LSG vs RCB, IPL 2023: ಐಪಿಎಲ್ನಲ್ಲಿಂದು ಆರ್ಸಿಬಿ ಪಂದ್ಯ: ಲಖನೌ ವಿರುದ್ಧದ ಪಂದ್ಯಕ್ಕೆ ಮಾಡಿದೆ ಮಾಸ್ಟರ್ ಪ್ಲಾನ್
Lucknow vs Bangalore: ಐಪಿಎಲ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಅನ್ನು ಎದುರಿಲಿದೆ. ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2023) ಫಾಪ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ (LSG vs RCB) ಅನ್ನು ಎದುರಿಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದ್ದು, ಹೈವೋಲ್ಟೇಜ್ ಕದನ ನಿರೀಕ್ಷಿಸಲಾಗಿದೆ. ಆರ್ಸಿಬಿ ಆಡಿದ ಎಂಟು ಪಂದ್ಯಗಳಲ್ಲಿ ತಲಾ ನಾಲ್ಕು ಗೆಲುವು-ಸೋಲು ಕಂಡು ಆರನೇ ಸ್ಥಾನದಲ್ಲಿದ್ದರೆ ಲಖನೌ ಐದು ಗೆಲುವು, ಮೂರು ಸೋಲುಂಡು ದ್ವಿತೀಯ ಸ್ಥಾನದಲ್ಲಿದೆ.
ಆರ್ಸಿಬಿ:
ಆರ್ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಬದಲಾವಣೆ ಅಥವಾ ಹೊಸ ಯೋಜನೆ ರೂಪಿಸಬೇಕಿದೆ. ಯಾಕೆಂದರೆ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಬಿಟ್ಟರೆ ಆರ್ಸಿಬಿ ಪರ ಮತ್ಯಾವ ಬ್ಯಾಟರ್ಗಳು ಕೂಡ ಮಿಂಚುತ್ತಿಲ್ಲ. ಈ ಮೂವರ ಮೇಲೆ ಆರ್ಸಿಬಿ ಸಂಪೂರ್ಣ ಅವಲಂಬಿತವಾಗಿದೆ. ಕೊಹ್ಲಿ, ಫಾಫ್, ಮ್ಯಾಕ್ಸಿ ಬೇಗನೆ ಔಟಾದರೆ ತಂಡದ ಮೊತ್ತ 100ರ ಗಟಿ ದಾಟುವುದು ಅನುಮಾನ. ಹೀಗಾಗಿ ಬ್ಯಾಟಿಂಗ್ನಲ್ಲಿ ಓರ್ವ ಪ್ಲೇಯರ್ ಬರಬೇಕಿದೆ. ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಮಿಂಚಿದ್ದ ಮಿಚೆಲ್ ಬ್ರೇಸ್ವೆಲ್ಗೆ ಅವಕಾಶ ಸಿಗುತ್ತಾ ನೋಡಬೇಕಿದೆ.
IPL 2023: LSG ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ RCB?
ಬೌಲಿಂಗ್ನಲ್ಲಿ ಆರ್ಸಿಬಿ ಮಾರಕವಾಗಿ ಗೋಚರಿಸುತ್ತಿಲ್ಲ. ಪರ್ಪಲ್ ಕ್ಯಾಪ್ ತೊಟ್ಟಿರುವ ಮೊಹಮ್ಮದ್ ಸಿರಾಜ್ ಮಾತ್ರ ಅಪಾಯಕಾರಿ ಆಗಿದ್ದಾರೆ. ಹರ್ಷಲ್ ಪಟೇಲ್ ಪದೇ ಪದೇ ದುಬಾರಿ ಆಗುತ್ತಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯ ಕಾರಣ ಐಪಿಎಲ್ನ ಮೊದಲಾರ್ಧದಿಂದ ಹೊರಗುಳಿದಿದ್ದ ಆರ್ಸಿಬಿ ವೇಗಿ ಜೋಶ್ ಹ್ಯಾಜಲ್ವುಡ್ ಇದೀಗ ಸಂಪೂರ್ಣ ಫಿಟ್ ಆಗಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಬಹುದು. ಹ್ಯಾಜಲ್ವುಡ್ ಪ್ಲೇಯಿಂಗ್ ಇಲೆವೆನ್ನ ಭಾಗವಾದರೆ ತಂಡದಿಂದ ಡೇವಿಡ್ ವಿಲ್ಲಿ ಅಥವಾ ವನಿಂದು ಹಸರಂಗ ಹೊರಗುಳಿಯಬೇಕಾಗಬಹುದು.
