode)

ಆ ಬಳಿಕ ಮೈದಾನಕ್ಕೆ ಎಂಟ್ರಿ ಕೊಟ್ಟಿದ್ದ ನಾಲ್ಕನೇ ಅಂಪೈರ್ ಹಾವನ್ನು ಹೊರಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದರು. ಆ ನಂತರವಷ್ಟೇ ಪಂದ್ಯವನ್ನು ಮುಂದುವರೆಸಲಾಗಿತ್ತು. ಇದೀಗ ಇದೇ ಮೈದಾನದಲ್ಲಿ ಮತ್ತೊಮ್ಮೆ ಹಾವು ಕಾಣಿಸಿಕೊಂಡಿರುವುದು ವಿಶೇಷ.

ಬಿ-ಲವ್ ಕ್ಯಾಂಡಿ ತಂಡಕ್ಕೆ ಜಯ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಿ-ಲವ್ ಕ್ಯಾಂಡಿ ಪರ ಆರಂಭಿಕ ಆಟಗಾರ ಮೊಹಮ್ಮದ್ ಹ್ಯಾರಿಸ್ 51 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 81 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಬಿ-ಲವ್ ಕ್ಯಾಂಡಿ ತಂಡವು ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು.

179 ರನ್​ಗಳ ಗುರಿ ಪಡೆದ ಜಾಫ್ನಾ ಕಿಂಗ್ಸ್​ ಶೊಯೇಬ್ ಮಲಿಕ್ 37 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 55 ರನ್ ಬಾರಿಸಿದರು. ಆದರೆ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಜಾಫ್ನಾ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 170 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಬಿ-ಲವ್ ಕ್ಯಾಂಡಿ ತಂಡ 8 ರನ್​ಗಳ ರೋಚಕ ಜಯ ಸಾಧಿಸಿತು.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