IPL 2023 Points Table: 257 ರನ್ ಸಿಡಿಸಿದರೂ ಅಗ್ರಸ್ಥಾನಕ್ಕೇರದ ಲಖನೌ: ಐಪಿಎಲ್ 2023 ಪಾಯಿಂಟ್ ಟೇಬಲ್​ನ ಸಂಪೂರ್ಣ ಮಾಹಿತಿ ಇಲ್ಲಿದೆ

Orange-Purple Cap IPL 2023: ಪಂಜಾಬ್-ಎಲ್​ಎಸ್​ಜಿ ಪಂದ್ಯದ ಬಳಿಕ ಪಾಯಿಂಟ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL 2023 Points Table: 257 ರನ್ ಸಿಡಿಸಿದರೂ ಅಗ್ರಸ್ಥಾನಕ್ಕೇರದ ಲಖನೌ: ಐಪಿಎಲ್ 2023 ಪಾಯಿಂಟ್ ಟೇಬಲ್​ನ ಸಂಪೂರ್ಣ ಮಾಹಿತಿ ಇಲ್ಲಿದೆ
Lucknow Super Giants
Follow us
Vinay Bhat
|

Updated on:Apr 29, 2023 | 1:18 PM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿಯಲ್ಲಿ 38 ಪಂದ್ಯಗಳು ಮುಕ್ತಾಯಗೊಂಡಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಎದುರಾಳಿಗೆ 200+ ಟಾರ್ಗೆಟ್ ನೀಡಿದರೂ ಚೇಸ್ ಮಾಡಿ ಗೆಲುವು ಸಾಧಿಸುವುದು ಈ ಬಾರಿಯ ಟೂರ್ನಿಯಲ್ಲಿ ಸಾಮಾನ್ಯವಾಗುತ್ತಿದೆ. ಶುಕ್ರವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜೇಂಟ್ಸ್ ತಂಡ 56 ರನ್​ಗಳ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಎಲ್​ಎಸ್​ಜಿ ದಾಖಲೆಯ 257 ರನ್ ಕಲೆಹಾಕಿತು. ಹಾಗಾದರೆ, ಪಂಜಾಬ್-ಎಲ್​ಎಸ್​ಜಿ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ರನ್​ರೇಟ್​ನೊಂದಿಗೆ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಆಡಿದ ಎಂಟು ಪಂದ್ಯಗಳಲ್ಲಿ ಐದು ಗೆಲುವು, ಮೂರರಲ್ಲಿ ಸೋಲುಂಡು +0.939 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ದಾಖಲೆಯ ರನ್ ಕಲೆಹಾಕಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ ಲಖನೌ ಸೂಪರ್ ಜೇಂಟ್ಸ್ ತಂಡ ದ್ವಿತೀಯ ಸ್ಥಾನಕ್ಕೇರಿದೆ. ಆಡಿದ ಎಂಟು ಪಂದ್ಯಗಳಲ್ಲಿ ಐದು ಗೆಲುವು, ಮೂರು ಸೋಲು ಕಂಡು 10 ಅಂಕ ಸಂಪಾದಿಸಿ +0.841 ರನ್​ರೇಟ್​ ಹೊಂದಿದೆ.
  • ಗುಜರಾತ್ ಟೈಟಾನ್ಸ್ ತಂಡ ಮೂರನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಏಳು ಪಂದ್ಯಗಳಲ್ಲಿ ಐದು ಗೆಲುವು, ಎರಡು ಸೋಲುಂಡು +0.580 ರನ್​ರೇಟ್​ನೊಂದಿಗೆ 10 ಅಂಕ ಸಂಪಾದಿಸಿದೆ.
  • ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಮೂರರಲ್ಲಿ ಸೋಲು ಕಂಡು ಒಟ್ಟು 10 ಅಂಕ ಸಂಪಾದಿಸಿದೆ. +0.376 ರನ್​ರೇಟ್ ಹೊಂದಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯಗಳ ಪೈಕಿ ನಾಲ್ಕರಲ್ಲಿ ಗೆಲುವು ನಾಲ್ಕರಲ್ಲಿ ಸೋಲು ಕಂಡು 8 ಅಂಕ ಸಂಪಾದಿಸಿ -0.139 ರನ್​ರೇಟ್ ಹೊಂದಿದೆ.
  • ಪಂಜಾಬ್ ಕಿಂಗ್ಸ್ ಆಡಿದ ಎಂಟು ಪಂದ್ಯಗಳಲ್ಲಿ ತಲಾ ನಾಲ್ಕು ಸೋಲು-ನಾಲ್ಕು ಜಯ ಕಂಡು 8 ಅಂಕ ಹೊಂದಿ -0.510ರನ್​ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.
  • ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಏಳನೇ ಪ್ಲೇಸ್​ನಲ್ಲಿದೆ. ಆಡಿದ ಎಂಟು ಪಂದ್ಯಗಳಲ್ಲಿ ಮೂರು ಗೆಲುವು, ಐದರಲ್ಲಿ ಸೋಲುಂಡು -0.027 ರನ್​ರೇಟ್​ನೊಂದಿಗೆ 6 ಅಂಕ ಸಂಪಾದಿಸಿದೆ.
  • ಮುಂಬೈ ಇಂಡಿಯನ್ಸ್ ಎಂಟನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯದಲ್ಲಿ ಮೂರು ಸೋಲು, ನಾಲ್ಕು ಗೆಲುವು ಕಂಡು 6 ಅಂಕ ಸಂಪಾದಿಸಿ -0.620 ರನ್​ರೇಟ್ ಹೊಂದಿದೆ.
  • ಸನ್​ರೈಸರ್ಸ್ ಹೈದರಾಬಾದ್ ತಂಡ ಒಂಬತ್ತನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯದಲ್ಲಿ ಐದರಲ್ಲಿ ಸೋಲು ಎರಡರಲ್ಲಿ ಜಯ ಕಂಡು 4 ಅಂಕ ಸಂಪಾದಿಸಿ -0.725 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಕೊನೆಯ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳ ಪೈಕಿ ಕೇವಲ ಎರಡರಲ್ಲಷ್ಟೆ ಜಯ ಸಾಧಿಸಿ 4 ಅಂಕ ಸಂಪಾದಿಸಿ -0.961 ರನ್​ರೇಟ್ ಹೊಂದಿದೆ.

