AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG vs RCB, IPL 2025: ಇಂದು ಆರ್​ಸಿಬಿ- ಲಕ್ನೋ ಪಂದ್ಯ ನಡೆಯುತ್ತ, ಇಲ್ವಾ?, ಇಲ್ಲಿದೆ ನೋಡಿ ಮಾಹಿತಿ

What Happend with LSG vs RCB Match: ಭಾರತ- ಪಾಕಿಸ್ತಾನ ಉದ್ವಿಗ್ನ ವಾತಾವರಣದ ನಡುವೆ, ಮೇ 9 ರಂದು ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಕುರಿತು ಈಗ ಒಂದು ದೊಡ್ಡ ಸುದ್ದಿ ಬಂದಿದೆ. ಈ ಪಂದ್ಯವು ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

LSG vs RCB, IPL 2025: ಇಂದು ಆರ್​ಸಿಬಿ- ಲಕ್ನೋ ಪಂದ್ಯ ನಡೆಯುತ್ತ, ಇಲ್ವಾ?, ಇಲ್ಲಿದೆ ನೋಡಿ ಮಾಹಿತಿ
Lsg Vs Rcb Ind Pak War
Vinay Bhat
|

Updated on: May 09, 2025 | 8:29 AM

Share

ಬೆಂಗಳೂರು (ಮೇ. 09): ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ 2025 ರ (Indian Premier League) 58 ನೇ ಪಂದ್ಯವನ್ನು ರದ್ದುಗೊಳಿಸಲಾಯಿತು. ಈ ಪಂದ್ಯವು ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿತ್ತು. ಪಂದ್ಯದ ಸಮಯದಲ್ಲಿ, ಕ್ರೀಡಾಂಗಣದಲ್ಲಿನ ಫ್ಲಡ್ ಲೈಟ್‌ಗಳಲ್ಲಿ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದಾದ ನಂತರ, ಭದ್ರತಾ ಕಾರಣಗಳಿಗಾಗಿ ಧರ್ಮಶಾಲಾದಲ್ಲಿ ವಿದ್ಯುತ್ ಕಡಿತಗೊಳಿಸಲಾಯಿತು. ಅಂತಿಮವಾಗಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಆಟಗಾರರು ಮತ್ತು ಪ್ರೇಕ್ಷಕರನ್ನು ತಕ್ಷಣವೇ ಕ್ರೀಡಾಂಗಣದಿಂದ ಸ್ಥಳಾಂತರಿಸಲಾಯಿತು.

ಗುರುವಾರ ಸಂಜೆ, ಪಾಕಿಸ್ತಾನವು ಭಾರತದ ಗಡಿ ಪ್ರದೇಶಗಳಲ್ಲಿ ಭಾರೀ ಬಾಂಬ್ ದಾಳಿ ಮತ್ತು ಡ್ರೋನ್ ದಾಳಿಗಳನ್ನು ನಡೆಸಿತು, ಇದನ್ನು ಭಾರತೀಯ ಸೇನೆಯು ತಕ್ಷಣವೇ ವಿಫಲಗೊಳಿಸಿತು. ಈ ಘಟನೆಯಿಂದಾಗಿ, ಗಡಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಹೇರಲಾಯಿತು. ಇದರಿಂದಾಗಿ ಧರ್ಮಶಾಲಾದಲ್ಲಿ ವಿದ್ಯುತ್ ಸರಬರಾಜು ಕೂಡ ವ್ಯತ್ಯಯಗೊಂಡಿತ್ತು. ಈ ಉದ್ವಿಗ್ನ ವಾತಾವರಣದ ನಡುವೆ, ಮೇ 9 ರಂದು ಲಕ್ನೋ ಸೂಪರ್‌ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದ ಕುರಿತು ಈಗ ಒಂದು ದೊಡ್ಡ ಸುದ್ದಿ ಬಂದಿದೆ.