ಲಖನೌ:
ಲಖನೌ ತಂಡ ಬ್ಯಾಟಿಂಗ್ನಲ್ಲಿ ಅತ್ಯಂತ ಬಲಿಷ್ಠವಾಗಿದೆ. ತಂಡದ ನಾಯಕ ಕೆಎಲ್ ರಾಹುಲ್ ಕಳಪೆ ಆಟ ಆಡುತ್ತಿದ್ದರೂ ತಂಡಕ್ಕೆ ಮಾತ್ರ ಯಾವುದೇ ಹೊಡೆತ ಬೀಳುತ್ತಿಲ್ಲ. ಎಲ್ಎಸ್ಜಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಪಂದ್ಯವನ್ನು ಗೆಲ್ಲಿಸಿಕೊಡುತ್ತಿದ್ದಾರೆ. ಹಿಂದಿನ ಪಂದ್ಯದಲ್ಲಿ ಪಂಜಾಬ್ ವಿರುದ್ಧ ದಾಖಲೆಯ 257 ರನ್ ಸಿಡಿಸಿದ್ದರು.
ಖೈಲ್ ಮೇಯರ್ಸ್ ತಂಡಕ್ಕೆ ಭರ್ಜರಿ ಆರಂಭ ಒದಗಿಸುತ್ತಿದ್ದಾರೆ. ಆಯುಷ್ ಬದೋನಿ, ಮಾರ್ಕಸ್ ಸ್ಟಾಯಿನಿಸ್ ಹಾಗೂ ನಿಕೋಲಸ್ ಪೂರನ್ ಮಧ್ಯಮ ಕ್ರಮಾಂಕದ ಬಲವಾಗಿದ್ದು ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸುತ್ತಿದ್ದಾರೆ. ದೀಪಕ್ ಹೂಡ ಕಡೆಯಿಂದ ಇನ್ನಷ್ಟು ಉತ್ತಮ ಆಟ ಬರಬೇಕಿದೆ. ಕ್ರುನಾಲ್ ಪಾಂಡ್ಯ ಕೂಡ ಆಲ್ರೌಂಡ್ ಪ್ರದರ್ಶನ ತೋರಬೇಕಿದೆ. ಬೌಲಿಂಗ್ನಲ್ಲಿ ನವೀನ್ ಉಲ್ ಹಖ್, ಆವೇಶ್ ಖಾನ್, ರವಿ ಬಿಷ್ಟೋಯಿ ಹಾಗೂ ಅಮಿತ್ ಮಿಶ್ರಾ ಉತ್ತಮ ಫಾರ್ಮ್ನಲ್ಲಿದ್ದಾರೆ.
ಆರ್ಸಿಬಿ ತಂಡ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೊರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲಿ, ವೇಯ್ನ್ ಪಾರ್ನೆಲ್, ಹಿಮಾಂಶು ಶರ್ಮಾ, ಮನೋಜ್ ಬಾಂಢಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಮಿಚೆಲ್ ಬ್ರೇಸ್‌ವೆಲ್.
ಲಖನೌ ತಂಡ: ಕೆಎಲ್ ರಾಹುಲ್ (ನಾಯಕ), ಖೈಲ್ ಮೇಯರ್ಸ್, ದೀಪಕ್ ಹೂಡಾ, ಕ್ರುನಾಲ್ ಪಾಂಡ್ಯ, ಮಾರ್ಕಸ್ ಸ್ಟೋಯಿನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಮಾರ್ಕ್ ವುಡ್, ಜಯದೇವ್ ಉನಾದ್ಕಟ್, ರವಿ ಬಿಷ್ಣೋಯ್, ಅವೇಶ್ ಖಾನ್, ಕೃಷ್ಣಪ್ಪ ಗೌತಮ್, ಪ್ರೇರಕ್ ಮಂಕಡ್, ಸ್ವಪ್ನಿಲ್ ಸಿಂಗ್, ನವೀನ್-ಉಲ್-ಹಕ್, ಯಶ್ ಠಾಕೂರ್, ಡೇನಿಯಲ್ ಸಾಮ್ಸ್, ರೊಮಾರಿಯೋ ಶೆಫರ್ಡ್, ಯುದ್ವೀರ್ ಸಿಂಗ್ ಚರಕ್, ಮಯಾಂಕ್ ಯಾದವ್, ಅಮಿತ್ ಮಿಶ್ರಾ, ಮನನ್ ವೋಹ್ರಾ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:30 am, Mon, 1 May 23