AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಬೌಲರ್​ಗಳನ್ನು ಸೌತ್ ಆಫ್ರಿಕಾಗೆ ಕಳುಹಿಸಲಿರುವ LSG

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಮಿನಿ ಹರಾಜಿಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಲಕ್ನೋ ಸೂಪರ್ ಜೈಂಟ್ಸ್ ಆಕ್ಷನ್ ಮೂಲಕ 6 ಆಟಗಾರರನ್ನು ಖರೀದಿಸಿದೆ. ಅದರಂತೆ ಮುಂಬರುವ ಸೀಸನ್​ನಲ್ಲಿ ಶ್ರೀಲಂಕಾದ ವನಿಂದು ಹಸರಂಗ, ಸೌತ್ ಆಫ್ರಿಕಾದ ಅನ್ರಿಕ್ ನೋಕಿಯ, ಆಸ್ಟ್ರೇಲಿಯಾದ ಜೋಶ್ ಇಂಗ್ಲಿಸ್ LSG ಪರ ಕಣಕ್ಕಿಳಿಯಲಿದ್ದಾರೆ.

ಭಾರತೀಯ ಬೌಲರ್​ಗಳನ್ನು ಸೌತ್ ಆಫ್ರಿಕಾಗೆ ಕಳುಹಿಸಲಿರುವ LSG
LSG
ಝಾಹಿರ್ ಯೂಸುಫ್
|

Updated on: Dec 23, 2025 | 10:24 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನೂ ಮೂರು ತಿಂಗಳುಗಳಿವೆ. ಅದಕ್ಕೂ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ಸಿದ್ಧತೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸೌತ್ ಆಫ್ರಿಕಾ ಟಿ20 ಲೀಗ್​ ಅನ್ನು ವೇದಿಕೆಯಾಗಿ ಬಳಸಿಕೊಳ್ಳಲು ಮುಂದಾಗಿದೆ. ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಡರ್ಬನ್ ಸೂಪರ್ ಜೈಂಟ್ಸ್ ತಂಡ ಕಣಕ್ಕಿಳಿಯುತ್ತಿದೆ.

ಈ ತಂಡದ ಅಭ್ಯಾಸಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿರುವ ಭಾರತೀಯ ಬೌಲರ್​ಗಳನ್ನು ಬಳಸಿಕೊಳ್ಳಲು LSG ಪ್ಲ್ಯಾನ್ ರೂಪಿಸಿದೆ. ಇದಕ್ಕಾಗಿ ಈಗಾಗಲೇ ಬಿಸಿಸಿಐ ಕಡೆಯಿಂದ ಅನುಮತಿ ಪಡೆದಿದ್ದು, ಭಾರತೀಯ ಬೌಲರ್​ಗಳನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ವರದಿಯಾಗಿದೆ.

ಸೌತ್ ಆಫ್ರಿಕಾದಲ್ಲಿ ಭಾರತೀಯ ವೇಗಿಗಳು:

ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿರುವ ವೇಗಿಗಳಾದ ಅವೇಶ್ ಖಾನ್, ನಮನ್ ತಿವಾರಿ ಹಾಗೂ ಮೊಹ್ಸಿನ್ ಖಾನ್ ಸೇರಿದಂತೆ ಕೆಲ ಆಟಗಾರರನ್ನು LSG ಸೌತ್ ಆಫ್ರಿಕಾಗೆ ಕಳುಹಿಸಲಿದೆ. ಈ ಆಟಗಾರರು ಡರ್ಬನ್ ಸೂಪರ್ ಜೈಂಟ್ಸ್ ತಂಡದ ಜೊತೆ ಕಾಣಿಸಿಕೊಳ್ಳಲಿದ್ದಾರೆ.

ಅಂದರೆ ಡರ್ಬನ್ ಸೂಪರ್ ಜೈಂಟ್ಸ್ ತಂಡದ ಅಭ್ಯಾಸದ ವೇಳೆ ಈ ಆಟಗಾರರು ಕೂಡ ಅಭ್ಯಾಸ ನಡೆಸಲಿದ್ದಾರೆ. ಅದರಲ್ಲೂ ನೆಟ್ಸ್​ನಲ್ಲಿ ಪ್ರಮುಖ ವೇಗಿಗಳಾಗಿ ಬೆವರಿಳಿಸಲಿದ್ದಾರೆ. ಈ ಮೂಲಕ ಐಪಿಎಲ್​ಗಾಗಿ ತಯಾರಿ ನಡೆಸಲು ಲಕ್ನೋ ಸೂಪರ್ ಜೈಂಟ್ಸ್ ಭರ್ಜರಿ ಪ್ಲ್ಯಾನ್ ರೂಪಿಸಿದೆ.

ಎಲ್​ಎಸ್​ಜಿ ತಂಡಕ್ಕೆ 6 ಆಟಗಾರರ ಎಂಟ್ರಿ:

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಮಿನಿ ಹರಾಜಿಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಲಕ್ನೋ ಸೂಪರ್ ಜೈಂಟ್ಸ್ ಆಕ್ಷನ್ ಮೂಲಕ 6 ಆಟಗಾರರನ್ನು ಖರೀದಿಸಿದೆ. ಅದರಂತೆ ಮುಂಬರುವ ಸೀಸನ್​ನಲ್ಲಿ ಶ್ರೀಲಂಕಾದ ವನಿಂದು ಹಸರಂಗ, ಸೌತ್ ಆಫ್ರಿಕಾದ ಅನ್ರಿಕ್ ನೋಕಿಯ, ಆಸ್ಟ್ರೇಲಿಯಾದ ಜೋಶ್ ಇಂಗ್ಲಿಸ್, ಭಾರತದ  ಮುಕುಲ್ ಚೌಧರಿ, ಅಕ್ಷತ್ ರಘುವಂಶಿ, ನಮನ್ ತಿವಾರಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ: ಒಂದೇ ವರ್ಷದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಡಫಿ

ಲಕ್ನೋ ಸೂಪರ್ ಜೈಂಟ್ಸ್ ತಂಡ: ರಿಷಭ್ ಪಂತ್ (ನಾಯಕ), ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ಮಯಾಂಕ್ ಯಾದವ್, ಅಬ್ದುಲ್ ಸಮದ್, ಆಯುಷ್ ಬದೋನಿ, ಮ್ಯಾಥ್ಯೂ ಬ್ರೀಟ್ಝ್​ಕೆ, ಹಿಮ್ಮತ್ ಸಿಂಗ್, ನಿಕೋಲಸ್ ಪೂರನ್, ಶಹಬಾಝ್ ಅಹ್ಮದ್, ಅರ್ಶಿನ್ ಕುಲಕರ್ಣಿ, ಮಯಾಂಕ್ ಯಾದವ್, ಅವೇಶ್ ಖಾನ್, ಮೊಹ್ಸಿನ್ ಖಾನ್, ಪ್ರಿನ್ಸ್ ಯಾದವ್, ಮೊಹಮ್ಮದ್ ಶಮಿ, ಅರ್ಜುನ್ ತೆಂಡೂಲ್ಕರ್, ಜೋಶ್ ಇಂಗ್ಲಿಸ್, ಮುಕುಲ್ ಚೌಧರಿ, ವನಿಂದು ಹಸರಂಗ, ಅನ್ರಿಕ್ ನೋಕಿಯ, ಅಕ್ಷತ್ ರಘುವಂಶಿ, ನಮನ್ ತಿವಾರಿ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?