ಈ ಪಂದ್ಯವು ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ:

ಲಕ್ನೋ ಮತ್ತು ಆರ್‌ಸಿಬಿ ನಡುವಿನ ಈ ಪಂದ್ಯವು ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯ ರದ್ದಾದ ನಂತರ, ಲಕ್ನೋ ಮತ್ತು ಆರ್‌ಸಿಬಿ ಪಂದ್ಯದ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಕೂಡ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
ಭಾರತದ ದಾಳಿಗೆ ಪಾಕಿಸ್ತಾನ್ ಸೂಪರ್ ಲೀಗ್ ತತ್ತರ; ಪಾಕ್​ನಿಂದ ಎತ್ತಂಗಡಿ
Image
ಐಪಿಎಲ್ 2025 ರ ಉಳಿದ ಪಂದ್ಯಗಳು ಮರು ನಿಗದಿ ಸಾಧ್ಯತೆ
Image
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
Image
ಪಂಜಾಬ್-ಡೆಲ್ಲಿ ನಡುವಿನ ಐಪಿಎಲ್ ಪಂದ್ಯ ರದ್ದು

IPL 2025: ತುರ್ತು ಸಭೆ ನಡೆಸಿದ ಬಿಸಿಸಿಐ; ಐಪಿಎಲ್ ಉಳಿದ ಪಂದ್ಯಗಳು ಮರು ನಿಗದಿ?

ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಐಪಿಎಲ್ ಆಡಳಿತ ಮಂಡಳಿಯ ಸಭೆ ನಡೆಯಿತು. ಆದಾಗ್ಯೂ, ಲಕ್ನೋ ಮತ್ತು ಆರ್‌ಸಿಬಿ ನಡುವಿನ ಪಂದ್ಯದ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತು ಐಪಿಎಲ್ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಇದಕ್ಕೂ ಮೊದಲು, ಅರುಣ್ ಧುಮಾಲ್ ಅವರು ಭಾರತ ಸರ್ಕಾರದ ಸೂಚನೆಗಳಿಗಾಗಿ ಕಾಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದರು. ಸರ್ಕಾರದಿಂದ ಯಾವುದೇ ಆದೇಶ ಬಂದರೂ ಅದನ್ನು ಪಾಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ, ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿದೆ. ಪಂದ್ಯವು ಮೇ 11 ರಂದು ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ. ಅದೇ ದಿನ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯವೂ ಅನುಮಾನಾಸ್ಪದವಾಗಿದೆ. ಇದಲ್ಲದೆ, ಮೇ 16 ರಂದು ಜೈಪುರದಲ್ಲಿ ನಡೆಯಲಿರುವ ಪಂದ್ಯದ ಬಗ್ಗೆ ಬಿಸಿಸಿಐ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಬಹುದು.

ಲೈಟ್ ಆಫ್​ ಆದಾಗ ಪಂಜಾಬ್ 10.1 ಓವರ್‌ಗಳಲ್ಲಿ ಒಂದು ವಿಕೆಟ್‌ಗೆ 122 ರನ್ ಗಳಿಸಿತ್ತು. ಮಳೆಯಿಂದಾಗಿ ಪಂದ್ಯ ನಿಗದಿತ ಸಮಯಕ್ಕಿಂತ ತಡವಾಗಿ ಆರಂಭವಾಯಿತು. ಅಂತಿಮವಾಗಿ ತಂಡಗಳು ಮತ್ತು ಪ್ರೇಕ್ಷಕರನ್ನು ಅವರ ಸುರಕ್ಷತೆಗಾಗಿ ಕ್ರೀಡಾಂಗಣದಿಂದ ಸ್ಥಳಾಂತರಿಸಲಾಯಿತು. ಈ ಸುಂದರವಾದ ಮೈದಾನವು ಸುಮಾರು 23,000 ಸಾಮರ್ಥ್ಯವನ್ನು ಹೊಂದಿದ್ದು, ಸ್ಥಳಾಂತರಿಸುವ ಸಮಯದಲ್ಲಿ ಸುಮಾರು 80 ಪ್ರತಿಶತದಷ್ಟು ತುಂಬಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!