AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಭಾರತದಲ್ಲಿ ಮಾನ್ಸೂನ್ ಅಬ್ಬರ; ಆರ್​ಸಿಬಿ- ಲಕ್ನೋ ಪಂದ್ಯಕ್ಕಿದೆಯಾ ಮಳೆಯ ಆತಂಕ?

LSG vs RCB IPL 2025 Match 70 Weather Report: ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಐಪಿಎಲ್ 2025ರ 70ನೇ ಪಂದ್ಯ ನಡೆಯಲಿದೆ. ಏಕಾನಾ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿದೆ. ಹವಾಮಾನ ಸ್ಪಷ್ಟವಾಗಿದ್ದು, ಮಳೆಯ ಸಾಧ್ಯತೆಗಳಿಲ್ಲ. ಬೆಂಗಳೂರು ಪ್ಲೇಆಫ್ ಖಚಿತಪಡಿಸಿಕೊಂಡಿದ್ದರೆ, ಲಕ್ನೋ ತನ್ನ ಸ್ಥಾನವನ್ನು ಉತ್ತಮಪಡಿಸಲು ಹೋರಾಡುತ್ತಿದೆ.

IPL 2025: ಭಾರತದಲ್ಲಿ ಮಾನ್ಸೂನ್ ಅಬ್ಬರ; ಆರ್​ಸಿಬಿ- ಲಕ್ನೋ ಪಂದ್ಯಕ್ಕಿದೆಯಾ ಮಳೆಯ ಆತಂಕ?
ಲಕ್ನೋ ಹವಾಮಾನ
ಪೃಥ್ವಿಶಂಕರ
|

Updated on:May 26, 2025 | 11:13 PM

Share

ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (LSG vs RCB) ನಡುವಿನ ಐಪಿಎಲ್ 2025  (IPL 2025)ರ 70 ನೇ ಪಂದ್ಯವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಬೆಂಗಳೂರು ತಂಡ ಈಗಾಗಲೇ ಪ್ಲೇಆಫ್ ತಲುಪಿದೆ ಆದರೆ ಈ ಪಂದ್ಯವನ್ನು ಗೆಲ್ಲುವ ಮೂಲಕ ಅಗ್ರ 2 ರಲ್ಲಿ ಸ್ಥಾನ ಪಡೆಯಲು ಬಯಸಿದೆ. ಇತ್ತ ಲಕ್ನೋಗೂ ಇದು ಕೊನೆಯ ಪಂದ್ಯವಾಗಿದ್ದು, ಈ ಪಂದ್ಯ ಸೋಲು ಅಥವಾ ಗೆಲುವು ಪಾಯಿಂಟ್ ಪಟ್ಟಿಯಲ್ಲಿ ತಂಡವನ್ನು ಸ್ಥಾನವನ್ನು ಬದಲಿಸುವಲ್ಲಿ ನೆರವಾಗಲಿದೆ. ಇದನ್ನು ಹೊರತುಪಡಿಸಿ ಲಕ್ನೋ ತಂಡಕ್ಕೆ ಇದು ಕೇವಲ ಔಪಚಾರಿಕವಾಗಿದೆ. ಈ ಪಂದ್ಯಕ್ಕೂ ಮುನ್ನ ಏಕಾನಾ ಪಿಚ್‌ ಹೇಗಿರುತ್ತದೆ? ಪಂದ್ಯಕ್ಕೆ ಮಳೆ ಅಡ್ಡಿಪಡಿಸುತ್ತಾ ಎಂಬುದನ್ನು ನೋಡೋಣ

ಏಕಾನಾ ಪಿಚ್ ಹೇಗಿರುತ್ತದೆ?