IPL 2023: ‘ನಿನ್ನ ಮದುವೆಯಲ್ಲಿ ಕುಣಿದು ಕುಪ್ಪಳಿಸುತ್ತೇನೆ’; ರಿಂಕು ಸಿಂಗ್​​ಗೆ ಕಿಂಗ್ ಖಾನ್ ಭರವಸೆ..!

ಆರೆಂಜ್ ಕ್ಯಾಪ್:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೆಸಿಸ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಎಂಟು ಪಂದ್ಯಗಳಲ್ಲಿ ಐದು ಅರ್ಧಶತಕ ಸಿಡಿಸಿ ಒಟ್ಟು 422 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು ಆಡಿದ 8 ಪಂದ್ಯಗಳಲ್ಲಿ 333 ರನ್ ಗಳಿಸಿದ್ದಾರೆ. ಇವರ ಖಾತೆಯಿಂದ 5 ಅರ್ಧಶತಕ ಬಂದಿದೆ. ಸಿಎಸ್​ಕೆ ತಂಡದ ಡೆವೊನ್ ಕಾನ್ವೇ ಮೂರನೇ ಸ್ಥಾನದಲ್ಲಿದ್ದು ಎಂಟು ಪಂದ್ಯಗಳಿಂದ 322 ರನ್ ಗಳಿಸಿದ್ದಾರೆ.

ಪರ್ಪಲ್ ಕ್ಯಾಪ್:

ಆರ್​ಸಿಬಿ ತಂಡದ ಮೊಹಮ್ಮದ್ ಸಿರಾಜ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಆಡಿದ ಎಂಟು ಪಂದ್ಯಗಳಿಂದ 14 ವಿಕೆಟ್ ಕಬಳಿಸಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದ ರಶೀದ್ ಖಾನ್ ದ್ವಿತೀಯ ಸ್ಥಾನದಲ್ಲಿದ್ದು ಆಡಿರುವ ಏಳು ಪಂದ್ಯಗಳಲ್ಲಿ 14 ವಿಕೆಟ್ ಪಡೆದುಕೊಂಡಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ಅರ್ಶ್​ದೀಪ್ ಸಿಂಗ್ ಎಂಟು ಪಂದ್ಯಗಳಿಂದ ಒಟ್ಟು 14 ವಿಕೆಟ್ ಕಿತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ
Image
KL Rahul: ದಾಖಲೆಯ 257 ರನ್ಸ್: ಪಂದ್ಯ ಮುಗಿದ ಬಳಿಕ ನಾಯಕ ಕೆಎಲ್ ರಾಹುಲ್ ಆಡಿದ ಮಾತುಗಳೇನು ಕೇಳಿ
Image
KKR vs GT, IPL 2023: ಐಪಿಎಲ್​ನಲ್ಲಿಂದು ಎರಡು ಪಂದ್ಯ: ಕೆಕೆಆರ್-ಗುಜರಾತ್ ನಡುವೆ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷೆ
Image
IPL 2023: ಐಪಿಎಲ್​​ನಲ್ಲಿ ದಾಖಲೆ ಬರೆದ ಲಕ್ನೋ; ಆದರೂ ಆರ್​ಸಿಬಿ ರೆಕಾರ್ಡ್​ ಮುರಿಯಲಾಗಲಿಲ್ಲ!
Image
IPL 2023: ಮೇಯರ್ಸ್​ ಸಿಡಿಲಬ್ಬರ; ಸಿಡಿದ 54 ರನ್​ಗಳಲ್ಲಿ 52 ರನ್ ಬೌಂಡರಿಗಳಿಂದಲೇ ಬಂದವು

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Sat, 29 April 23

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?