ಲಕ್ನೋದ ಏಕಾನಾ ಕ್ರೀಡಾಂಗಣದ ಮೇಲ್ಮೈ ಸಾಮಾನ್ಯವಾಗಿ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿರುತ್ತದೆ. ಮೊದಲು, ಇದು ಸ್ಪಿನ್ನರ್‌ಗಳ ಸ್ವರ್ಗವಾಗಿತ್ತು ಆದರೆ ಇತ್ತೀಚಿನ ದಿನಗಳಲ್ಲಿ ಪಿಚ್​ನ ಸ್ವರೂಪ ಬಹಳಷ್ಟು ಬದಲಾಗಿದೆ. ಇಲ್ಲಿ ಮೊದಲು ಬೌಲಿಂಗ್ ಮಾಡುವುದು ಸೂಕ್ತವಾಗಿದ್ದು, 190 ಕ್ಕಿಂತ ಹೆಚ್ಚಿನ ರನ್‌ ಕಲೆಹಾಕಿದರೆ ಗೆಲುವಿಗೆ ಸನಿಹವಾಗಬಹುದು. ಎರಡೂ ತಂಡಗಳ ಬ್ಯಾಟಿಂಗ್ ಘಟಕವು ತುಂಬಾ ಬಲಿಷ್ಠವಾಗಿರುವುದರಿಂದ ಅಭಿಮಾನಿಗಳು ಹೆಚ್ಚಿನ ಸ್ಕೋರಿಂಗ್ ಪಂದ್ಯವನ್ನು ವೀಕ್ಷಿಸಬಹುದು.

ಲಕ್ನೋ ಹವಾಮಾನ ವರದಿ

ಅಕ್ಯೂವೆದರ್ ವರದಿಯ ಪ್ರಕಾರ, ಲಕ್ನೋದಲ್ಲಿ ಶುಕ್ರವಾರ ಹವಾಮಾನವು ಸಂಪೂರ್ಣವಾಗಿ ಸ್ಪಷ್ಟವಾಗಿರುತ್ತದೆ. ಟಾಸ್ ನಡೆಯುವ ವೇಳೆಗೆ ತಾಪಮಾನವು ಸುಮಾರು 33 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗುವ ಸಾಧ್ಯತೆಯಿದೆ. ಪಂದ್ಯ ಮುಂದುವರೆದಂತೆ, ರಾತ್ರಿಯ ಸಮಯದಲ್ಲಿ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬರಬಹುದು, ಇದು ಆಟಗಾರರಿಗೆ ಸ್ವಲ್ಪ ಸಮಾಧಾನವನ್ನು ನೀಡುತ್ತದೆ. ಒಳ್ಳೆಯ ಸುದ್ದಿ ಏನೆಂದರೆ ಪಂದ್ಯದುದ್ದಕ್ಕೂ ಮಳೆ ಬರುವ ಸಾಧ್ಯತೆ ಇಲ್ಲ. ಹೀಗಾಗಿ ಅಭಿಮಾನಿಗಳು ಪೂರ್ಣ 40 ಓವರ್‌ಗಳ ಪಂದ್ಯವನ್ನು ವೀಕ್ಷಿಸಬಹುದು.

IPL 2025: ಇಬ್ಬರು ತಂಡದಿಂದ ಔಟ್, ಇನ್ನಿಬ್ಬರಿಗೆ ಇಂಜುರಿ; ಹೇಗಿರಲಿದೆ ಆರ್​ಸಿಬಿ ಪ್ಲೇಯಿಂಗ್ 11?

ಏಕಾನಾ ಕ್ರೀಡಾಂಗಣದಲ್ಲಿ ಐಪಿಎಲ್ ದಾಖಲೆ

ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದುವರೆಗೆ ಒಟ್ಟು 21 ಐಪಿಎಲ್ ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟ್ ಮಾಡಿದ ತಂಡ 9 ಪಂದ್ಯಗಳನ್ನು ಗೆದ್ದಿದ್ದರೆ, ಗುರಿಯನ್ನು ಬೆನ್ನಟ್ಟಿದ ತಂಡ 11 ಪಂದ್ಯಗಳನ್ನು ಗೆದ್ದಿದೆ.

ಹೆಡ್ ಟು ಹೆಡ್ ರೆಕಾರ್ಡ್

ಐಪಿಎಲ್‌ನಲ್ಲಿ ಇಲ್ಲಿಯವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ 5 ಪಂದ್ಯಗಳು ನಡೆದಿದ್ದು, ಆರ್‌ಸಿಬಿ ತಂಡ 3 ಪಂದ್ಯಗಳನ್ನು ಗೆದ್ದರೆ, ಲಕ್ನೋ ಸೂಪರ್ ಜೈಂಟ್ಸ್ ಎರಡು ಪಂದ್ಯಗಳನ್ನು ಗೆದ್ದಿದೆ. ಇಬ್ಬರ ನಡುವಿನ ಕೊನೆಯ ಪಂದ್ಯ 2024 ರಲ್ಲಿ ನಡೆದಿತ್ತು. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:12 pm, Mon, 26 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